ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

Date:

ಬೆಂಗಳೂರಿನಲ್ಲಿ ಜುಲೈ 7ರಂದು ಗಂಟೆಗೆ 35-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಇದು ವಾರಾಂತ್ಯದಲ್ಲಿ ನಿಧಾನಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮುಂದಿನ ಐದು ದಿನಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

“ಮಾನ್ಸೂನ್ ಸಮಯದಲ್ಲಿ ಬಿರುಗಾಳಿ ಬೀಸುವುದು ಸಾಮಾನ್ಯವಾಗಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಗೆ ಕಾರಣವಾಗುವ ಪಶ್ಚಿಮದಿಂದ ಬೀಸುವ ಗಾಳಿಯು ಸಾಮಾನ್ಯವಾಗಿ ಬಲವಾಗಿರುತ್ತದೆ ಮತ್ತು ತಂಪಾಗಿರುತ್ತದೆ. ಈ ಗಾಳಿಯಿಂದಾಗಿ ಬೆಂಗಳೂರಿನ ತಾಪಮಾನವೂ ಕುಸಿದಿದೆ” ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಎ.ಪ್ರಸಾದ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಸ್ತವವಾಗಿ, ಬೆಂಗಳೂರು ಗರಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ಜುಲೈ 6ರಂದು ನಗರವು 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಿಸಿದೆ. ಜುಲೈ 6 ರಂದು ನಗರದಲ್ಲಿ ಕನಿಷ್ಠ ತಾಪಮಾನ 20.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ವರ್ಷದ ಈ ಅವಧಿಗೆ ಸಾಮಾನ್ಯವಾಗಿದೆ” ಎಂದರು.

“ಮುಂದಿನ ಐದು ದಿನಗಳಲ್ಲಿ ಬೆಂಗಳೂರಿಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಜುಲೈ 11 ಮತ್ತು 12 ರಂದು ಭಾಗಶಃ ಮೋಡ ಕವಿದ ವಾತಾವರಣದ ಜತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿ ಕಸ ಸಂಗ್ರಹಿಸುವ ಆಟೋ ಚಾಲಕನ ಮೇಲೆ ಹಲ್ಲೆ

ಜೂನ್‌ನಲ್ಲಿ ಕರ್ನಾಟಕಕ್ಕೆ ಕೊರತೆಯಾಗಿದ್ದ ಮಳೆ ಈಗ ರಾಜ್ಯಾದ್ಯಂತ ಚುರುಕುಗೊಂಡಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಜುಲೈನಲ್ಲಿ ಸಾಮಾನ್ಯ ಅಥವಾ ಸ್ವಲ್ಪ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದರೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜುಲೈನಲ್ಲಿ ವಾಡಿಕೆಗಿಂತ ಸ್ವಲ್ಪ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...