ಬೆಂಗಳೂರು | ನೀರಿಗೆ ಬಿಕ್ಕಟ್ಟು: ಪ್ಲಾನ್ ಬಿ ಇಲ್ಲ ಎಂದ ಪರಿಸರ ಇಲಾಖೆ

Date:

ನೀರಿನ ಅವಶ್ಯಕತೆ, ಲಭ್ಯತೆ ಮತ್ತು ಅವಲಂಬನೆಗೆ ಸಂಬಂಧಿಸಿದಂತೆ ಬೆಂಗಳೂರು ಅತ್ಯಂತ ದುರ್ಬಲ ನಗರಗಳಲ್ಲಿ ಒಂದಾಗಿದೆ. ಇತ್ತೀಚಿಗೆ ತಲೆದೋರಿರುವ ಬರದಿಂದಾಗಿ ರಾಜ್ಯದ ರಾಜಧಾನಿಯಲ್ಲಿ ನೀರಿನ ಸ್ಥಿತಿ ಚಿಂತಾಜನಕವಾಗಿದೆ. ಆದರೆ, ನೀರಿನ ಬಿಕ್ಕಟ್ಟು ನಿವಾರಿಸಲು ಪ್ಲಾನ್ ಬಿ ಯೋಜನೆ ಇಲ್ಲ ಎಂದು ಪರಿಸರ ಇಲಾಖೆ ಹೇಳಿದೆ.

ಬೆಂಗಳೂರು ಹೆಚ್ಚಾಗಿ ಕಾವೇರಿ ನೀರನ್ನು ಅವಲಂಬಿಸಿದೆ. ಕಾವೇರಿ ನೀರನ್ನು 100 ಕಿ.ಮೀ ದೂರದಿಂದ ಸುಮಾರು 540 ಮೀಟರ್ ಎತ್ತರಕ್ಕೆ ಪಂಪ್ ಮಾಡಲಾಗುತ್ತದೆ. ಈ ಕಾರಣದಿಂದಾಗಿ, ಇದು ಅತ್ಯಂತ ದುರ್ಬಲವಾಗಿದೆ. ಹೆಚ್ಚಿನ ಸಂಖ್ಯೆಯ ಒಳಚರಂಡಿ ಸಂಸ್ಕರಣಾ ಘಟಕಗಳನ್ನು (ಎಸ್‌ಟಿಪಿ) ಹೊಂದಿದ್ದರೂ, ಈ ಘಟಕಗಳಿಂದ ನೀರಿನ ಬಳಕೆ ಕಡಿಮೆಯಾಗಿದೆ.

“ಕೆರೆ ನೀರು ಕೂಡ ಬಳಕೆಯಾಗುತ್ತಿಲ್ಲ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಗಮನಿಸಿದರೆ, ಸರ್ಕಾರ ಮತ್ತು ಜನರು ನೀರಿನ ಪರ್ಯಾಯ ಮೂಲಗಳಿಗಾಗಿ ಪ್ಲಾನ್ ಬಿ ಅನ್ನು ಕಂಡುಕೊಳ್ಳಲೇಬೇಕು. ಅಪಾರ್ಟ್‌ಮೆಂಟ್‌, ವಾಣಿಜ್ಯ ಸಂಸ್ಥೆಗಳು ಪ್ರತಿನಿತ್ಯ ಟ್ಯಾಂಕರ್‌ಗಳಲ್ಲಿ ನೀರು ಖರೀದಿಸುತ್ತಿವೆ. ನಗರದ ಹೊರವಲಯದಲ್ಲಿ ಪರಿಸ್ಥಿತಿ ಹದಗೆಟ್ಟಿದೆ” ಎಂದು ಪರಿಸರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಮಾತನಾಡಿ, “ನಗರದಲ್ಲಿ 33 ಸರ್ಕಾರಿ ಎಸ್‌ಟಿಪಿಗಳು ಕಾರ್ಯನಿರ್ವಹಿಸುತ್ತಿದ್ದು, 340 ಎಂಎಲ್‌ಡಿ ಪಂಪ್ ಮಾಡಲಾಗುತ್ತಿದೆ. ಇನ್ನೂ 24 ಎಸ್‌ಟಿಪಿಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಮತ್ತೊರ್ವ ಬಿಡಬ್ಲೂಎಸ್‌ಎಸ್‌ಬಿ ಅಧಿಕಾರಿ ಮಾತನಾಡಿ, “ನಗರಕ್ಕೆ 1450 ಎಮ್‌ಎಲ್‌ಡಿ ಕಾವೇರಿ ನೀರು ಸಿಗುತ್ತದೆ. ಕಾವೇರಿ ಹಂತ-5 ರ ಅಡಿಯಲ್ಲಿ ಬೆಂಗಳೂರಿಗೆ 775 ಎಂಎಲ್‌ಡಿ ಸಿಗುತ್ತದೆ. ಇದನ್ನು ಉಪನಗರಗಳ 110 ಹಳ್ಳಿಗಳಿಗೆ ಪಂಪ್ ಮಾಡಲಾಗುತ್ತದೆ. ನಗರವು 700-750 ಎಮ್‌ಎಲ್‌ಡಿ ಅಂತರ್ಜಲವನ್ನು ಸಹ ಬಳಸಲಾಗುತ್ತದೆ. ಬೆಂಗಳೂರಿನ ಅಗತ್ಯತೆಗಳನ್ನು ಪೂರೈಸಲು ಮಾರ್ಚ್‌ವರೆಗೆ ಪ್ರತಿ ತಿಂಗಳು 1.6 ಟಿಎಂಸಿ ನೀರು ಮತ್ತು ಏಪ್ರಿಲ್‌ನಿಂದ 2.42 ಟಿಎಂಸಿ ನೀರು ಕಾಯ್ದಿರಿಸುವಂತೆ ಬಿಡಬ್ಲೂಎಸ್‌ಎಸ್‌ಬಿ ಕಾವೇರಿ ನೀರಾವರಿ ನಿಗಮಕ್ಕೆ ಪತ್ರ ಬರೆದಿದೆ” ಎಂದಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಪ್ರಕಾರ, “ಕಳೆದ ಎರಡು ವರ್ಷಗಳಲ್ಲಿ ಎಸ್‌ಟಿಪಿಗಳನ್ನು ಸ್ಥಾಪಿಸಲು ಖಾಸಗಿ ಸಂಸ್ಥೆಗಳಿಂದ 302 ಅರ್ಜಿಗಳನ್ನು ತೆರವುಗೊಳಿಸಲಾಗಿದೆ.

