ಬೆಂಗಳೂರು | ಇನ್ನೂ ಕಲವೇ ದಿನಗಳಲ್ಲಿ ಆರಂಭವಾಗಲಿರುವ ವಿವಿ ಪುರಂ ತಿಂಡಿ ಬೀದಿ

Date:

  • ಸುಮಾರು ₹5 ಕೋಟಿ ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ತಿಂಡಿ ಬೀದಿ ಅಭಿವೃದ್ಧಿ
  • 200 ಮೀಟರ್ ಉದ್ದದ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿ

ಬೆಂಗಳೂರಿನ ವಿ.ವಿ ಪುರಂನಲ್ಲಿ ಸುಮಾರು ₹5 ಕೋಟಿ ವೆಚ್ಚದಲ್ಲಿ ತಿಂಡಿ ಬೀದಿಯನ್ನು ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, 2023ರ ಆಗಸ್ಟ್ ತಿಂಗಳಲ್ಲಿ ಬಾಕಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ತಿಳಿಸಿದರು.

ವಿವಿ ಪುರಂ ತಿಂಡಿ ಬೀದಿಯನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿವಿ ಪುರಂನ ತಿಂಡಿ ಬೀದಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರ ಬಾಕಿ ಕಾಮಗಾರಿ ಪೂರ್ಣಗೊಳಿಸಲಾಗುವುದು” ಎಂದು ಹೇಳಿದರು.

“ವಿವಿ ಪುರಂ ತಿಂಡಿಬೀದಿಯಲ್ಲಿ ಎಲ್ಲ ವ್ಯಾಪಾರಿಗಳ ಸಹಯೋಗದೊಂದಿಗೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ಥಳದಲ್ಲಿದ್ದ ಸಮಸ್ಯೆಗಳನ್ನೆಲ್ಲಾ ಬಗೆಹರಿಸಿಕೊಂಡು ಕಾಮಗಾರಿಯನ್ನು ನಡೆಸಲಾಗುತ್ತಿದ್ದು, ಒಂದು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ನವೀಕರಣಗೊಂಡ ತಿಂಡಿ ಬೀದಿಯನ್ನು ಉದ್ಘಾಟನೆಗೊಳಿಸಲಾಗುವುದು” ಎಂದು ಸ್ಥಳೀಯ ಶಾಸಕ ಉದಯ್ ಬಿ. ಗರುಡಾ ಚಾರ್ ರವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತವಾಗಿ ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆನೀರುಗಾಲುವೆ ಸಂಪರ್ಕ, ಕೇಬಲ್‌ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್‌ಗೆ ಸಂಬಂಧಿಸಿದ ಕಾಮಗಾರಿ ಮುಗಿದಿದೆ. ರಸ್ತೆಗೆ ಅನುಗುಣವಾಗಿ ಬೆಡ್ ಕಾಂಕ್ರಿಟ್ ಹಾಕಲಾಗಿದೆ.

ಇನ್ನೂ ಕ್ಯಾರೇಜ್ ವೇಯಲ್ಲಿ ವರ್ಣರಂಜಿತ ಬಣ್ಣದ ಕಾಂಕ್ರೀಟ್ ರಸ್ತೆ ನಿರ್ಮಾಣ, ಕರ್ಬ್ ಸ್ಟೋನ್ ಗಳ ಅಳವಡಿಕೆ, ಪಾದಚಾರಿ ಮಾರ್ಗ ನಿರ್ಮಾಣ, ಎಚ್‌ಡಿಡಿ ಕೇಬಲ್‌ಗಳೊಂದಿಗೆ ಬೀದಿ ದೀಪದ ಕಂಬಗಳ ಅಳವಡಿಕೆ, ಎಲ್ಲ ಅಂಗಡಿಗಳಿಗೆ ಕೆನೋಪಿಗಳ ಅಳವಡಿಕೆ, ಪ್ರವೇಶ ಪ್ಲಾಜಾ, ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಯ ಸುತ್ತಮುತ್ತ ಸುಂದರೀಕರಣಗೊಳಿಸುವುದು ಸೇರಿದಂತೆ ಇನ್ನಿತರ ಕಾಮಗಾರಿಗಳು ಆಕಿ ಉಳಿದಿವೆ.

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್ | ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿ ಅಧಿಕಾರಿ ನೇಮಕ

ಈ ವೇಳೆ ವಲಯ ಮುಖ್ಯ ಅಭಿಯಂತರ ರಾಜೇಶ್, ಕಾರ್ಯಪಾಲಕ ಅಭಿಯಂತರ ಮಹಾಂತೇಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...