ಬೆಂಗಳೂರು | ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್: ಮುಖ್ಯ ಶಿಕ್ಷಕಿ ಬಂಧನ

Date:

ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಬಂಧಿತೆ. ಬಿಇಒ ಆಂಜನಪ್ಪ ನೀಡಿದ ದೂರಿನನ್ವಯ ಬ್ಯಾಡರಹಳ್ಳಿ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ಕೇಳಿ ಬಂದಿತ್ತು. ಬಿಇಓ ಆಂಜನಪ್ಪ ನೀಡಿದ ದೂರಿನನ್ವಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆ, ಶುಕ್ರವಾರ ರಾತ್ರಿ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮರನ್ನ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯನ್ನು ರಾತ್ರಿ ಬಂಧನ ಮಾಡಿದ ಹಿನ್ನಲೆ, ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

ಏನಿದು ಪ್ರಕರಣ?

ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ನಮ್ಮೂರು ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕೈಯಿಂದಲೇ ಶಾಲಾ ಶಿಕ್ಷಕರು ಶೌಚಾಲಯ ಸ್ವಚ್ಛ ಮಾಡಿದ್ದಾರೆ.

ಒಬ್ಬ ವಿದ್ಯಾರ್ಥಿ ಕ್ಲೀನಿಂಗ್ ದ್ರಾವಣ ಸುರಿಯುತ್ತಿದ್ದರೆ, ಮತ್ತೊಬ್ಬ ವಿದ್ಯಾರ್ಥಿ ಪೊರಕೆ ಹಿಡಿದು ನೆಲ ಗುಡಿಸುತ್ತಿದ್ದನು. ಇದರ ವಿಡಿಯೋವನ್ನು ಯಾರೋ ಒಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲದೇ, ಅದರ ವಿಡಿಯೋಗಳು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.

ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಇದು ಸುದ್ದಿಯಾಗುತ್ತಿದ್ದಂತೆಯೇ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಶಿಕ್ಷಕಿ ತಪ್ಪು ಮಾಡಿರುವುದು ಸಾಬೀತಾದ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನಪ್ಪ ಜಂಟಿ ನಿರ್ದೇಶಕರಿಗೆ ಮುಖ್ಯ ಶಿಕ್ಷಕಿ ವಿರುದ್ಧ ವರದಿ ನೀಡಿದ್ದರು. ಈ ವರದಿ ಆಧಾರದ ಮೇಲೆ ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಸದ್ಯ ಈಗ ಅವರನ್ನು ಬಂಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ: ಮುಖ್ಯ ಶಿಕ್ಷಕಿ ಅಮಾನತು

ಈ ಶಾಲೆಯಲ್ಲಿ ಒಟ್ಟು 600 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ಮಕ್ಕಳೇ ಎಲ್ಲ ಕೆಲಸ ಮಾಡುತ್ತಾರೆ. ಜತೆಗೆ ಶೌಚಾಲಯ ಸ್ವಚ್ಛಗೊಳಿಸುವ ಕೆಲಸ ಕೂಡ ಇವರದೇ, ಕೆಲಸ ಮಾಡದೇ ಹೋದರೇ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಮಕ್ಕಳಿಗೆ ಹೊಡೆಯುವುದು ಬೈಯುವುದು ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಕ್ಕಳ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿದ್ದರು. ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡುವಂತೆ ಗಲಾಟೆ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...