ಬೆಂಗಳೂರು | ಯುವಕನ ಕಿರುಕುಳಕ್ಕೆ ಬೇಸತ್ತು ಠಾಣೆ ಮೆಟ್ಟಿಲೇರಿದ ಯುವತಿ

Date:

  • ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು
  • ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು

ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬಳು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಯುವಕನಿಂದ ರಕ್ಷಣೆ ಹಾಗೂ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾಳೆ.

ದೂರು ನೀಡಿರುವ ಯುವತಿ ಮಹಾರಾಷ್ಟ್ರ ಮೂಲದವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೆಲೆಸಿದ್ದರು. ಬ್ಲಾಕ್ ಬೆರಿಸ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಯುವಕ ಅಲ್ ಮೆಹಪ್ಯೂಸ್ ಬರಪೂಯಾ ಅಸ್ಸಾಂ ಮೂಲದವನಾಗಿದ್ದು, ಗಾರ್ಮೆಂಟ್ಸ್ ರಿಟೇಲ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಆತ ಕೊರಮಂಗಲದಲ್ಲಿ ನೆಲೆಸಿದ್ದಾರೆ.

ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ಪ್ರಾರಂಭದಲ್ಲಿ ಯುವಕ ತನ್ನ ಹೆಸರು ಮೆಲ್ಬಿನ್, ತಾನೂ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದ. ಆಕಸ್ಮಿಕವಾಗಿ ಅಲ್ ಮೆಹಪ್ಯೂಸ್​ನ ಆಧಾರ್ ಕಾರ್ಡ್ ಯುವತಿಯ ಕಣ್ಣಿಗೆ​ ಬಿದ್ದಿದ್ದು, ಆತ ಕ್ರಿಶ್ಚಿಯನ್ ಅಲ್ಲ, ಮುಸ್ಲಿಂ ಎಂದು ಆಕೆಗೆ ಗೊತ್ತಾಗಿದೆ. ಯುವಕನ ಮೋಸದ ಬಗ್ಗೆ ತಿಳಿದು ಯುವತಿ ಆತನಿಂದ ದೂರವಾಗಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಯುವಕ ಅಲ್ ಮೆಹಪ್ಯೂಸ್ ಯುವತಿಗೆ ಕಿರುಕುಳ ನೀಡಲು ಆರಂಭಿಸಿದ್ದು, ರಾತ್ರಿ ವೇಳೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿದ್ದಾನೆ. ಯುವತಿ ಸೇರಿದಂತೆ ಕುಟುಂಬದವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಯುವತಿ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರಿಗೆ ಬಳಿ ಹೋಗಿ, ಆಕೆಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾನೆ. “ಆತನೊಂದಿಗೆ ತನ್ನ ಸಹೋದ್ಯೋಗಿಗಳು ಸೇರಿಕೊಂಡಿದ್ದಾರೆ” ಎಂದು ಯುವತಿ ದೂರಿದ್ದಾರೆ.

ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಟೀಮ್ ಮಹಮದ್ ಸಕ್ಕೈನ್, ಸೈಯ್ಯದ್, ಮುಜಿಬ್ ಸೈಫ್ ಶೇಖ್, ಅಸ್ಲಂ ತಬ್ರೆಜ್ ಇವರೆಲ್ಲರು ಸೇರಿ ತನ್ನ ವೃತ್ತಿ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಸ ಬಸ್‌ ಖರೀದಿಗೆ ಮುಂದಾದ ಸಾರಿಗೆ ನಿಗಮ

ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಕಂಪನಿಯ ಜಿಎಂ ಸಾಯಾಕ್ ಅರೋರಾ ಯುವತಿಗೆ ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ, ನಾಲ್ಕು ಲಕ್ಷ ನೀಡಿ ಸ೦ಧಾನ ಮಾಡಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಈಗಾಗಲೇ, ಟೈಪ್ ಮಾಡಿದ್ದ ಪ್ರತಿಯನ್ನು ಮುಂದಿಟ್ಟು ಸಹಿ ಹಾಕುವಂತೆ ಒತ್ತಡ ಹೇರಿದ್ದಾರೆ. ಹಣ ನೀಡದಿದ್ದರೆ ಕೆಲಸದಿಂದ ತೆಗೆಯುವುದಾಗಿ ಹೆಚ್​ಆರ್ ಅಂಕುಷ್ ಠಾಕೂರ್, ಎಂಐಎಸ್ ಅವಿನಾಶ್ ವರ್ಮ, ಜಿಎಂ ಸಯಾಕ್ ಆರೋರಾ, ಪ್ರಾಂಚೈಸಿ ಹರೀಶ್ ಎಂಬವರು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.

ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...