ಬೆಂಗಳೂರು | ರಸ್ತೆ ಅಪಘಾತದಲ್ಲಿ ದಿನಕ್ಕೆ ಇಬ್ಬರು ಬಲಿ

Date:

  • ಸುಮಾರು 40%ದಷ್ಟು ಅಪಘಾತಗಳು ರಾತ್ರಿ ವೇಳೆ ಸಂಭವಿಸಿವೆ
  • ಒಟ್ಟು ಸಾವುಗಳಲ್ಲಿ 20%ರಷ್ಟು ಪಾದಚಾರಿಗಳಾಗಿದ್ದಾರೆ

ಕಳೆದ ಆರು ತಿಂಗಳಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತದಿಂದ ಪ್ರತಿದಿನ ಸರಾಸರಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, “ಅಜಾಗರೂಕ ವಾಹನ ಚಾಲನೆ, ಕಳಪೆ ಪಾದಚಾರಿ ಮೂಲಸೌಕರ್ಯ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗಳು ಹೆಚ್ಚುತ್ತಿರುವುದು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಅಪಘಾತದಿಂದಾಗಿರುವ ಒಟ್ಟು ಸಾವುಗಳಲ್ಲಿ 20%ರಷ್ಟು ಪಾದಚಾರಿಗಳಾಗಿದ್ದಾರೆ. ಇದು ನಗರದಲ್ಲಿನ ಕಳಪೆ ಪಾದಚಾರಿ ಮೂಲಸೌಕರ್ಯವನ್ನು ಸೂಚಿಸುತ್ತದೆ.

“ಸುಮಾರು 40%ರಷ್ಟು ಅಪಘಾತಗಳು ರಾತ್ರಿಯಲ್ಲಿ ಸಂಭವಿಸಿವೆ. ನಿಯಮ ಉಲ್ಲಂಘನೆಗಳು ಹೆಚ್ಚಿವೆ. ಕುಡಿದು ವಾಹನ ಚಲಾಯಿಸುವ ಪ್ರಕರಣಗಳು ಅಪಘಾತಗಳಿಗೆ ಕಾರಣವಾಗುತ್ತವೆ” ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಆರು ತಿಂಗಳಿನಿಂದ ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿದಿನ ಸರಾಸರಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ದಾಖಲಾದ ಸಾವುನೋವುಗಳಲ್ಲಿ ಶೇ.55 ರಷ್ಟು 19 ರಿಂದ 35 ವಯೋಮಾನದವರಾಗಿದ್ದಾರೆ. ಯುವಕರು ಅತಿವೇಗದ ಚಾಲನೆ ಮತ್ತು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಾರೆ” ಎಂದು ಬಿಟಿಪಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

“ರಸ್ತೆ ಅಪಘಾತದಲ್ಲಿ 19-35 ವಯೋಮಾನದವರು ಹೆಚ್ಚು ಬಲಿಯಾಗಿದ್ದಾರೆ. ಏಕೆಂದರೆ, ಅವರು ಅತಿ ವೇಗವಾಗಿ ವಾಹನ ಚಲಾವಣೆ ಮಾಡುತ್ತಾರೆ. ಟ್ರಾಫಿಕ್ ಸಿಗ್ನಲ್‌ ಚಂಪ್‌ ಮಾಡುತ್ತಾರೆ. ವ್ಹೀಲಿಂಗ್‌ನಂತಹ ಅಪಾಯಕಾರಿ ಚಾಲನೆಗಳೂ ಅಪಘಾತಗಳಿಗೆ ಕಾರಣವಾಗಿವೆ” ಎಂದು ವಿಶೇಷ ಆಯುಕ್ತ (ಸಂಚಾರ) ಡಾ. ಎಂ.ಎ ಸಲೀಂ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಎಟಿಎಂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

“ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹಲವಾರು ಜಾಗೃತಿ ಅಭಿಯಾನಗಳನ್ನು ಆಯೋಜಿಸಲಾಗುತ್ತಿದೆ”  ಎಂದು ಅವರು ಹೇಳಿದರು.

ಹಿರಿಯ ಬಿಟಿಪಿ ಅಧಿಕಾರಿಗಳ ಪ್ರಕಾರ, “ಜನರು ವಾಹನ ದಟ್ಟಣೆ ಇರುವ ಪ್ರದೇಶಗಳಲ್ಲಿ ರಸ್ತೆ ದಾಟಲು ಪ್ರಯತ್ನಿಸಿದಾಗ ಕೆಲವು ಅಪಘಾತಗಳು ಸಂಭವಿಸುತ್ತವೆ. ಕೆಲವು ಪ್ರದೇಶಗಳಲ್ಲಿ ಸ್ಕೈವಾಕ್‌ಗಳು ಮತ್ತು ಪಾದಚಾರಿ ಅಂಡರ್‌ಪಾಸ್‌ಗಳಿದ್ದರೂ, ಜನರು ಅಂತಹ ಸೌಲಭ್ಯಗಳನ್ನು ಬಳಸುವುದಿಲ್ಲ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...