ಬೆಂಗಳೂರು | ನಾಪತ್ತೆಯಾದ ಮಕ್ಕಳನ್ನು ಮೂರು ಗಂಟೆಗಳಲ್ಲಿ ಪತ್ತೆ ಮಾಡಿದ ಪೊಲೀಸರು

Date:

  • ಕರೆ ಮಾಡಿದ್ದ ಲೊಕೇಷನ್‌ನಿಂದ 1 ಕಿ.ಮೀ ದೂರದಲ್ಲಿ ಇದ್ದ ಮಕ್ಕಳು
  • ಸೆಟಲೈಟ್ ಬಸ್ ಸ್ಟಾಂಡ್ ಹತ್ತಿರ ಪತ್ತೆಯಾದ ಇಬ್ಬರು ಮಕ್ಕಳು

ಬೆಂಗಳೂರಿನಲ್ಲಿ ಶಾಲೆಗೆ ತೆರಳಿದ ಮಕ್ಕಳು ಆಟೋ ಹತ್ತಿ ಮನೆಗೆ ಬರುವ ವೇಳೆ ನಾಪತ್ತೆಯಾಗಿದ್ದರು. ವಿ.ವಿ ಪುರಂ ಠಾಣೆ ಪೊಲೀಸರು ಮೂರು ಗಂಟೆಯಲ್ಲಿ ಮಕ್ಕಳನ್ನು ಪತ್ತೆ ಮಾಡಿದ್ದಾರೆ.

ಶಾಲೆಯಿಂದ ಮನೆಗೆ ವಾಪಸ್ ಬರಲು ಇಬ್ಬರು ಮಕ್ಕಳು ಆಟೋ ಹತ್ತಿದ್ದಾರೆ. ಆಟೋ ಚಾಲಕ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಮಕ್ಕಳು ಆಟೋ ಇಳಿದು ಸ್ವಲ್ಪ ದೂರ ನಡೆದುಕೊಂಡು ಹೋಗಿದ್ದಾರೆ.

ತಾವು ಹೋದ ರಸ್ತೆಗೆ ಮರಳಿ ಬರಲು ದಾರಿ ಗೊತ್ತಾಗದೆ ಮಕ್ಕಳು ಸಾಕಷ್ಟು ಕಡೆ ಸುತ್ತಾಟ ನಡೆಸಿದ್ದಾರೆ. ಕೊನೆಗೆ ಭಯಗೊಂಡು ದಾರಿಯಲ್ಲಿ ಹೋಗುತ್ತಿದ್ದ ಓರ್ವ ಯುವತಿಗೆ ತಾವು ದಾರಿ ತಪ್ಪಿದ ಬಗ್ಗೆ ತಿಳಿಸಿದ್ದಾರೆ. ಯುವತಿ ಮಕ್ಕಳ ಬಗ್ಗೆ ಎಲ್ಲ ವಿಚಾರಿಸಿದ್ದಾಳೆ. ಈ ವೇಳೆ, ಐದು ವರ್ಷದ ಬಾಲಕ ತನ್ನ ತಂದೆಯ ಮೊಬೈಲ್ ನಂಬರ್ ಗೊತ್ತಿದೆ ಎಂದು ತಿಳಿಸಿದ್ದಾನೆ. ಯುವತಿ ಅಲ್ಲೇ ಇದ್ದ ಓರ್ವ ವ್ಯಕ್ತಿಗೆ ಕರೆ ಮಾಡಿಕೊಡುವಂತೆ ವಿನಂತಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರೆ ಮಾಡಿದ ವ್ಯಕ್ತಿ ನಿಮ್ಮ ಮಕ್ಕಳು ಸೆಟಲೈಟ್ ಬಸ್‌ಸ್ಟ್ಯಾಂಡ್ ಹತ್ತಿರ ಇದ್ದಾರೆ ಎಂದು ಹೇಳಿ ಕರೆ ಕಟ್ ಮಾಡಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು ಈ ಬಗ್ಗೆ ವಿ.ವಿ ಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಪರಿಚಿತ ವ್ಯಕ್ತಿ ಕರೆ ಮಾಡಿದ್ದ ಮೊಬೈಲ್​ ನಂಬರ್ ಪಡೆದ ಪೊಲೀಸರು ಟವರ್ ಲೋಕೆಷನ್ ಮೂಲಕ ವಿಳಾಸ ಪತ್ತೆ ಮಾಡಿದ್ದಾರೆ. 20 ಪೊಲೀಸ್​ ಸಿಬ್ಬಂದಿ ಮಕ್ಕಳಿಗಾಗಿ ಸೆಟಲೈಟ್ ಬಸ್​ ನಿಲ್ದಾಣದ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದಾರೆ.

ಕರೆ ಮಾಡಿದ್ದ ಲೋಕೇಷನ್​ನಿಂದ 1 ಕಿ.ಮೀ ದೂರದಲ್ಲಿ ಇಬ್ಬರು ಮಕ್ಕಳು ನಿಂತಿದ್ದರು. ಇದನ್ನು ಕಂಡ ಪೊಲೀಸರು ನಂತರ ಮಕ್ಕಳನ್ನು ಕರೆತಂದು ಪೋಷಕರಿಗೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ರಾಜ್ಯಪಾಲರನ್ನು ಬಿಟ್ಟು ಹೈದರಾಬಾದ್‌ಗೆ ಹಾರಿದ ವಿಮಾನ; ದೂರು ದಾಖಲು

ಮಕ್ಕಳು ಸುರಕ್ಷಿತವಾಗಿ ಸಿಕ್ಕಿದ್ದು, ಬಾಲಕ ತನ್ನ ತಂದೆಯ ಮೊಬೈಲ್​ ನಂಬರ್​ ನೀಡಿ ಕರೆ ಮಾಡಿಸಿದ್ದರಿಂದ ಪೊಲೀಸರು ಮೂರು ಗಂಟೆಗಳಲ್ಲಿ ಮಕ್ಕಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...