ಬಿಬಿಎಂಪಿ ಅಗ್ನಿ ಅವಘಡ | ಮುಖ್ಯ ಎಂಜಿನಿಯರ್ ಪ್ರಹ್ಲಾದ್‌ಗೆ ಮತ್ತೊಮ್ಮೆ ನೋಟಿಸ್ ಜಾರಿ ಸಾಧ್ಯತೆ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ, ಹಲಸೂರು ಗೇಟ್‌ ಠಾಣೆ ಪೊಲೀಸರು ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ.ಎಸ್‌ ಪ್ರಹ್ಲಾದ್‌ ಅವರಿಗೆ ಎರಡನೇ ಬಾರಿ ನೋಟಿಸ್‌ ಜಾರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.  

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಆಗಸ್ಟ್ 11ರಂದು ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ, ಒಟ್ಟು 9 ಮಂದಿಗೆ ಸುಟ್ಟಗಾಯಗಳಾಗಿದ್ದವು. ಈ ಪೈಕಿ ಇಬ್ಬರು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್‌ ಠಾಣೆಯ ಪೊಲೀಸರು ಆಗಸ್ಟ್ 12ರಂದು ಬಿಬಿಎಂಪಿ ಅಧಿಕಾರಿ ಬಿ ಎಸ್‌ ಪ್ರಹ್ಲಾದ್‌ಗೆ ಮೊದಲು ನೋಟಿಸ್ ಜಾರಿ ಮಾಡಿದ್ದರು. ಆದರೆ, ಅಧಿಕಾರಿ ತನ್ನ ಹೇಳಿಕೆಯನ್ನು ದಾಖಲಿಸಲು ಇಲ್ಲಿಯವರೆಗೆ ಪೊಲೀಸರ ಮುಂದೆ ಹಾಜರಾಗಿಲ್ಲ” ಎಂದು ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಬಿಎಂಪಿ ಅಧಿಕಾರಿ ಪ್ರಹ್ಲಾದ್ ಅವರು ಅಗ್ನಿ ಅವಘಡದ ತನಿಖೆಯನ್ನು ನಡೆಸುವ ಉಸ್ತುವಾರಿ ವಹಿಸಿದ್ದಾರೆ. ಅವರು ದಾಖಲೆಗಳ ಸಂಗ್ರಹ ಮತ್ತು ಇತರ ಕೆಲಸಗಳಲ್ಲಿ ನಿರತರಾಗಿದ್ದಾರೆ ಎಂದು ಹೇಳುತ್ತಾರೆ. ಅವರು ಇನ್ನೂ ವಿಚಾರಣೆಗೆ ಹಾಜರಾಗಿಲ್ಲ. ಸಾಮಾನ್ಯವಾಗಿ, ಒಬ್ಬ ವ್ಯಕ್ತಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ” ಎಂದು ಮತ್ತೋರ್ವ ಅಧಿಕಾರಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು-ಮೈಸೂರು ಹೆದ್ದಾರಿ: 24 ಸ್ಕೈವಾಕ್‌ ನಿರ್ಮಿಸಲು ನಿರ್ಧರಿಸಿದ ಹೆದ್ದಾರಿ ಪ್ರಾಧಿಕಾರ

“ಎರಡನೇ ನೋಟಿಸ್ ನಂತರವೂ ಅಧಿಕಾರಿ ವಿಚಾರಣೆಗೆ ಹಾಜರಾಗದಿದ್ದರೆ, ಅಧಿಕಾರಿಯು ಅಸಹಕಾರ ಮತ್ತು ತನಿಖೆಗೆ ಹಾಜರಾಗಲಿಲ್ಲ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗುತ್ತದೆ. ಆಗ ಅವರು ನ್ಯಾಯಾಲಯಕ್ಕೆ ಮಾತ್ರ ಉತ್ತರಿಸುತ್ತಾರೆ. ಘಟನೆಯಲ್ಲಿ ಅಧಿಕಾರಿ ಆರೋಪಿ ಸ್ಥಾನದಲ್ಲಿ ಇಲ್ಲ ಮತ್ತು ಅವರನ್ನು ಬಂಧಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿರುವ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ (ಕ್ಯೂಎಎಲ್) ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...