ಬಿಬಿಎಂಪಿ ಪ್ರಕಾರ, ನಗರದಲ್ಲಿ 210 ಕೆರೆಗಳಿದ್ದು, 1 ಟಿಎಂಸಿ ಅಡಿ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳಾ ಪ್ರಯಾಣಕಿ ಮೇಲೆ ಆಟೋ ಚಾಲಕನಿಂದ ಹಲ್ಲೆ

ವೆಲ್ ಲ್ಯಾಬ್ಸ್‌ನ ಅರ್ಬನ್ ವಾಟರ್ ಪ್ರೋಗ್ರಾಮ್‌ನ ವ್ಯವಸ್ಥಾಪಕ ಪಾಲುದಾರ ಶ್ರೇಯಾ ನಾಥ್ ಮಾತನಾಡಿ, “ಬೆಂಗಳೂರು ಅತಿ ಹೆಚ್ಚು ವಿಕೇಂದ್ರೀಕೃತ ಎಸ್‌ಟಿಪಿಗಳನ್ನು ಹೊಂದಿದೆ. ಕೆಎಸ್‌ಪಿಸಿಬಿ ಮಾಸ್ಟರ್ ಪಟ್ಟಿಯ ಪ್ರಕಾರ, ಸುಮಾರು 3,500 ಎಸ್‌ಟಿಪಿ ಅರ್ಜಿಗಳನ್ನು ಮಾಡಲಾಗಿದೆ ಮತ್ತು ಅವುಗಳ ಸಿಂಧುತ್ವವನ್ನು ಮೌಲ್ಯಮಾಪನ ಮಾಡಲಾಗುತ್ತಿದೆ” ಎಂದಿದ್ದಾರೆ.

“ಚೆನ್ನೈನಲ್ಲಿ ಸುಮಾರು 1,000, ಹೈದರಾಬಾದ್ 800 ಮತ್ತು ಪುಣೆ 600 ಎಸ್‌ಟಿಪಿಗಳನ್ನು ಹೊಂದಿದೆ. 20 ಕ್ಕೂ ಹೆಚ್ಚು ಯೂನಿಟ್‌ಗಳ ಅಪಾರ್ಟ್‌ಮೆಂಟ್‌ ಸಂಕೀರ್ಣಗಳಲ್ಲಿ ಎಸ್‌ಟಿಪಿಗಳನ್ನು ಸ್ಥಾಪಿಸುವುದು. ಸಂಸ್ಕರಿಸಿದ ನೀರಿನ ಬಳಕೆಯನ್ನು ಕಡ್ಡಾಯಗೊಳಿಸಿರುವುದರಿಂದ ಬೆಂಗಳೂರು ಅತಿ ಹೆಚ್ಚು ಸಂಖ್ಯೆಯನ್ನು ಹೊಂದಿದೆ” ಎಂದು ತಿಳಿಸಿದ್ದಾರೆ.

“ಅಲ್ಲದೆ, ಲ್ಯಾಬ್ಸ್ ಎಸ್‌ಟಿಪಿಗಳ ಸ್ಥಿತಿಯನ್ನು ನಿರ್ಣಯಿಸುತ್ತಿದೆ. 2019ರ ನೀತಿ ಆಯೋಗದ ಸಂಯೋಜಿತ ನೀರು ನಿರ್ವಹಣಾ ಸೂಚ್ಯಂಕ ವರದಿಯನ್ನು ಅವರು ಸೂಚಿಸಿದರು. ಬೆಂಗಳೂರು ಅತಿಯಾಗಿ ಶೋಷಿತ ವರ್ಗದ ಅಡಿಯಲ್ಲಿ ಬರುತ್ತದೆ” ಎಂದು ಹೇಳಿದ್ದಾರೆ.

ಮೂಲ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...