ಬೆಂಗಳೂರು | ಬಸವಣ್ಣ-ವಚನ ಸಾಹಿತ್ಯದ ಪರಿಕಲ್ಪನೆಯಡಿ ಸಸ್ಯಕಾಶಿಯಲ್ಲಿ ಜ.8 ರಂದು ಫಲಪುಷ್ಪ ಪ್ರದರ್ಶನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ನಿಮಿತ್ತವಾಗಿ ಜನವರಿ 18 ರಿಂದ 28 ರವರೆಗೆ ಅಂದರೆ ಬರೋಬ್ಬರಿ 11 ದಿನಗಳ ಕಾಲ ವಚನ ಸಾಹಿತ್ಯದ ಪರಿಕಲ್ಪನೆಯಡಿ 215ನೇ ಫಲಪುಷ್ಪ ಪ್ರದರ್ಶನ ಆಯೋಜಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ.

12ನೇ ಶತಮಾನದ ಕನ್ನಡದ ತತ್ವಜ್ಞಾನಿ, ಸಮಾಜ ಸುಧಾರಕ, ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯ ವಿಷಯಾಧಾರಿತ ಪ್ರದರ್ಶನ ಆಯೋಜಿಸಲು ತೋಟಗಾರಿಕೆ ಇಲಾಖೆ ಸಿದ್ಧತೆಯಲ್ಲಿ ತೊಡಗಿದೆ.

ಬಸವಣ್ಣನವರು ಲಿಂಗ ತಾರತಮ್ಯ, ಮೂಢನಂಬಿಕೆ, ಜಾತಿ ಪದ್ಧತಿ ವಿರುದ್ಧ ಹೋರಾಡಿದರು. ಮಹಿಳೆಯರಿಗೂ ಸಮಾನತೆಯನ್ನು ಪ್ರತಿಪಾದಿಸಿದರು. ಅವರ ಚಿಂತನೆ, ಕಾಯಕ ವೈಖರಿಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದ್ದು, ಈ ಹಿನ್ನೆಲೆ, ಈ ಬಾರಿ ಲಾಲ್‌ಬಾಗ್‌ನಲ್ಲಿ ನಡೆಯುವ 215ನೇ ಫಲಪುಷ್ಪ ಪ್ರದರ್ಶನಕ್ಕೆ ಬಸವಣ್ಣ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಜತೆಗೆ ‘ವಚನ ಸಾಹಿತ್ಯ’ ಕುರಿತಂತೆ ಪುಷ್ಪ ಮಾದರಿಗಳನ್ನು ನಿರ್ಮಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ವಚನ ಸಾಹಿತ್ಯ ತಜ್ಞರು, ಬಸವ ಸಮಿತಿ, ಕೂಡಲಸಂಗಮ ಪೀಠ ಸೇರಿದಂತೆ ನಾನಾ ಮಠಗಳ ಮಠಾಧೀಶರನ್ನು ಸಂಪರ್ಕಿಸಿ 12 ಸುತ್ತಿನ ಸಭೆಗಳನ್ನು ನಡೆಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅನುಭವ ಮಂಟಪ ಈ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾಗಿರಲಿದೆ. ಸುಮಾರು 7 ಲಕ್ಷಕ್ಕೂ ಹೆಚ್ಚು ಹೂವುಗಳಿಂದ ಗಾಜಿನ ಮನೆಯಲ್ಲಿ ಅನುಭವ ಮಂಟಪವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.

ಬಸವಣ್ಣ ಅವರು ತಾಳೆಗರಿಯಲ್ಲಿ ಬರೆದಿರುವ ವಚನಗಳನ್ನು ಸಂಗ್ರಹಿಸುತ್ತಿದ್ದು, ಅವುಗಳನ್ನು ಪ್ರದರ್ಶಿಸಲಿದೆ. ಜತೆಗೆ, ಅಲ್ಲಮಪ್ರಭು, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ ಸೇರಿದಂತೆ ಅನೇಕ ಶರಣರ ವಚನಗಳ ಬಗ್ಗೆಯೂ ಮಾಹಿತಿಯು ಪುಷ್ಪ ಪ್ರದರ್ಶನದಲ್ಲಿ ಪ್ರದರ್ಶಿಸಬೇಕೆಂದು ತಜ್ಞರು ಶಿಫಾರಸು ಮಾಡಿದ್ದಾರೆ. ಅನುಭವ ಮಂಟಪ, ಕೂಡಲಸಂಗಮದ ಐಕ್ಯಮಂಟಪ ನಿರ್ಮಾಣಕ್ಕೂ ಚಿಂತನೆ ನಡೆಸಲಾಗಿದೆ. ಈ ಕುರಿತು ಡಿ.26ರಂದು ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೋವಿಡ್‌ ಶವ ಸಂಸ್ಕಾರಕ್ಕೆ 4 ಚಿತಾಗಾರ ಮೀಸಲಿಟ್ಟ ಬಿಬಿಎಂಪಿ

ಇಡೀ ಲಾಲ್‌ಭಾಗ್‌ನಲ್ಲಿ ಬಸವಣ್ಣ ಸೇರಿದಂತೆ ಅನೇಕ ಶರಣರ 500ರಿಂದ 600 ವಚನಗಳನ್ನು ವಿದ್ಯುತ್‌ ಕಂಬಗಳು, ಮರಗಳು ಒಳಗೊಂಡಂತೆ ನಾನಾ ಕಡೆ ಪ್ರದರ್ಶಿಸಲು ತೀರ್ಮಾನಿಸಲಾಗಿದೆ. ಬಸವಾದಿ ಶರಣರ ವಚನಗಳು, ಸಾಕ್ಷ್ಯ ಚಿತ್ರಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಪುಷ್ಪ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಮಾಡಲಾಗಿದೆ.

ಸಾಣೇಹಳ್ಳಿ ಸ್ವಾಮೀಜಿ ಅವರು ಬಸವ ತತ್ವ ಮತ್ತು ವಚನ ಸಾಹಿತ್ಯವನ್ನು ಒಳಗೊಂಡ 27 ರೂಪಕಗಳನ್ನು ಮಾಡಿದ್ದು, ಅವುಗಳನ್ನು ಲಾಲ್‌ಬಾಗಿನ ನಾಲ್ಕು ಪ್ರಮುಖ ಗೇಟ್‌ಗಳು ಹಾಗೂ ಒಳಭಾಗದಲ್ಲಿ ನಾಲ್ಕು ಸೇರಿದಂತೆ ಒಟ್ಟು ಎಂಟು ಸ್ಕ್ರೀನ್‌ಗಳಲ್ಲಿ ಪ್ರದರ್ಶಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...