ಬೆಂಗಳೂರು | ಯುವತಿ ಮೇಲೆ ಅತ್ಯಾಚಾರಗೈದ ಮೂವರ ಬಂಧನ

Date:

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಪ್ರೀತಿ ಹೆಸರಿನಲ್ಲಿ ಯುವತಿಗೆ ಕಿರುಕುಳ ನೀಡಿ ಸ್ನೇಹಿತರ ಜತೆ ಸೇರಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಯುವತಿ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆ್ಯಂಡಿ ಜಾರ್ಜ್, ಸಂತೋಷ್ ಹಾಗೂ ಶಶಿ ಎಂಬುವವರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ?

ಕಳೆದ ನಾಲ್ಕು ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಸಂತ್ರಸ್ತ ಯುವತಿಗೆ ಆರೋಪಿ ಆ್ಯಂಡಿ ಜಾರ್ಜ್ ಪರಿಚಯವಾಗುತ್ತಾನೆ. ಈ ಪರಿಚಯ ಪ್ರೀತಿಗೆ ತಿರುಗುತ್ತದೆ. ಆ್ಯಂಡಿ ಜಾರ್ಜ್ ಖಾಸಗಿ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕನಾಗಿ ಕೆಲಸ ಮಾಡಿಕೊಂಡಿದ್ದರು.

“ಪ್ರೀತಿಲಿ ಬಿದ್ದ ಇಬ್ಬರು ಎರಡು ವರ್ಷ ಜತೆಯಲ್ಲಿ ಓಡಾಡಿಕೊಂಡಿದ್ದರು. ಈ ವೇಳೆ, ಯುವತಿಯ ಜತೆ ಆರೋಪಿ ತೆಗೆಸಿಕೊಂಡಿದ್ದ ವಿಡಿಯೊ ಮತ್ತು ಫೋಟೊಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದನು. ಬಳಿಕ ಯುವತಿ ಆತಂಕಗೊಂಡು ಆತನಿಂದ ದೂರಾಗಿದ್ದಳು. ಇತ್ತಿಚೇಗೆ ಹಳೆಯ ವಿಡಿಯೊ ಮತ್ತು ಫೋಟೊ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಕೆ ಹಾಕಿ, ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ” ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ.

ಆರೋಪಿ ಅತ್ಯಾಚಾರ ಮಾಡಿ ಮೊಬೈಲ್ ವಿಡಿಯೊವನ್ನು ಮಾಡಿಕೊಂಡಿದ್ದನು. ಇದೇ ರೀತಿಯಾಗಿ ಹಲವು ಬಾರಿ ಬೆದರಿಸಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಯುವತಿಯ ಫೋಟೋ ಹಾಗೂ ವಿಡಿಯೊಗಳನ್ನು ಆತನ ಸ್ನೇಹಿತರಾದ ಸಂತೋಷ್ ಮತ್ತು ಶಶಿ ಎಂಬುವವರಿಗೆ ಕಳುಹಿಸಿದ್ದಾನೆ. ಈ ಇಬ್ಬರೂ ಕೂಡ ಯುವತಿಯ ಮೇಲೆ ಒತ್ತಡ ಹಾಕಿ ಅನ್ಯ ಸಂದರ್ಭಗಳಲ್ಲಿ ಅತ್ಯಾಚಾರ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಂಕಿತರಿಂದ ವಶಪಡಿಸಿಕೊಂಡ ಗ್ರೆನೇಡ್‌ಗಳು ಭಾರತದಲ್ಲಿ ತಯಾರಿಸಿಲ್ಲ: ಸಿಸಿಬಿ

ಬಳಿಕ ಆರೋಪಿ ಆ್ಯಂಡಿ ಜಾರ್ಜ್ ತನ್ನ ಇನ್ಟಾಗ್ರಾಮ್ನಲ್ಲಿ ಯುವತಿಯ ಫೋಟೋ ಹಾಗೂ ವಿಡಿಯೋ ಅಪ್‌ಲೋಡ್ ಮಾಡಿ ವೈರಲ್ ಮಾಡಿದ್ದಾನೆ. ಅತ್ಯಾಚಾರ ಮಾಡುವುದರ ಜತೆಗೆ ತಮ್ಮ ಘನತೆಗೆ ಧಕ್ಕೆ ತಂದಿದ್ದಾನೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾಳೆ.

“ಯುವತಿ ನೀಡಿದ ದೂರಿನ ಮೇರೆಗೆ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಆರೋಪಿಗಳಿಂದ ಮೊಬೈಲ್, ಲ್ಯಾಪ್ಟಾಪ್ ಹಾಗೂ ಪೆಂಡ್ರೈವ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಮುಖ ಆರೋಪಿ ಆ್ಯಂಡಿ ಖಾಸಗಿ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕನಾಗಿದ್ದು, ಶಾಲಾ ವಿದ್ಯಾರ್ಥಿಗಳೊಂದಿಗೆ ಅಸಭ್ಯ ವರ್ತನೆ ತೋರಿದ್ದಾನಾ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ನಗರ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...