2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

Date:

  • ಬೆಂಗಳೂರು 2050ರ ವೇಳೆಗೆ ದಿನಕ್ಕೆ 514 ದಶಲಕ್ಷ ಲೀಟರ್ ನೀರಿನ ಕೊರತೆಯನ್ನು ಎದುರಿಸಲಿದೆ
  • ಬಿಡಬ್ಲ್ಯೂಎಸ್‌ಎಸ್‌ಬಿ ಕಾವೇರಿ ನದಿಯಿಂದ 1,470 ಎಂಎಲ್‌ಡಿ ಶುದ್ಧ ನೀರನ್ನು ಪಂಪ್ ಮಾಡುತ್ತದೆ

ಭಾರತದಲ್ಲಿ 2050ರ ವೇಳೆಗೆ ತಾಜಾ ನೀರಿನ ವಾರ್ಷಿಕ ಬೇಡಿಕೆಯು 1,180 ದಶಲಕ್ಷ ಘನ ಮೀಟರ್‌ಗಳನ್ನು ತಲುಪುವ ನಿರೀಕ್ಷೆಯಿದೆ. ಆದರೆ, ಪ್ರಸ್ತುತ ಪೂರೈಕೆಯು ಕೇವಲ 1,126 ದಶಲಕ್ಷ ಘನ ಮೀಟರ್ ಇದೆ ಎಂದು ತಜ್ಞರು ಹೇಳಿದ್ದಾರೆ. ನೀರಿನ ಕೊರತೆಯು ಬೆಂಗಳೂರನ್ನೂ ಬಾಧಿಸಲಿದೆ ಎಂದೂ ಅವರು ಹೇಳಿದ್ದಾರೆ.

ಇಂಡಿಯನ್ ಪ್ಲಂಬಿಂಗ್ ಅಸೋಸಿಯೇಷನ್ (ಐಪಿಎ) ಬೆಂಗಳೂರಿನಲ್ಲಿ ನೀರು, ನೈರ್ಮಲ್ಯ ಮತ್ತು ಕೊಳಾಯಿ ಉತ್ಪನ್ನಗಳ ಪ್ರದರ್ಶನ ‘ಪ್ಲಂಬೆಕ್ಸ್ ಇಂಡಿಯಾ 2023’ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರೀಯ ಜಲ ಮಿಷನ್‌ನ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಿಷನ್ ನಿರ್ದೇಶಕಿ ಅರ್ಚನಾ ವರ್ಮಾ, “ಬೆಂಗಳೂರು 2050ರ ವೇಳೆಗೆ ದಿನಕ್ಕೆ 514 ದಶಲಕ್ಷ ಲೀಟರ್ (ಎಂಎಲ್‌ಡಿ) ನೀರಿನ ಕೊರತೆಯನ್ನು ಎದುರಿಸಲಿದೆ” ಎಂದು ಹೇಳಿದ್ದಾರೆ.

“ಬಿಡಬ್ಲ್ಯೂಎಸ್‌ಎಸ್‌ಬಿ ಕಾವೇರಿ ನದಿಯಿಂದ 1,470 ಎಂಎಲ್‌ಡಿ ಶುದ್ಧ ನೀರನ್ನು ಪಂಪ್ ಮಾಡುತ್ತದೆ. ಆದರೆ, ಪ್ರಸ್ತುತ ಬೇಡಿಕೆ 2,100 ಎಂಎಲ್‌ಡಿ ಇದೆ. 630 ಎಂಎಲ್‌ಡಿಯಷ್ಟು ನೀರನ್ನು ಬೋರ್‌ವೆಲ್ ಮತ್ತು ಟ್ಯಾಂಕರ್‌ಗಳಿಂದ ಪೂರೈಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತಮ ಕೊಳಾಯಿ ಮತ್ತು ನಿಧಾನವಾಗಿ ನೀರು ಹರಿಯುವ ಫಿಕ್ಚರ್‌ಗಳನ್ನು ಅಳವಡಿಸುವ ಮೂಲಕ ನೀರನ್ನು ಉಳಿಸಬಹುದು. ನೀರಿನ ಉಳಿವಿಗಾಗಿ ‘ಐಪಿಎ’ನಂತಹ ಸಂಘಗಳು ಜಾಗೃತಿ ಮೂಡಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ” ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಗೆ ಒಂಬತ್ತು ಜನಪದ ಸಾಧಕರ ಆಯ್ಕೆ

ಐಪಿಎಯ ರಾಷ್ಟ್ರೀಯ ಅಧ್ಯಕ್ಷ ಗುರ್ಮಿತ್ ಸಿಂಗ್ ಅರೋರಾ ಮಾತನಾಡಿ, “ಹಲವು ನಗರಗಳಲ್ಲಿ ನೀರು ಮತ್ತು ಅಂತರ್ಜಲ ವೇಗವಾಗಿ ಖಾಲಿಯಾಗುತ್ತಿದೆ. ಇಂದು, ಬೆಂಗಳೂರಿನ ಸರಾಸರಿ ಅಂತರ್ಜಲ ಮಟ್ಟವು ಸುಮಾರು 800 ಅಡಿಗಳಷ್ಟಿದೆ. 30 ವರ್ಷಗಳ ಹಿಂದೆ ಇದು ಕೇವಲ 100 ಅಡಿ ಇತ್ತು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...