ಅನುಮತಿ ಇಲ್ಲದೆ ಅಕ್ರಮವಾಗಿ ರಸ್ತೆ ಅಗೆದರೆ ಎಫ್‌ಐಆರ್ ದಾಖಲು: ತುಷಾರ್ ಗಿರಿನಾಥ್

Date:

  • ಸೂಕ್ತ ಅನುಮತಿಯಿಲ್ಲದೆ ರಸ್ತೆ ಅಗೆದಿದ್ದಲ್ಲಿ ಎಫ್‌ಐಆರ್ ದಾಖಲಿಸಿ ಎಂದ ಬಿಬಿಎಂಪಿ ಮುಖ್ಯ ಆಯುಕ್ತ
  • ರಸ್ತೆಗಳನ್ನು ಅಗೆಯುವುದಕ್ಕೂ ಮೊದಲು ಕಂಪನಿಗಳು ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ರಸ್ತೆಗಳನ್ನು ಅಗೆದು ಕೇಬಲ್ ಅಳವಡಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ಹಾಕುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

ನಗರದ ವಿವಿ ಪುರಂ, ಸುಂಕೇನಹಳ್ಳಿ, ಜಯನಗರ, ಹೊಂಬೇಗೌಡನಗರ ವಾರ್ಡ್‌ಗಳಲ್ಲಿ ಇತ್ತೀಚೆಗೆ ಅಕ್ರಮವಾಗಿ ರಸ್ತೆಗಳನ್ನು ಅಗೆದು ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್‌ಸಿ) ಹಾಕಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿನ ರಸ್ತೆಗಳನ್ನು ಅಗೆಯುವುದಕ್ಕೂ ಮೊದಲು ಕಂಪನಿಗಳು ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು. ಆದರೆ, ರಸ್ತೆಗಳನ್ನು ಅಗೆಯಲು ಅನುಮತಿ ಪತ್ರವನ್ನು ಬಳಸದಿರುವುದರ ಜೊತೆಗೆ, ಹಲವು ಕಂಪನಿಗಳು ರಸ್ತೆ ಅಗೆದು ಪುನಃ ಸ್ಥಾಪಿಸಲು ವಿಫಲವಾಗಿವೆ. ರಸ್ತೆ ಅಗೆದು ಹಾಗೆಯೇ ಬಿಡಲಾಗುತ್ತಿದೆ. ಹಾಗಾಗಿ, ಕಂಪನಿಗಳು ಇಂತಹ ಕಾಮಗಾರಿಗಳನ್ನು ಆರಂಭಿಸುವ ಮುನ್ನ ಬಿಬಿಎಂಪಿಯಿಂದ ಅನುಮತಿ ಪಡೆದಿರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೆಲಿಕಾಂ ಆಪರೇಟರ್‌ಗಳು, ಒಎಫ್‌ಸಿ ಗುತ್ತಿಗೆದಾರರು ಮತ್ತು ಇಬ್ಬರು ಬಿಬಿಎಂಪಿ ಇಂಜಿನಿಯರ್‌ಗಳ ವಿರುದ್ಧ ಬಿಜೆಪಿ ಬೆಂಗಳೂರು (ದಕ್ಷಿಣ) ಅಧ್ಯಕ್ಷ ಎನ್‌ಆರ್ ರಮೇಶ್ ಅವರು ದೂರು ನೀಡಿದ ನಂತರ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಈ ಕ್ರಮ ಕೈಗೊಂಡಿದ್ದಾರೆ.

ಸೂಕ್ತ ಅನುಮತಿಯಿಲ್ಲದೆ ರಸ್ತೆ ಅಗೆದಿದ್ದಲ್ಲಿ ಎಫ್‌ಐಆರ್ ದಾಖಲಿಸಿ ಎಂದು ತುಷಾರ್ ಗಿರಿನಾಥ್ ಅವರು ಬಿಬಿಎಂಪಿಯ ಒಎಫ್‌ಸಿ ವಿಭಾಗದ ಮುಖ್ಯ ಎಂಜಿನಿಯರ್‌ಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ವರ್ಷ ರೂ. 4,600 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲು ಗುರಿ ನಿಗದಿಪಡಿಸಿದ ಬಿಬಿಎಂಪಿ

ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ಸೇರಿದಂತೆ ನಾಲ್ಕು ಟೆಲಿಕಾಂ ಆಪರೇಟರ್‌ಗಳು ಡಿಸೆಂಬರ್ 2021 ಮತ್ತು ಮಾರ್ಚ್ 2022ರಲ್ಲಿ ವಿವಿ ಪುರಂ, ಸುಂಕೇನಹಳ್ಳಿ, ಜಯನಗರ, ಹೊಂಬೇಗೌಡನಗರ ವಾರ್ಡ್‌ಗಳಲ್ಲಿ 632 ಮೀಟರ್, 1,837 ಮೀಟರ್ ಮತ್ತು 557 ಮೀಟರ್ ವಿಸ್ತರಣೆ ಭೂಗತ ಕೇಬಲ್‌ಗಳನ್ನು ಹಾಕಲು ಅನುಮತಿ ಕೇಳಿದ್ದಾರೆ ಎಂದು ಬಿಜೆಪಿ ಬೆಂಗಳೂರು (ದಕ್ಷಿಣ) ಅಧ್ಯಕ್ಷ ರಮೇಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ರಸ್ತೆಗಳನ್ನು ಡಾಂಬರೀಕರಣಗೊಳಿಸಲು ಬಿಬಿಎಂಪಿ ₹11 ಕೋಟಿ ವೆಚ್ಚ ಮಾಡಿದೆ. ಆದರೆ, ಹೊಸದಾಗಿ ಹಾಕಿದ ರಸ್ತೆಗಳನ್ನು ಅಗೆದು ಹಾಳು ಮಾಡಿದ್ದಾರೆ. ನಗರದಾದ್ಯಂತ ಇದೇ ರೀತಿ ಅಕ್ರಮವಾಗಿ ರಸ್ತೆ ಅಗೆಯುವ ದೂರುಗಳು ಬಂದರೂ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...