ಬೆಂಗಳೂರು | ಲಾಲ್‌ಬಾಗ್‌ನ ವಾಯುವಿಹಾರಿಗಳಿಗೆ ಮತದಾನದ ಬಗ್ಗೆ ಜಾಗೃತಿ

Date:

  • ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಶೇ. 60 ಆಗಬೇಕೆಂಬ ಉದ್ದೇಶವಿದೆ ಎಂದ ಜಯರಾಮ್ ರಾಯಪುರ
  • ವಿಜಯ ಕಾಲೇಜಿನಲ್ಲಿ ಸುಮಾರು 500 ಯುವ ಮತದಾರರಿದ್ದು, ಅವರಿಗೆ ಮತದಾನ ಮಾಡಲು ಜಾಗೃತಿ ಮೂಡಿಸುವುದು

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೆ ತಕ್ಕಂತೆ ತಯಾರಿ ನಡೆಸಿರುವ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ನಗರದೆಲ್ಲೆಡೆ ಸಂಚರಿಸಿ, ಕಾರ್ಯಕ್ರಮಗಳನ್ನು ಆಯೋಜಿಸಿ ನಗರದ ನಾಗರಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅದರಂತೆಯೇ ಶುಕ್ರವಾರ ಲಾಲ್‌ಬಾಗ್‌ಗೆ ಬರುವ ವಾಯುವಿಹಾರಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಲ್ನಡಿಗೆ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು.

ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ದಕ್ಷಿಣ ವಲಯದ ಲಾಲ್‌ಬಾಗ್ ಪೂರ್ವ ದ್ವಾರದ ಬಳಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥ ಕಾರ್ಯಕ್ರಮಕ್ಕೆ ಪಾಲಿಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯಪುರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, “ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಶೇ.‌ 52 ರಷ್ಟಿದ್ದು, ಇದು ಶೇ. 60 ಆಗಬೇಕೆಂಬ ಉದ್ದೇಶದಿಂದ ಸಾಕಷ್ಟು ಮತದಾರರ ಜಾಗೃತಿ ಅಭಿಯಾನಗಳನ್ನು ಮಾಡಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಕ್ಷಿಣ ವಲಯದ ವಿಜಯ ಕಾಲೇಜಿನಲ್ಲಿ ಸುಮಾರು 500 ಯುವ ಮತದಾರರಿದ್ದು, ಕಾಲೇಜಿಗೆ ತೆರಳಿ ಮತದಾನದ ದಿನ ತಪ್ಪದೆ ಮತದಾನ ಮಾಡಲು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು. ಮೇ 10 ರವರೆಗೂ ಎಲ್ಲ ಕಾಲೇಜು, ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು‌.

ಲಾಲ್ ಬಾಗ್ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಬಂದಂತಹ ನಾಗರಿಕರಲ್ಲಿ ಮೇ 10 ರಂದು ತಪ್ಪದೆ ಮತದಾನ ಮಾಡಲು ಜಾಗೃತಿ ಮೂಡಿಸಲಾಯಿತು. ಜತೆಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು‌.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಹಾಸ್ಯ ನಟರಾದ ರಮಾನಂದರ ಗೆಜ್ಜೆ ಹೆಜ್ಜೆ ರಂಗತಂಡದಿಂದ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಈ ವೇಳೆ ವಲಯ ಜಂಟಿ ಆಯುಕ್ತ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಯಾದ ಡಾ. ಜಗದೀಶ್ ಕೆ. ನಾಯಕ್, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ಉಪ ಆಯುಕ್ತರಾದ ಲಕ್ಷ್ಮೀ ದೇವಿ, ಕಂದಾಯ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...