ಬಿಬಿಎಂಪಿ | 2024-25ನೇ ಸಾಲಿನ ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆ ಸಲ್ಲಿಸಲು ಅವಕಾಶ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 2024-25ನೇ ಸಾಲಿನ ಆಯವ್ಯಯದ ತಯಾರಿಕೆಯ ಸಿದ್ಧತೆ ನಡೆದಿದ್ದು, ಈ ಹಿನ್ನೆಲೆ, ಆಯವ್ಯಯಕ್ಕೆ ಸಾರ್ವಜನಿಕರು ಸಲಹೆ, ಸೂಚನೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಪಾಲಿಕೆಯ 2024-25ನೇ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದೆ. ಈ ಹಿನ್ನೆಲೆ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ನಿರ್ದೇಶನದಂತೆ ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸಲಹೆ/ಸೂಚನೆಗಳನ್ನು ಕಳುಹಿಸಬಹುದಾಗಿದೆ.

ಸಾರ್ವಜನಿಕರು ತಮ್ಮ ಸಲಹೆಗಳನ್ನು ಪಾಲಿಕೆಗೆ ಸಲ್ಲಿಸಲು ಅನುಕೂಲವಾಗುವಂತೆ ಬಿಬಿಎಂಪಿ ಕೇಂದ್ರ ಕಚೇರಿಯ ಮುಖ್ಯ ದ್ವಾರದ ಬಳಿ ಸಲಹಾ ಪೆಟ್ಟಿಗೆ(ಬಾಕ್ಸ್) ಅನ್ನು ಇರಿಸಿದ್ದು, ಸಾರ್ವಜನಿಕರು ಸಲಹಾ ಪೆಟ್ಟಿಗೆಯ ಮೂಲಕ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವರದಕ್ಷಿಣೆ ಕಿರುಕುಳ ಆರೋಪ

2024-25ನೇ ಸಾಲಿನ ಕರಡು ಆಯವ್ಯಯಕ್ಕೆ ನಗರದ ಎಲ್ಲಾ ಸಾರ್ವಜನಿಕರು, ಸಂಘ-ಸಂಸ್ಥೆಗಳು ತಮ್ಮ ಅಮೂಲ್ಯವಾದ ಸಲಹೆ, ಸೂಚನೆಗಳನ್ನು ಇ-ಮೇಲ್‌ಗಳಾದ bbmpbudget@gmail.com ಹಾಗೂ suggestions2bbmpbudget@gmail.com ಮೂಲಕವೂ ಸಲ್ಲಿಸಬಹುದಾಗಿದೆ.

ಆರ್.ಡಬ್ಲ್ಯೂಎಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಫೆಬ್ರುವರಿ 10ರ ಒಳಗಾಗಿ ಸಲಹೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ತಮ್ಮ ಅತ್ಯಮೂಲ್ಯವಾದ ಸಲಹೆ, ಸೂಚನೆಗಳನ್ನು ನೀಡಲು ಪಾಲಿಕೆಯ ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ್ ಕಲ್ಕೆರೆ ಅವರು ಕೋರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...