ಬೆಂಗಳೂರು | ನೀರಿನ ಸಂಪ್‌ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

Date:

ನೀರಿನ ಸಂಪ್‌ ಸ್ವಚ್ಛ ಮಾಡಲು ಕೆಳಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ.

ಚಂದನ್ ರಾಜ್ಬನ್ ಸಿಂಗ್(31), ಪಿಂಟು ರಾಜ್ಬನ್(22) ಮೃತ ಕೂಲಿ ಕಾರ್ಮಿಕರು. ಇವರು ಬಿಹಾರ ಮೂಲದವರಾಗಿದ್ದು, ಇಬ್ಬರು ಸಹೋದರರು ಎಂದು ತಿಳಿದುಬಂದಿದೆ. ಬುಧವಾರ ಸಂಜೆ ನೀರಿನ ಸಂಪ್ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಅಸ್ವಸ್ಥಗೊಂಡಿರುವ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪಾಳ್ಯ ಗ್ರಾಮದಲ್ಲಿ ಶ್ರೀನಿವಾಸ ರೆಡ್ಡಿ ಎಂಬುವವರಿಗೆ ಸೇರಿದ ಸನ್ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ಇಬ್ಬರು ಕಾರ್ಮಿಕರು ಆ್ಯಸಿಡ್ ಹಾಕಿ ನೀರಿನ ಸಂಪ್ ಸ್ವಚ್ಛ ಮಾಡುತ್ತಿದ್ದರು. ಸಂಪ್ ಸ್ವಚ್ಛ ಮಾಡುವ ವೇಳೆ, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ನೀರಿನ ಸಂಪ್ನಲ್ಲೇ ಮೃತಪಟ್ಟಿದ್ದಾರೆ. ಇದನ್ನು ಕಂಡು ಕಾರ್ಮಿಕರ ರಕ್ಷಣೆಗೆ ಮುಂದಾಗಿದ್ದ ಕಂಪನಿ ಮಾಲೀಕ ಶ್ರೀನಿವಾಸರೆಡ್ಡಿ ಮತ್ತು ಕಾರ್ಮಿಕ ಜಗದೀಶ್ಕೂಡ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಉಳಿದ ಕಾರ್ಮಿಕರು ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿದ್ಯುತ್ ತಗುಲಿ ತಾಯಿ-ಮಗು ಸಾವು; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...