ಬೆಂಗಳೂರು | ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಇಬ್ಬರು ಸಾವು

Date:

  • ಆಗಸ್ಟ್‌ 2ರಂದು ರಾತ್ರಿ ನಡೆದ ಘಟನೆ
  • ಇಬ್ಬರಿಗೆ ತೀವ್ರ ಗಾಯ ಆಸ್ಪತ್ರೆಗೆ ದಾಖಲು

ನಾಲ್ಕು ಅಂತಸ್ತಿನ ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಬಿದ್ದು ಫಾಸ್ಟ್‌ಪುಡ್ ಅಂಗಡಿ ಮಾಲೀಕ ಹಾಗೂ ಓರ್ವ ಗ್ರಾಹಕ ಸಾವನ್ನಪ್ಪಿರುವ ಘಟನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಘಟನೆ ಆಗಸ್ಟ್‌ 2ರಂದು ರಾತ್ರಿ ನಡೆದಿದೆ. ಫಾಸ್ಟ್ ಫುಡ್ ಅಂಗಡಿ ಮಾಲೀಕ ಅರುಳ್ (40) ಹಾಗೂ ಗ್ರಾಹಕ ಸಾವನ್ನಪ್ಪಿದ್ದು, ಇತನ ಗುರುತು ಇನ್ನೂ ಪತ್ತೆಯಾಗಿಲ್ಲ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾಲ್ಕು ಅಂತಸ್ತಿನ ಕಟ್ಟಡದ ಮೇಲೆ ನೀರಿನ ಟ್ಯಾಂಕ್ ಇತ್ತು. ಆ ಟ್ಯಾಂಕ್‌ನ ಕೆಳಗಡೆ ತಳ್ಳುವ ಗಾಡಿಯಲ್ಲಿ ಫಾಸ್ಟ್‌ಪುಡ್ ಅಂಗಡಿ ಇತ್ತು. ನೀರು ತುಂಬಿದ ಟ್ಯಾಂಕರ್‌ನಿಂದ ಗೋಡೆ ದುರ್ಬಲಗೊಂಡಿದೆ. ಈ ವೇಳೆ, ಗೋಡೆಯ ಜತೆಗೆ ನೀರು ತುಂಬಿದ ಟ್ಯಾಂಕರ್ ಕೂಡ ಕುಸಿದು ನೆಲಕ್ಕೆ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಿನ ಟ್ಯಾಂಕ್ ಹಾಗೂ ಗೋಡೆ ಫಾಸ್ಟ್‌ಪುಡ್ ಅಂಗಡಿಯ ಮೇಲೆ ಬಿದ್ದಿದೆ. ಈ ಸಮಯದಲ್ಲಿ ಅಂಗಡಿಯ ಮಾಲೀಕ ಹಾಗೂ ಮತ್ತೋರ್ವ ಗ್ರಾಹಕ ಅಂಗಡಿಯಲ್ಲಿ ಇದ್ದರು.

ಟ್ಯಾಂಕ್ ಜೊತೆಗೆ ಗೋಡೆಯೂ ನೆಲಕ್ಕೆ ಕುಸಿದ ಪರಿಣಾಮ ಅಂಗಡಿ ಮಾಲೀಕ ಹಾಗೂ ಒಬ್ಬ ಗ್ರಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗ್ರಾಹಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿವಿ ಪುರಂನ ‘ತಿಂಡಿ ಬೀದಿ’ ರಸ್ತೆ ಅಭಿವೃದ್ಧಿ

ಈ ವೇಳೆ ಮಾತನಾಡಿದ ಪೂರ್ವ ವಿಭಾಗದ ಡಿಸಿಪಿ ಡಾ. ಭೀಮಾಶಂಕರ್ ಗುಳೇದ್, “ಶಿವಾಜಿನಗರ ಬಸ್‌ ನಿಲ್ದಾಣದ ಬಳಿ ಇರುವ ಕಟ್ಟಡದಿಂದ ಟ್ಯಾಂಕರ್ ಜತೆಗೆ ಗೋಡೆಯು ಕುಸಿದು ಬಿದ್ದಿದೆ. ಇದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ 10:30 ಗಂಟೆಗೆ ಈ ಘಟನೆ ನಡೆದಿದೆ” ಎಂದು ತಿಳಿಸಿದರು.

“ಘಟನೆಯಲ್ಲಿ ಕಮಲ್ ಎಂಬಾತನಿಗೆ ತೀವ್ರ ಗಾಯಗಳಾಗಿವೆ. ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕಟ್ಟಡದ ಮೇಲಿನ ಟ್ಯಾಂಕ್ ಇಟ್ಟಿರುವ ಜಾಗ ಅವೈಜ್ಞಾನಿಕತೆಯಿಂದ ನಿರ್ಮಾಣವಾಗಿದೆ ಎಂದು ಶಂಕಿಸಲಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...