ಬಿಬಿಎಂಪಿ ಯುಗಾಂತ್ಯ, ಇಂದಿನಿಂದ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ

Date:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇಂದಿಗೆ ಯುಗಾಂತ್ಯವಾಗಿದೆ. ಇನ್ಮುಂದೆ ಬಿಬಿಎಂಪಿ ಎನ್ನುವ ಹೆಸರು ಬೆಂಗಳೂರಿಗರ ಜನಮಾನಸದಿಂದ ದೂರವಾಗಲಿದೆ. ಹೌದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕನಸಿಬ ‘ಗ್ರೇಟರ್ ಬೆಂಗಳೂರು’ ಉದಯಿಸಿದ್ದು, ಸಿಲಿಕಾನ್ ಸಿಟಿಯ ವ್ಯಾಪ್ತಿ ಕೂಡ ದೊಡ್ಡದಾಗಲಿದೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆಯನ್ನು ಮೇ 15ರಂದು ಜಾರಿಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ. ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರ ಆಡಳಿತ ವಹಿಸಿಕೊಳ್ಳುವವರೆಗೆ ಬಿಬಿಎಂಪಿ ಮುಂದುವರಿಯಲಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ತುಷಾರ್ ಗಿರಿನಾಥ್ ಅವರು ಗುರುವಾರದಿಂದ ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಜಿ) ಕಾಯ್ದೆ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಜಿಬಿಎ ಅಡಿಯಲ್ಲಿ ವಿವಿಧ ನಿಗಮಗಳ ಪುನರ್ರಚನೆ ಪೂರ್ಣಗೊಳ್ಳುವವರೆಗೆ, ನಿಗಮದ ಕಾರ್ಯಚಟುವಟಿಕೆಯಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ಹಂತದಲ್ಲಿ, ಜಿಬಿಎ ಅಡಿಯಲ್ಲಿ ಬರುವ ಪ್ರದೇಶಗಳನ್ನು ಸೂಚಿಸಲಾಗುತ್ತದೆ. ಅದು ಮುಗಿದ ನಂತರ, ಈ ಪ್ರದೇಶಗಳನ್ನು ಜಿಬಿಜಿ ಕಾಯ್ದೆಯ ಸೆಕ್ಷನ್ 5 ರ ಪ್ರಕಾರ ನಿಗಮಗಳನ್ನು ರಚಿಸಲು ಮತ್ತಷ್ಟು ವಿಂಗಡಿಸಲಾಗುತ್ತದೆ. ಕಾರ್ಯವಿಧಾನದ ಪ್ರಕಾರ, ಇದು ಅಧಿಸೂಚನೆಯನ್ನು ನೀಡುವುದು ಮತ್ತು ಆಕ್ಷೇಪಣೆ ಸಲ್ಲಿಸುವುದನ್ನು ಸಹ ಒಳಗೊಂಡಿರುತ್ತದೆ ಎಂದು ಗಿರಿನಾಥ್ ವಿವರಿಸಿದ್ದಾರೆ.

ಕಾಯ್ದೆಯ ಪ್ರಕಾರ ಮೂರು ಇಲ್ಲವೇ ಐದು ಪಾಲಿಕೆಯನ್ನಾಗಿ ಮಾಡಿ ಗ್ರೇಟರ್ ಬೆಂಗಳೂರು ಕೇಂದ್ರ, ಗ್ರೇಟರ್ ಬೆಂಗಳೂರು ಉತ್ತರ, ಗ್ರೇಟರ್ ಬೆಂಗಳೂರು ದಕ್ಷಿಣ ಹೀಗೆ ನಾಮಕರಣ ಮಾಡುವ ಸಾಧ್ಯತೆ ಇದೆ. ಜಿಬಿಎ ಆಡಳಿತಾಧಿಕಾರಿ ಅಧಿಕಾರ ಚಲಾಯಿಸಲಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಲಿದ್ದಾರೆ. ಉಳಿದಂತೆ ಸ್ಥಳೀಯ ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆಗಳು ಮುಖ್ಯಸ್ಥರು ಸದಸ್ಯರಾಗಿರಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿರ್ಭೀತ ನ್ಯಾಯಮೂರ್ತಿಗಳು ಮತ್ತು ಕಾಕತಾಳೀಯ ಕಾವ್ಯಾತ್ಮಕ ನ್ಯಾಯ

ಗ್ರೇಟರ್ ಬೆಂಗಳೂರಿನಿಂದ ಸಿಲಿಕಾನ್ ಸಿಟಿಯ ವ್ಯಾಪ್ತಿ ಕೂಡ ಹಿರಿದಾಗಲಿದೆ. ನಗರದ ಕೈಗಾರಿಕಾ ಪ್ರದೇಶ ಎಲೆಕ್ಟ್ರಾನಿಕ್ ಸಿಟಿ, ಜಿಗಣಿ, ಅತ್ತಿಬೆಲೆ, ಬಾಗಲೂರು, ಬೊಮ್ಮಸಂದ್ರ, ಹೆಸರಘಟ್ಟ, ಹಾರೋಹಳ್ಳಿ, ದಾನಸಪುರ, ಕುಂಬಳಗೋಡು ಸೇರಿದಂತೆ ಹಲವು ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಗೆ ಸೇರಿಸಿಕೊಳ್ಳಲಿದೆ. ಗ್ರೇಟರ್ ಬೆಂಗಳೂರಿನಲ್ಲಿ ಹಲವು ಬದಲಾವಣೆ ಸಾಧ್ಯತೆ ಇದ್ದು,ಕಟ್ಟಡಗಳ ಗಾತ್ರ, ಎತ್ತರ ನಿಯಮಗಳು ಬದಲಾಗುವ ಸಾಧ್ಯತೆ ಇದೆ.

2007ರಲ್ಲಿ ರಚನೆಯಾಗಿದ್ದ ಬಿಬಿಎಂಪಿಯ 2010 ರಲ್ಲಿ ಸ್ಥಳೀಯ ಚುನಾವಣೆಗಳು ನಡೆದಿತ್ತು. ಇಂತಹ ಬಿಬಿಎಂಪಿ ಇಂದು ತನ್ನ ಅಸ್ತಿತ್ವ ಕಳೆದುಕೊಳ್ಳಲಿದ್ದು, ಇಂದಿನಿಂದ ಗ್ರೇಟರ್ ಬೆಂಗಳೂರು ಜಾರಿಯಾಲಿದೆ. ಕಳೆದ ನಾಲ್ಕು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಇಂತಹ ಟೈಂನಲ್ಲಿ ಗ್ರೇಟರ್ ಬೆಂಗಳೂರಿನ ಆಡಳಿತದ ಬಗ್ಗೆ ಸಹಜವಾಗಿಯೇ ಕುತೂಹಲ, ಪ್ರಶ್ನೆಗಳು ಮುಂದಿವೆ.

ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಗುರುವಾರ (ಮೇ 15) ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.

ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ

“ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

WhatsApp Image 2025 05 14 at 7.47.39 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...