ಬೆಂಗಳೂರು | ಸಮಸ್ಯೆ ಸರಿಪಡಿಸಲು ಹೋದ ಇನ್ಸ್‌ಪೆಕ್ಟರ್‌ಗೆ ಅವಾಜ್‌ ಹಾಕಿದ ಯುವಕ: ಎಫ್‌ಐಆರ್‌ ದಾಖಲು

Date:

ಮದುವೆಯಾಗಿದ್ದರೂ, ತಾನೂ ಪ್ರೀತಿ ಮಾಡಿದ ಹುಡುಗಿ ಬೇರೆಯವರೊಂದಿಗೆ ಸ್ನೇಹ ಮಾಡಿದ್ದಾಳೆಂದು ಯುವತಿಯ ಮನೆಮುಂದೆ ಗಲಾಟೆ ಮಾಡುತ್ತಿದ್ದವನ್ನು ಸಮಾಧಾನ ಪಡಿಸಲು ಹೋದ ಇನ್ಸ್‌ಪೆಕ್ಟರ್‌ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಗದೀಶ ಆರೋಪಿ. ಈತನು ಇತ್ತೀಚೆಗೆ ಪಿಎಸ್‌ಐ ಪರೀಕ್ಷೆ ಬರೆದು ಫೇಲಾಗಿದ್ದನು. ಈತನಿಗೆ ಈಗಾಗಲೇ, ಮದುವೆಯಾಗಿದ್ದು, ಬೇರೆ ಯುವತಿಯ ಜತೆಗೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದನು.

ಇತ್ತೀಚೆಗೆ, ಆ ಯುವತಿ ಬೇರೆಯವರ ಜತೆಗೆ ಸ್ನೇಹ ಬೆಳೆಸಿದ್ದಾಳೆ ಮತ್ತು ಚಾಟ್ ಮಾಡುತ್ತಿದ್ದಾಳೆ ಎಂದು ಅನುಮಾನಗೊಂಡು ಆಕೆಯ ಮನೆಯ ಮುಂದೆ ಬಂದು ಗಲಾಟೆ ಮಾಡುತ್ತಿದ್ದನು. ಇದನ್ನು ಕಂಡ ಸ್ಥಳೀಯರು 112ಗೆ ಕರೆ ಮಾಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇನ್ಸ್ಪೆಕ್ಟರ್ಸಂದೀಪ್‌ ಆತನನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಇನ್ಸ್‌ಪೆಕ್ಟರ್‌ ಸಂದೀಪ್‌ಗೆ ನಿಂದಿಸಲು ಆರಂಭಿಸಿದ ಜಗದೀಶ ಹುಡುಗರಿಗೆ ಹೇಳಿ ನಿನ್ನ ಬಟ್ಟೆ ಬಿಚ್ಚಿಸುತ್ತೇನೆ. ಘೇರಾವ್ ಹಾಕ್ತಿನಿ ಎಂದು ಅವಾಜ್‌ ಹಾಕಿದ್ದಾನೆ. ಅರ್ಧ ಮಾರ್ಕ್ನಿಂದ ನಾನು ಪಿಎಸ್ ಫೇಲ್ ಆದೆ. ನಿನ್ನಿಂದ ಏನು ಕಿತ್ತುಕ್ಕೊಳ್ಳೋಕೆ ಆಗಲ್ಲ. ನೀನು ತ್ರಿಬಲ್ ಸ್ಟಾರ್ ಅಷ್ಟೇ, ನನ್ ಕೈಲಿ ರಿವಾಲ್ವರ್ ಇದ್ದಿದ್ರೆ ಕಥೆನೇ ಬೇರೆ ಇರತಿತ್ತು. ನೀನು ₹500 ತಗೊಂಡು ಕೆಲಸ ಮಾಡೋನು. ನಿನಗೆ ಹ್ಯೂಮನ್ ರೈಟ್ಸ್ ಅವರು ಗೊತ್ತಾ? ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹಾಕ್ತೀನಿ ಎಂದು ಇನ್ಸ್ಪೆಕ್ಟರ್ ಸಂದೀಪ್ ಅವರಿಗೆ ಜಗದೀಶ್  ಬೆದರಿಕೆ ಹಾಕಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದಂಪತಿಯಿಂದ ಹನಿಟ್ರ್ಯಾಪ್‌ ದಂಧೆ ಆರೋಪ; ನಾಲ್ವರ ಬಂಧನ

ಸದ್ಯ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಹಿನ್ನಲೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಜಗದೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...