ಬಿಬಿಎಂಪಿ | ಮತ್ತಿಕೆರೆ ಪದವಿ ಪೂರ್ವ ಕಾಲೇಜಿನಲ್ಲಿ ‘ಸಂಚಾರಿ ವಿಜ್ಞಾನ ಪ್ರದರ್ಶನ’

Date:

ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಬಿಎಂಪಿಯ ಮತ್ತಿಕೆರೆ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಮ್‌) ಹಾಗೂ ಬಾಹ್ಯಾಕಾಶ ಇಲಾಖೆ(ಇಸ್ರೋ) ವತಿಯಿಂದ “ಸಂಚಾರಿ ವಿಜ್ಞಾನ ಪ್ರದರ್ಶನ” ಏರ್ಪಡಿಸಲಾಗಿದೆ.

ಕಾಲೇಜಿನ ಪ್ರಾಂಶುಪಾಲರಾದ ಜಿ.ಎನ್ ಆನಂದ್ ಪ್ರದರ್ಶನಕ್ಕೆ ಚಾಲನೆ ನೀಡಿದರು. ಪಾಲಿಕೆ ಮತ್ತಿಕೆರೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2 ಸಂಚಾರಿ ವಿಜ್ಞಾನ ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭೇಟಿ ನೀಡಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಮಂಗಳವಾರವೂ ವಿಜ್ಞಾನ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ತಿಳಿಸಿದೆ.

ಇಸ್ರೋ ಸಂಸ್ಥೆಯ ಸಾಧನೆಯಾದ ಆರ್ಯಭಟದಿಂದ ಚಂದ್ರಯಾನ-2 ರವರೆಗಿನ ಎಲ್ಲ ರಾಕೆಟ್, ಸ್ಯಾಟ್‌ಲೈಟ್ ಮಾದರಿಗಳನ್ನು ಸಂಚಾರಿ ಬಸ್ಸಿನಲ್ಲಿ ಇರಿಸಲಾಗಿದೆ. ಇಸ್ರೋ ಭಾರತದ ಹೆಮ್ಮೆ, ಇದರ ಸಾಧನೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವುದೇ ಇದರ ಮುಖ್ಯ ಉದ್ದೇಶವಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನವನ್ನು ಹೆಚ್ಚಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ

“ಎಲ್ಲ ವಿದ್ಯಾರ್ಥಿಗಳು ಇಸ್ರೋ ಮತ್ತು ವಿಐಟಿಎಮ್‌ ಹೋಗಲು ಸಾಧ್ಯವಾಗುವುದಿಲ್ಲ ಹಾಗಾಗಿ ವಿದ್ಯಾರ್ಥಿಗಳಿದ್ದಲ್ಲಿಗೆ ಸಂಚಾರಿ ವಾಹನದ ಮೂಲಕ ವಿಜ್ಞಾನ ಜ್ಞಾನವನ್ನು ಮೂಡಿಸುವುದು ಇದರ ಉದ್ದೇಶವಾಗಿದೆ. ವಿಐಟಿಎಮ್‌ ಸಂಸ್ಥೆಯ ಸಂಚಾರಿ ವಾಹನದಲ್ಲಿ ವಿದ್ಯುತ್‌ ಮತ್ತು ಕಾಂತತ್ವದ ಕುರಿತಾದ ಸುಮಾರು 20 ವರ್ಕಿಂಗ್ ಮಾಡಲ್‌ ಇಡಲಾಗಿದೆ” ಎಂದು ಕಾಲೇಜಿನ ಪ್ರಾಂಶುಪಾಲ್ ಆನಂದ್ ಅವರು ತಿಳಿಸಿದರು.

ಸಂಚಾರಿ ವಾಹನ

ಇಸ್ರೋ ಸಂಸ್ಥೆಯಿಂದ ವಿಜ್ಞಾನಿಯಾದ ಹೆಚ್ ಎಲ್ ಶ್ರೀನಿವಾಸ್ ಹಾಗೂ ವಿಐಟಿಎಮ್‌ ಸಂಸ್ಥೆಯ ಶಿಕ್ಷಣಾಧಿಕಾರಿಯಾದ ಪ್ರಶಾಂತ್ ಕುಮಾರ್ ಬಿಸ್ವಾಲ್‌ ವಿಜ್ಞಾನ ಪ್ರದರ್ಶನದ ಮೇಲುಸ್ತುವಾರಿ ವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...