ಬೆಂಗಳೂರು | ಬಡವರಿಗೆ ಭೂಮಿ, ವಸತಿ ಸಿಗದೆ ಸ್ವಾತಂತ್ರ್ಯದ ಅರ್ಥ ಪೂರ್ಣವಾಗದು: ನೂರ್ ಶ್ರೀಧರ್

Date:

  • ಬಡವರಿಗೆ ಭೂಮಿ ದೊರೆತಾಗಲೇ ನಿಜವಾದ ಸ್ವಾತಂತ್ರ್ಯ
  • ಬಡವರು, ಭೂವಂಚಿತರನ್ನು ಸಂಪೂರ್ಣವಾಗಿ ಕಡೆಗಣಿಸಿದ ಸರ್ಕಾರಗಳು

ಎಲ್ಲಿಯವರೆಗೆ ಬಡವರಿಗೆ, ಭೂ ವಂಚಿತರಿಗೆ ಭೂಮಿ, ವಸತಿ ಸಿಗುವುದಿಲ್ಲವೋ ಅಲ್ಲಿಯವರೆಗೆ ಈ ದೇಶಕ್ಕೆ ಪೂರ್ಣ ಸ್ವಾತಂತ್ರ್ಯ ಸಿಗದು. ಸ್ವಾತಂತ್ರ್ಯದ ಅರ್ಥ ಪರಿಪೂರ್ಣಗೊಳ್ಳಬೇಕಿದ್ದರೆ, ಎಲ್ಲ ಬಡವರಿಗೂ ಭೂಮಿ ದೊರೆಯಬೇಕು ಎಂದು ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನದ ಮುಂಚೆ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ನಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಬಡವರ ‘ಬರಿಹೊಟ್ಟೆ ಸತ್ಯಾಗ್ರಹ’ದಲ್ಲಿ ಅವರು ಮಾತನಾಡಿದರು. “ಹಿಂದೆ ಇದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉನ್ನತ ಮಟ್ಟದ ಸಭೆ ನಡೆಸಿತ್ತು. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದೆವು. ಯಾವುದೇ ಬಡವರನ್ನು ಅವರು ಬದುಕುತ್ತಿರುವ ಮತ್ತು ಸಾಗುವಳಿ ಮಾಡುತ್ತಿರುವ ಸ್ಥಳದಿಂದ ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದ್ದೆವು. ಅವರೆಲ್ಲರಿಗೂ ಭೂಮಿ ಹಕ್ಕು ನೀಡಬೇಕೆಂದು ಆಗ್ರಹಿಸಿದ್ದೆವು. ಅದಕ್ಕಾಗಿ ಸರ್ಕಾರ ಫಾರಂ ನಂ.57ಅನ್ನು ಜಾರಿಗೆ ತಂದಿತ್ತು. ಆದರೆ, ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಿಲ್ಲ” ಎಂದು ಆರೋಪಿಸಿದರು.

