ಬೆಂಗಳೂರು | ಪೊಲೀಸರ ಸಮ್ಮುಖದಲ್ಲಿಯೇ ಕೊಲೆ ಆರೋಪಿಯ ಮನೆಗೆ ಬೆಂಕಿ

Date:

ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಬಂದೋಬಸ್ತ್‌ನಲ್ಲಿರುವಾಗಲೇ ಕೊಲೆ ಆರೋಪಿಯ ಮನೆಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಕನಕಪುರ ರಸ್ತೆಯ ಗೊಲ್ಲಹಳ್ಳಿಯಲ್ಲಿ ನಡೆದಿದೆ.

ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ. ಆದರೆ, ಸುಮಾರು ₹2 ಲಕ್ಷ ನಷ್ಟವಾಗಿದೆ. ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 436 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏನಿದು ಪ್ರಕರಣ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೊಲ್ಲಹಳ್ಳಿಯ ಎಂ.ರವೀಶ (38) ಅವರನ್ನು ಗೊಲ್ಲಹಳ್ಳಿಯ ಅವರ ಸೋದರಸಂಬಂಧಿ ಎನ್.ರವಿಕುಮಾರ್ (40) ಅಲಿಯಾಸ್ಮಸಾಜ್ರವಿ ಬುಧವಾರ ಕೊಲೆ ಮಾಡಿದ್ದಾರೆ.

ಮಸಾಜ್ ರವಿ ಅವರ ತಾಯಿಯ ಬಗ್ಗೆ ಕುಡಿದ ಅಮಲಿನಲ್ಲಿ ರವೀಶ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಕುಪಿತಗೊಂಡ ಮಸಾಜ್ ರವಿ, ರವೀಶಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ರವೀಶನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ರವಿಯನ್ನು ಕೋಡಿಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರವೀಶನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ರವೀಶನ ಕುಟುಂಬಸ್ಥರು ಪ್ರತಿಜ್ಞೆ ಮಾಡಿದರು ಎಂದು ತಿಳಿದುಬಂದಿದೆ.

ಸಂತ್ರಸ್ತೆಯ ಕುಟುಂಬ ಮತ್ತು ಸಂಬಂಧಿಕರಿಂದ ಪ್ರತೀಕಾರದ ದಾಳಿಯ ನಿರೀಕ್ಷೆ ಇದ್ದ ಹಿನ್ನೆಲೆ, ಕೊಲೆ ಆರೋಪಿಯ ಮನೆಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.

ಏಳು ಪೊಲೀಸ್ ಸಿಬ್ಬಂದಿ ಮನೆಗೆ ಕಾವಲು ಕಾಯುತ್ತಿದ್ದರು. ಹಿಂಬದಿಯಿಂದ ಮನೆಯ ಕಾಂಪೌಂಡ್ಗೆ ನುಗ್ಗಿದ ದುಷ್ಕರ್ಮಿಗಳು ಗುರುವಾರ ರಾತ್ರಿ ಬಿದಿರಿನಿಂದ ತಯಾರಿಸಿದ ರೇಷ್ಮೆ ಹುಳು ಸಾಕಣೆ ತಟ್ಟೆಗಳಿಗೆ ಬೆಂಕಿ ಹಚ್ಚಿದ್ದಾರೆ. ನಂತರ ಬೆಂಕಿ ಮನೆಗೆ ವ್ಯಾಪಿಸಿದೆ. ಬೆಂಕಿ ನಂದಿಸಲು ಪೊಲೀಸ್ ಸಿಬ್ಬಂದಿಗೆ ಸ್ಥಳೀಯರ ಸಹಾಯ ಸಿಗಲಿಲ್ಲ.

ಕೊಲೆ ಆರೋಪಿಯ ಮನೆಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಶುಕ್ರವಾರ ಕೋಡಿಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 436 ಅಡಿಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; ಸುಟ್ಟು ಕರಕಲಾದ 4 ಬೈಕ್‌ಗಳು

ಕೊಲೆ ಪ್ರಕರಣ ಮತ್ತು ಬೆಂಕಿಯ ಕಿಡಿಗೇಡಿತನಕ್ಕೆ ಸಂಬಂಧವಿದೆ. ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬೆಂಕಿಯಿಂದ ಯಾರಿಗೂ ಗಾಯಗಳಾಗಿಲ್ಲ. ಸುಮಾರು 2 ಲಕ್ಷ ರೂಪಾಯಿ ನಷ್ಟವಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...