ಬಿಬಿಎಂಪಿ | ಮತದಾರ ಪಟ್ಟಿಗೆ ಸೇರ್ಪಡೆ; ಬಿಬಿಎಂಪಿ ವಿಶೇಷ ನೋಂದಣಿ ಅಭಿಯಾನ

Date:

ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಸುವಂತೆ ಯುವಜನರನ್ನು ಪ್ರೇರೇಪಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ಎರಡು ದಿನ ವಿಶೇಷ ನೋಂದಣಿ ಅಭಿಯಾನ ಆರಂಭಿಸಿದೆ.

ಅಭಿಯಾನವು ಡಿಸೆಂಬರ್ 2 ಮತ್ತು 3ರಂದು ನಡೆಯಲಿದೆ. ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಅಭಿಯಾನ ನಡೆಯಲಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ಅ.27 ರಂದು ಬೆಂಗಳೂರು ಚುನಾವಣಾಧಿಕಾರಿಗಳು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಆ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ ಮಾಡಿಕೊಳ್ಳುವುದರ ಜತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸಹ ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತು (ನಮೂನೆ-6: ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೊಳಿಸಲು, ನಮೂನೆ-7: ಮತದಾರರ ಪಟ್ಟಿ ಕುರಿತ ಆಕ್ಷೇಪಣೆ ಹಾಗೂ ನಮೂನೆ-8: ಮತದಾರರ ಚೀಟಿಯಲ್ಲಿನ ಬದಲಾವಣೆಗಾಗಿ) ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು ಅಥವಾ voters.eci.gov.in ಅಥವಾ Voter Helpline Mobile App ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ದೇಶದ ಸರ್ವತೋಮುಖ ಅಭಿವೃದ್ಧಿಗೆ ಯುವ ಮತದಾರರು ಪ್ರಮುಖ ಪಾತ್ರ ವಹಿಸಲಿದ್ದಾರೆ. 2024 ಜನವರಿ 1ಕ್ಕೆ 18 ವರ್ಷ ತುಂಬುವ ಎಲ್ಲ ಯುವ ಮತದಾರರು ತಮ್ಮ ಹತ್ತಿರದ ಮತಗಟ್ಟೆಗಳ ಬಳಿ ತೆರಳಿ ಫಾರಂ-6 ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಬಹುದು. ಅಥವಾ voters.eci.gov.in ಅಥವಾ Voter Helpline Mobile App  ಮೂಲಕ ಸ್ವಯಂ ನೋಂದಾಯಿಸಿಕೊಳ್ಳಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶಾಲೆಗಳಿಗೆ ಬಾಂಬ್ ಬೆದರಿಕೆ: 48 ಎಫ್‌ಐಆರ್‌ ದಾಖಲು

ನಗರದಲ್ಲಿರುವ ಕಾಲೇಜುಗಳಲ್ಲಿ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಾಲಿಕೆ ಹೇಳಿದೆ.

“ವಿಶೇಷ ನೋಂದಣಿ ಅಭಿಯಾನದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹೊಸ ಮತದಾರರ ನೋಂದಣಿ ಮಾಡಿಕೊಳ್ಳುತ್ತಾರೆ. ಜತೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ” ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...