“ಸಮ್ಮಿಶ್ರ ಸರ್ಕಾರ ಮತ್ತು ಬಿಜೆಪಿಯ ಭ್ರಷ್ಟ ಸರ್ಕಾರ ಬಡವರು, ಭೂವಂಚಿತರನ್ನು ಸಂಪೂರ್ಣವಾಗಿ ಕಡೆಗಣಿಸಿದವು. ಉಳ್ಳವರು, ಕಾರ್ಪೊರೇಟ್‌ಗಳು ಭೂಮಿಯನ್ನು ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಟ್ಟರು. ಬಡವರ ಹೋರಾಟದಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಭೂಮಿ ಅರಣ್ಯ ಕಾಯ್ದೆಯ ವ್ಯಾಪ್ತಿಯಿಂದ ಹೊರಗುಳಿಯಿತು. ಆದರೆ, ಬಿಜೆಪಿ ಸರ್ಕಾರ ಆ ಭೂಮಿಯನ್ನು ಬಡವರಿಗೆ ಹಂಚುವ ಬದಲು ಪ್ಲಾಂಟರ್‌ಗಳ ಕೈಗಿಟ್ಟಿತು” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಿರುವ ಸರ್ಕಾರವೇನೂ ಸಂಪೂರ್ಣ ಬಡವರ ಪರವಾಗಿಲ್ಲ. ಈ ಸರ್ಕಾರದ ಜುಟ್ಟು ಕೂಡ ಉದ್ಯಮಿಗಳ ಕೈಯಲ್ಲೇ ಇದೆ. ಆದರೆ, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ರಾಜ್ಯದ ಬಡವರ ಪಾತ್ರ ದೊಡ್ಡದಿದೆ. ಸರ್ಕಾರ ಬಡವರ, ಭೂ ವಂಚಿತರ ಸಮಸ್ಯೆಗಳನ್ನು ಪರಿಹರಿಬೇಕು. ಅದಕ್ಕಾಗಿ, ದೊಡ್ಡ ಪ್ರಮಾಣ ಒತ್ತಡ ಹೇರಬೇಕು. ಬೃಹತ್ ಹೋರಾಟ ನಡೆಯಬೇಕು. ಹಕ್ಕೊತ್ತಾಯಗಳನ್ನು ಸರ್ಕಾರ ಕಿವಿಗೊಟ್ಟು ಕೇಳಿಸಿಕೊಳ್ಳಬೇಕು. ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿ, ಉನ್ನತ ಮಟ್ಟದ ಸಭೆ ಕರೆಯಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟವನ್ನು ಮುಂದುವರೆಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜ್ಯದ ಎಲ್ಲ ಬಡವರಿಗೆ ಭೂಮಿ ದೊರೆಯದೆ ಹೋರಾಟ ನಿಲ್ಲದು: ಕುಮಾರ್ ಸಮತಳ

“ಅರಣ್ಯ ಹಕ್ಕು ಕಾಯ್ದೆಗಳು ಇರುವುದು ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬಡವರು, ಆದಿವಾಸಿಗಳ ಹಕ್ಕುಗಳನ್ನು ಭದ್ರಪಡಿಸಲು. ಆದರೆ, ಸರ್ಕಾರಗಳು ಆ ಹಕ್ಕುಗಳನ್ನೇ ಕಸಿದುಕೊಳ್ಳುತ್ತಿವೆ. ಅರಣ್ಯ ಪ್ರದೇಶದಲ್ಲಿ ಅಲ್ಲಿನ ಜನರು ಹಲವು ದಶಕಗಳಿಂದ ಗುಡಿಸಲು ಹಾಕಿಕೊಂಡು, ಸಾಗುವಳಿ ಮಾಡಿಕೊಂಡು ಬದುಕುತ್ತಿದ್ದಾರೆ. ಅವರೆಲ್ಲರಿಗೂ ಹಕ್ಕು ಪತ್ರಗಳನ್ನು ನೀಡಬೇಕು” ಎಂದು ಆಗ್ರಹಿಸಿದರು.

“ಸಾವಿರಾರು ಎಕರೆ ಭೂಮಿಯನ್ನು ಲೂಟಿ ಮಾಡಿರುವವರು ನಿರಾತಂಕವಾಗಿ ಬದುಕುತ್ತಿದ್ದಾರೆ. ಆದರೆ, ಅಂಗೈ ಅಗಲ ಭೂಮಿ ಇಟ್ಟುಕೊಂಡಿರುವವರು ಆ ಭೂಮಿಯ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಇದಾವ ಸ್ವಾತಂತ್ರ್ಯ. ಬಡವರಿಗೆ ಭೂಮಿ ದೊರೆಯಬೇಕು. ಆಗಲೇ ನಿಜವಾದ ಸ್ವಾತಂತ್ರ್ಯ ದೊರೆಯಲು ಸಾಧ್ಯ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...