ಬೆಂಗಳೂರು | ಮಗಳನ್ನು ತಡವಾಗಿ ಮನೆಗೆ ಬಿಟ್ಟ ಶಾಲಾ ವಾಹನ; ಶಾಲೆಯ ವಿರುದ್ಧ ಮಕ್ಕಳ ಆಯೋಗಕ್ಕೆ ದೂರು

Date:

  • ವಿದ್ಯಾರ್ಥಿನಿಗೆ ಸಾರಿಗೆಯನ್ನು ರದ್ದುಗೊಳಿಸಿದ ಶಾಲಾ ಆಡಳಿತ ಮಂಡಳಿ
  • ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ; ಶಾಲಾ ಆಡಳಿತ ಮಂಡಳಿ

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ 5ನೇ ತರಗತಿಯ ಬಾಲಕಿಯನ್ನು ತಡವಾಗಿ ಮನೆಗೆ ಬಿಟ್ಟಿದ್ದಕ್ಕಾಗಿ ಪೋಷಕರು ಶಾಲೆಯ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಸಂಸ್ಥೆಗೆ ದೂರು ನೀಡಿದ್ದಾರೆ.

ಕ್ರಿಸಾಲಿಸ್ ಹೈ ಎಂಬ ಖಾಸಗಿ ಶಾಲೆಯ ವಿರುದ್ಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (KSCPCR) ಪೋಷಕರು ದೂರು ನೀಡಿದ್ದು, “ಗುರುವಾರ ಮಧ್ಯಾಹ್ನ 3.20ರ ಸುಮಾರಿಗೆ ಮಗಳು ಮನೆಗೆ ಬರಬೇಕಿತ್ತು. ಆದರೆ, ಆಕೆ ಮನೆಗೆ ಬಂದಿರಲಿಲ್ಲ. ಇದರಿಂದ ನಾವು ತುಂಬಾ ಗಾಬರಿಗೊಂಡೆವು. ಮಧ್ಯಾಹ್ನ 3 ಗಂಟೆಯಿಂದ ಮಗಳನ್ನು ಶಾಲಾ ವಾಹನ ಡ್ರಾಪ್‌ ಮಾಡುವ ಸ್ಥಳದಲ್ಲಿ ಕಾಯುತ್ತಿದ್ದೆವು ಅಂತಿಮವಾಗಿ, ಸಂಜೆ 4.40 ರ ಸುಮಾರಿಗೆ ಶಾಲಾ ವಾಹನದಲ್ಲಿ ಅವಳನ್ನು ಡ್ರಾಪ್ ಮಾಡಿದರು. ವಿಳಂಬದ ಬಗ್ಗೆ ಶಾಲೆಯಿಂದ ಯಾವುದೇ ಮಾಹಿತಿ ಇರಲಿಲ್ಲ” ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

“ಶಾಲೆಯ ಸಿಬ್ಬಂದಿ ನಮ್ಮ ಮಗಳಿಗೆ ನಮ್ಮ ಮನೆಯ ರಸ್ತೆಯ ಎದುರಿನ ರಸ್ತೆಯ ಬದಿಯಲ್ಲಿ ಬಸ್‌ನಿಂದ ಇಳಿಯುವಂತೆ ಹೇಳಿದ್ದಾರೆ. ಆದರೆ, ರಸ್ತೆ ಅಗಲವಾಗಿರುವುದರಿಂದ ಮತ್ತು ಮಧ್ಯದಲ್ಲಿ ವಿಭಜಕ ಇರುವುದರಿಂದ ಮಗಳಿಗೆ ರಸ್ತೆ ದಾಟಲು ಸಾಧ್ಯವಾಗದ ಕಾರಣ ಅವಳು ಇಳಿಯಲು ನಿರಾಕರಿಸಿದ್ದಾಳೆ. ಸಿಬ್ಬಂದಿಯ ಆದೇಶ ಪಾಲಿಸದ ಕಾರಣ ಅವಳನ್ನು ಶಿಕ್ಷಿಸಲು ಸಿಬ್ಬಂದಿ ಬಸ್ಸಿನಲ್ಲಿದ್ದ ಎಲ್ಲ ಮಕ್ಕಳನ್ನು ಬಿಡುವವರೆಗೂ ಅವಳನ್ನು ಕಾಯುವಂತೆ ಮಾಡಿದರು. ಎಲ್ಲ ಮಕ್ಕಳನ್ನು ಮನೆಗೆ ಬಿಟ್ಟು ನಂತರ ಅವಳನ್ನು ಮನೆಗೆ ತಂದು ಬಿಟ್ಟಿದ್ದಾರೆ” ಎಂದು ಮಗುವಿನ ತಂದೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಡೆದ ಘಟನೆ ಬಗ್ಗೆ ಶಾಲೆಯ ಅಧಿಕಾರಿಗಳ ಮುಂದೆ ಸಮಸ್ಯೆಯನ್ನು ಹೇಳಿದರೆ, ಶಾಲಾ ಆಡಳಿತ ಮಂಡಳಿ ಮಗಳಿಗೆ ಸಾರಿಗೆಯನ್ನು ರದ್ದುಗೊಳಿಸಲಾಗಿದೆ ಎಂದು ಇಮೇಲ್ ಕಳುಹಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮೆಯನ್ನು ಕೊಂದ ಪ್ರಿಯಕರ

“ನಾವು ಯಾವುದೇ ತಪ್ಪು ಮಾಡಿಲ್ಲ. ಮಕ್ಕಳ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಪೋಷಕರು ತಮ್ಮ ಮಗುವನ್ನು ಕರೆದುಕೊಂಡು ಹೋಗಲು ರಸ್ತೆ ದಾಟಲು ನಿರಾಕರಿಸಿದ್ದರು, ಎಲ್ಲಿಂದ ಮಗುವನ್ನು ಕರೆದುಕೊಂಡು ಹೋಗಿರುತ್ತಾರೋ ಅಲ್ಲಿಗೆ ತಂದು ಬಿಡಬೇಕು ಎಂದು ಹೇಳಿದರು. ಹೀಗಾಗಿ ಶಾಲೆಯ ಒಬ್ಬ ಅಟೆಂಡೆಂಟ್ ಬಾಲಕಿಯನ್ನು ಇನ್ನೊಂದು ಬದಿಗೆ ಕರೆದುಕೊಂಡು ಹೋಗಿದ್ದಾರೆ. ಪೋಷಕರ ಮನವಿಯನ್ನು ಪಾಲಿಸುವುದರಿಂದ ಬಸ್‌ನಲ್ಲಿರುವ ಇತರ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ” ಎಂದು ಶಾಲೆಯ ಸಿಬ್ಬಂದಿಯೊಬ್ಬರು ತಿಳಿಸಿದರು.

ಶಾಲೆಯ ವಿರುದ್ಧ ಪೋಷಕರು ಹೆಣ್ಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...