ಬಿಡಬ್ಲೂಎಸ್‌ಎಸ್‌ಬಿ ಗುಂಡಿಗೆ ಎರಡೂವರೆ ವರ್ಷದ ಮಗು ಬಿದ್ದು ಸಾವು

Date:

  • ಬಿಡಬ್ಲೂಎಸ್‌ಎಸ್‌ಬಿ ಕಾಮಗಾರಿ ಹೆಸರಿನಲ್ಲಿ ಗುಂಡಿ ತೆಗೆದು ತಿಂಗಳು ಕಳೆದಿದೆ
  • ಬೆಂಗಳೂರಿನ ಗೊಲ್ಲರಹಟ್ಟಿ ಪೈಪ್‌ಲೇನ್ ಬಳಿ ಈ ಘಟನೆ ನಡೆದಿದೆ

ರಾಜ್ಯ ರಾಜಧಾನಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ಬಿಡಬ್ಲ್ಯೂಎಸ್ಎಸ್‌ಬಿ) ಗುಂಡಿಗೆ ಎರಡೂವರೆ ವರ್ಷದ ಮಗು ಬಿದ್ದು ಮೃತಪಟ್ಟಿದೆ. ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಗರದ ಗೊಲ್ಲರಹಟ್ಟಿ ಪೈಪ್‌ಲೇನ್ ಬಳಿ ಈ ಘಟನೆ ನಡೆದಿದೆ. ಹನುಮಾನ ಮತ್ತು ಹಂಸ ದಂಪತಿಯ ಎರಡೂವರೆ ವರ್ಷದ ಮಗು ಕಾರ್ತಿಕ್ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ‌ ನಿರ್ಲಕ್ಷ್ಯಕ್ಕೆ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.

ಹನುಮಾನ್ ಮತ್ತು ಹಂಸ ದಂಪತಿ ಮೂಲತಃ ಉತ್ತರ ಪ್ರದೇಶದವರು. ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕೆಲಸ ಅರಿಸಿ ಬಂದು ಗೊಲ್ಲರಹಟ್ಟಿಯಲ್ಲಿ ನೆಲೆಸಿದ್ದರು. ಹನುಮಾನ್ ಪೇಂಟಿಂಗ್ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಬೆಳಗ್ಗೆ ಕೆಲಸದ ಹಿನ್ನೆಲೆ, ಹನುಮಾನ್ ಮನೆಯಿಂದ ಹೊರ ಹೋಗಿದ್ದಾರೆ. ಈ ವೇಳೆ, ಪತ್ನಿ ಹಂಸ ಹಾಗೂ ಮಗು ಕಾರ್ತಿಕ್ ಮನೆಯಲ್ಲಿದ್ದರು. ಆಟವಾಡಲು ಮಗು ಕಾರ್ತಿಕ್‌ ಮನೆಯಿಂದ ಹೊರಬಂದಿದೆ. ಈ ಸಮಯದಲ್ಲಿ ಬಿಡಬ್ಲ್ಯೂಎಸ್ಎಸ್‌ಬಿಯ ಕಾಮಗಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತದಾನದ ದಿನ ಕಾರ್ಮಿಕರಿಗೆ ಸಂಬಳ ಸಹಿತ ರಜೆ

ಬಿಡಬ್ಲೂಎಸ್‌ಎಸ್‌ಬಿ ಕಾಮಗಾರಿ ಹೆಸರಿನಲ್ಲಿ ಗುಂಡಿ ತೆಗೆದು ತಿಂಗಳು ಕಳೆದಿದೆ. ಆದರೂ, ಅಧಿಕಾರಿಗಳು ಕಾಮಗಾರಿಯನ್ನು ಸಂಪೂರ್ಣ ಮಾಡಿಲ್ಲ. ಗುಂಡಿಯ ಸುತ್ತ ತಡೆಗೋಡೆಯನ್ನು ನಿರ್ಮಿಸಿಲ್ಲ.

ಮಗು ಸಾವಿಗೆ ಕಾರಣರಾದ ಬಿಡಬ್ಲ್ಯೂಎಸ್ಎಸ್ ಬಿ ಇಂಜಿನಿಯರ್ ಹಾಗೂ ಗುತ್ತಿಗೆದಾರನ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...