ಬೆಂಗಳೂರು | ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಮೂವರು ಕಾಮುಕರು: ದೂರು ದಾಖಲು

Date:

ಯುವತಿಯರು, ಮಹಿಳೆಯರನ್ನು ಟಾರ್ಗೆಟ್ ಮಾಡಿ ಬೇಕು ಬೇಕು ಅಂತಲೇ ಟಚ್ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕ ಯುವಕರ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ವಿಜಯನಗರದ ನಮ್ಮೂಟ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ.

ವಿಜಯನಗರ ಆರ್​ಪಿಸಿ ಲೇಔಟ್​ನಲ್ಲಿರುವ ನಮ್ಮೂಟ ಹೋಟೆಲ್​ನಲ್ಲಿ 2023 ಡಿಸಂಬರ್ 30 ರ ಸಂಜೆ 7.30 ಕ್ಕೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜನವರಿ 10 ರಂದು ಈ ಘಟನೆಗೆ ಸಂಬಂಧಿಸಿದಂತೆ, ಹೋಟೆಲ್ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಹೋಟೆಲ್ ಬಳಿ ಇದ್ದ ಯುವತಿಗೆ ಕಾಮುಕರು ಲೈಂಗಿಕ‌ ಕಿರುಕುಳ ನೀಡಿದ್ದಾರೆ. ಬೇಕು ಬೇಕಂತಲೇ ಯುವತಿಯರನ್ನು ಟಚ್ ಮಾಡಿ ವಿಕೃತಿ ಮೆರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋಟೆಲ್ ಗೆ ಬಂದ ಮೂವರು ಹುಡುಗರು ದೋಸೆ ತಿನ್ನುತ್ತ ಅಲ್ಲಿಯೇ ನಿಂತು ಹರಟೆ ಹೊಡೆಯುತ್ತಿದ್ದರು. ಯುವತಿಯನ್ನ ಟಚ್ ಮಾಡೋ ಮೊದಲು ಮೂವರು ಕಾಮುಕರು ಪ್ಲಾನ್ ಮಾಡಿದ್ದಾರೆ. ಒಬ್ಬ ಟಚ್ ಮಾಡೋ ಉದ್ದೇಶದಿಂದ ಹೋಗುತ್ತಾನೆ. ಯುವತಿಯ ಹಿಂಬದಿಗೆ ಕೈನಿಂದ ಹೊಡೆದು ಅನುಚಿತ ವರ್ತನೆ ತೋರಿದ್ದಾನೆ. ಇನ್ನಿಬ್ಬರು ದೂರ ನಿಂತು ವಾಚ್ ಮಾಡಿದ್ದಾರೆ. ಹೊಟೇಲ್‌ಗೆ ಬಂದ ಯುವತಿಯನ್ನು ಟಚ್ ಮಾಡಿ ಬಳಿಕ ಗಲಾಟೆ ಮಾಡುತ್ತಾರೆ. ಯುವತಿ ಯುವಕರ ಜೊತೆ ಗಲಾಟೆ ಮಾಡಿ ಕೂಗಾಡಿದ್ದು, ಸ್ಥಳೀಯರೆಲ್ಲರೂ ಜಮಾಯಿಸಿದ್ದಾರೆ ಬೇಕು ಬೇಕಂತಲೇ ಟಚ್ ಮಾಡಿ ಯುವಕರ ಪುಂಡಾಟ ಮೆರೆದಿರುವ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನ ಸೇರುತ್ತಿದ್ದಂತೆ ಮೂವರು ಯುವಕರು ಪರಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಜ.19ರಂದು ಪ್ರಧಾನಿ ಮೋದಿ ಆಗಮನ; ಸಂಚಾರ ಮಾರ್ಗ ಬದಲಾವಣೆಯ ವಿವರ ಇಲ್ಲಿದೆ

ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...