ಬೆಂಗಳೂರು | ಅತ್ತಿಬೆಲೆಯಲ್ಲಿ ಹೊತ್ತಿ ಉರಿದ ಪಟಾಕಿ ಅಂಗಡಿ: 12 ಮಂದಿ ಮೃತ್ಯು

Date:

ಪಟಾಕಿ ಅನ್‌ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ.

ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ ಪರಿಣಾಮ, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ವರ್ಷದಂತೆ ದೀಪಾವಳಿಗಾಗಿ ವಿಶೇಷ ಪಟಾಕಿ ಲೋಡ್ ಲಾರಿಯಿಂದ ಇಳಿಸುವ ಸಂದರ್ಭದಲ್ಲಿ ಈ ಅಚಾತುರ್ಯ ಸಂಭವಿಸಿದೆ. ಅಲ್ಲದೆ ಇನ್ನೂ ಕೆಲವರಿಗೆ ಗಾಯಗಳಾಗಿವೆ. ಘಟನೆ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಥಳೀಯರೂ ಕೂಡ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದು, ಅಂಗಡಿ ಸುಟ್ಟು ಕರಕಲಾಗಿದೆ.

ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿ ಆಗುವುದರೊಂದಿಗೆ 1 ಕ್ಯಾಂಟರ್, 2 ಬೊಲೆರೋ, 4 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ದೊಡ್ಡ ಮಳಿಗೆ ಆಗಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೂ ಪಟಾಕಿ ಅಂಗಡಿ ದುರಂತ ಎಫೆಕ್ಟ್ ತಟ್ಟಿದ್ದು, ಅತ್ತಿಬೆಲೆ ಕಡೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ‘ಬಾಲಾಜಿ ಕ್ರಾಕರ್ಸ್ ದಾಸ್ತಾನು ಮಳಿಗೆಗೆ ಕ್ಯಾಂಟರ್ ವಾಹನದಿಂದ ಪಟಾಕಿ ಇಳಿಸುವಾಗ ಅವಘಡ ಸಂಭವಿಸಿದೆ. ಕೂಡಲೇ ಮಳಿಗೆ ಮತ್ತು ಗೋದಾಮಿಗೆ ಬೆಂಕಿಯ ಜ್ವಾಲೆ ಆವರಿಸಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ” ಎಂದು ತಿಳಿಸಿದರು.

‘ಸದ್ಯ ಶೇ. 80ರಷ್ಟು ಬೆಂಕಿ ನಿಯಂತ್ರಣ ಮಾಡಲಾಗಿದೆ. ಘಟನೆಯಲ್ಲಿ ಮಳಿಗೆಯ ಮಾಲೀಕ ನವೀನ್‌ಗೂ ಸುಟ್ಟ ಗಾಯಗಳಾಗಿದೆ. ಬೆಂಕಿ ಸಂಪೂರ್ಣ ನಂದಿಸಿದ ಬಳಿಕ ಮಳಿಗೆ ಒಳಗೆ ಎಷ್ಟು ಜನ ಕಾರ್ಮಿಕರು ಸಿಲುಕಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಗಲಿದೆ. ಪರಿಶೀಲನೆಗಾಗಿ ಎಫ್.ಎಸ್.ಎಲ್ ಟೀಮ್ ಆಗಮಿಸಲಿದೆ. ಮಳಿಗೆ ಪರವಾನಗಿ ಬಗ್ಗೆಯೂ ಪರಿಶೀಲನೆ ಮಾಡಲಿದ್ದೇವೆ’ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...