ಬೆಂಗಳೂರು | ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳಿಂದ ಮಹಿಳೆಗೆ ಕಿರುಕುಳ : ದೂರು ದಾಖಲು

Date:

ಬೆಂಗಳೂರಿನ ಪೀಣ್ಯ ಸಮೀಪದ ಬೃಂದಾವನ ನಗರದಲ್ಲಿ ಮಹಿಳೆಯೊಬ್ಬರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜುಲೈ 11ರಂದು ಈ ಘಟನೆ ನಡೆದಿದ್ದು, ಮಹಿಳೆ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿ ಮಹಿಳೆ ಮನೆಗೆ ವಾಪಸ್ಸಾಗುತ್ತಿದ್ದಾಗ ಆಕೆಯ ಪಕ್ಕದಲ್ಲಿ ದ್ವಿಚಕ್ರ ವಾಹನವೊಂದು ಬಂದು ನಿಂತಿತು. ಬೈಕ್‌ನಲ್ಲಿದ್ದ ವ್ಯಕ್ತಿಗಳು ಮಹಿಳೆಯ ಮೊಬೈಲ್ ನಂಬರ್ ನೀಡುವಂತೆ ಪೀಡಿಸಿದ್ದಾರೆ. ಇದಕ್ಕೆ ಮಹಿಳೆ ಅವರನ್ನು ನಿರ್ಲಕ್ಷಿಸಿ ಮನೆ ಕಡೆ ಹೆಜ್ಜೆ ಹಾಕಿದ್ದಾರೆ.

ಆದರೆ, ಇಬ್ಬರು ವ್ಯಕ್ತಿಗಳು ಆಕೆಯನ್ನು ಅವರ ನಿವಾಸದವರೆಗೂ ಹಿಂಬಾಲಿಸಿ ಮಹಿಳೆಯ ಮನೆಯ ಎದುರು ನಿಲ್ಲಿಸಿದ್ದ ಕಾರಿಗೆ ಕಲ್ಲು ಎಸೆದು ಗಾಜು ಒಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುಷ್ಕರ್ಮಿಗಳು ತಮ್ಮ ಶರ್ಟ್‌ಗಳಿಂದ ಮುಖ ಮುಚ್ಚಿಕೊಂಡಿದ್ದರು. ಘಟನೆ ನಡೆದ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಆರೋಪಿಗಳ ಚಲನವಲನ ದಾಖಲಾಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಗುರುತಿಸಿದ್ದೇವೆ. ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದೇವೆ. ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ 17, 18ರಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂ

ಸಂತ್ರಸ್ತ ಮಹಿಳೆ ಜುಲೈ 12ರಂದು ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಐಪಿಸಿ ಸೆಕ್ಷನ್ 154 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...