ಬೆಂಗಳೂರು | ದೂರು ನೀಡಲು ಹೋದ ವಕೀಲರನ್ನೇ ಸೆಲ್ ಒಳಗೆ ಹಾಕಿದ ಪೊಲೀಸರು

Date:

ಠಾಣೆಗೆ ದೂರು ನೀಡಲು ಹೋದ ವಕೀಲರನ್ನೇ ಪೊಲೀಸರು ಸೆಲ್‌ ಒಳಗೆ ಹಾಕಿ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್‌ ಠಾಣೆಯಲ್ಲಿ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಶ್ಯಾನುಬೋಗನಹಳ್ಳಿಯಲ್ಲಿರುವ ಸರ್ಕಾರಿ ಜಮೀನು ವಿಚಾರವಾಗಿ ವಕೀಲರು ದೂರು ನೀಡಲು ರಾಜಾನುಕುಂಟೆ ಪೊಲೀಸ್‌ ಠಾಣೆಗೆ ತೆರಳಿದ್ದರು. ಈ ವೇಳೆ, ಪೊಲೀಸರು ವಕೀಲರ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಶ್ಯಾನಬೋಗನಹಳ್ಳಿಯ ಸರ್ಕಾರಿ ಜಮೀನನ್ನು ನಕಲಿ ದಾಖಲೆ ಸೃಷ್ಟಿ ಮಾಡಿ ಜಮೀನು ಕಬಳಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಎರಡು ಗುಂಪಿನ ನಡುವೆ ಪಂಚಾಯತ್​ನಲ್ಲಿ ಜಗಳ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ವಕೀಲ ಚಂದ್ರಶೇಖರ ಮತ್ತು ಸಹೋದರ ರಾಜನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದರು. ದೂರು ಸ್ವೀಕರಿಸಿದ ಪೊಲೀಸರು ಎರಡು ಕಡೆಯವರನ್ನು ವಿಚಾರಣೆ ಮಾಡುತ್ತಿದ್ದರು.

ವಿಚಾರಣೆ ನಡೆಸುವ ವೇಳೆ, ಎದುರುದಾರರ ಮುಂದೆ ವಕೀಲ ಚಂದ್ರಶೇಖರ್ ಅವರನ್ನು ಸೆಲ್ ಒಳಗಡೆ ಹಾಕಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪೊಲೀಸರ ದೌರ್ಜನ್ಯದ ವಿರುದ್ಧ ಹಿರಿಯ ಅಧಿಕಾರಿಗಳಿಗೆ ವಕೀಲ ಚಂದ್ರಶೇಖರ್ ದೂರು‌ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್‌ ಅನಾವರಣ

“ಪೊಲೀಸ್ ಠಾಣೆಯಲ್ಲಿ ನೊಂದವರಿಗೆ ನ್ಯಾಯ ಸಿಗುತ್ತಿಲ್ಲ. ಈ ಘಟನೆ ಸಂಬಂಧ ಠಾಣೆಯ ಸಿಬ್ಬಂದಿ ಕಿರಣ್ ಮತ್ತು ಮೋಹನ್ ಎಂಬವರನ್ನು ಎಸ್​ಪಿ ಅಮಾನತ್ತು ಮಾಡಿದ್ದಾರೆ. ಅವರು ಅಮಾಯಕ ಸಿಬ್ಬಂದಿಯನ್ನು ಅಮಾನತ್ತು ಮಾಡಿದ್ದಾರೆ. ದೌರ್ಜನ್ಯ ಎಸಗಿದ ಇನ್​​ಸ್ಪೆಕ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ದೂರುದಾರ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...