ಬೆಂಗಳೂರು | ₹37,500 ಮೌಲ್ಯದ 550 ಕೆಜಿ ಟೊಮೆಟೊ ಕಳ್ಳತನ

Date:

  • ಹಲಸೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು
  • 22 ಕೆಜಿ ತೂಕದ 30 ಟ್ರೆ ಬಾಕ್ಸ್‌ ಟೊಮೆಟೊ ಖರೀದಿ

ಟೊಮೆಟೊ ಬೆಲೆ ಗಗನಕ್ಕೇರಿದ್ದ ಸಮಯದಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಇದೀಗ ಬೆಲೆ ಇಳಿಕೆ ಕಂಡಿದೆ. ಆದರೂ, ಕಳ್ಳತನದ ಪ್ರಕರಣಗಳು ಮಾತ್ರ ಮುಂದುವರೆದಿದ್ದು, ಬೆಂಗಳೂರಿನ ಹಲಸೂರು ಮರ್ಫಿ ಟೌನ್‌ನಲ್ಲಿರುವ ತರಕಾರಿ ಅಂಗಡಿಯಿಂದ ಬರೋಬ್ಬರಿ ₹37,500 ಮೌಲ್ಯದ 550 ಕೆಜಿ ಟೊಮೆಟೊ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

ಹಲಸೂರಿನ ಮರ್ಫಿ ಟೌನ್‌ ನಿವಾಸಿ ಪ್ರಶಾಂತ್ ಟಿ ಎಂಬುವವರ ಅಂಗಡಿಯಿಂದ ಟೊಮೆಟೊ ಕಳ್ಳತನವಾಗಿದೆ. ಪ್ರಶಾಂತ್ ಅವರು ಆಗಸ್ಟ್‌ 11ರಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಶಿವಾಜಿನಗರ ಮಾರುಕಟ್ಟೆಯಿಂದ 22 ಕೆಜಿ ತೂಕದ 30 ಟ್ರೆ ಬಾಕ್ಸ್‌ ಟೊಮೆಟೊ ಖರೀದಿ ಮಾಡಿದ್ದರು.

ಖರೀದಿ ಮಾಡಿ ತಂದ ಟೊಮೆಟೊಗಳನ್ನು ಅವರ ಅಂಗಡಿಯಲ್ಲಿ ಇರಿಸಿದ್ದರು. ಈ 30 ಟ್ರೆ ಟೊಮೆಟೊಗಳಲ್ಲಿ 5 ಟ್ರೆ ಬಾಕ್ಸ್‌ ಟೊಮೆಟೊ ಮಾರಾಟ ಮಾಡಿದ್ದರು. ರಾತ್ರಿ ವೇಳೆ ಸುಮಾರು 11 ಗಂಟೆಗೆ ಮನೆಗೆ ಹೋಗುವಾಗ ತಮ್ಮ ಅಂಗಡಿಯಲ್ಲಿದ್ದ 25 ಟೊಮೆಟೊ ಟ್ರೆ ಬಾಕ್ಸ್‌ಗಳ ಮೇಲೆ ಟಾರ್ಪಲಿನಿಂದ ಮುಚ್ಚಿ ಬಿಗಿಯಾಗಿ ಹಗ್ಗ ಕಟ್ಟಿ ಹೋಗಿದ್ದರು. ಬೆಳಗ್ಗೆ ಬಂದು ನೋಡಿದಾಗ ಅಂಗಡಿಯಲ್ಲಿ ಟೊಮೆಟೊ ಟ್ರೆ ಬಾಕ್ಸ್‌ಗಳು ಕಾಣೆಯಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆ

ಬಳಿಕ ಪಕ್ಕದ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಆಗಸ್ಟ್ 12 ರಂದು ಬೆಳಗ್ಗೆ 4.30 ರ ಸುಮಾರಿಗೆ ಇಬ್ಬರು ವ್ಯಕ್ತಿಗಳು ಆಟೋದಲ್ಲಿ ಬಂದು ಟೊಮೆಟೊ ಟ್ರೇ ಬಾಕ್ಸ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಪ್ರಶಾಂತ ಅವರು ಹಲೂಸೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...