ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯ ಅಂತಿಮ ಪಟ್ಟಿ ಪ್ರಕಟ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ ಮರುವಿಂಗಡಣೆಗೆ ಸಂಬಂಧಿಸಿದಂತೆ 225 ವಾರ್ಡ್‌ಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.  

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪರಿಶೀಲನಾ ಸಮಿತಿಯು ಮಾಡಿರುವ ಶಿಫಾರಸ್ಸುಗಳನ್ನು ಸರ್ಕಾರ ಒಪ್ಪಿದೆ. ಪಾಲಿಕೆಯ ಅಧಿನಿಯಮ, 2020ರ ಕಲಂ 7ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, 2011ರ ಜನಗಣತಿಯ ಆಧಾರದ ಮೇರೆಗೆ ಬಿಬಿಎಂಪಿಗೆ ಸಂಬಂಧಿಸಿದಂತೆ ವಾರ್ಡ್‌ವಾರು ಕ್ಷೇತ್ರ ಮರು ವಿಂಗಡಣೆ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಬಿಬಿಎಂಪಿಯ 243 ವಾರ್ಡ್‌ಗಳಿಂದ 225ಕ್ಕೆ ವಾರ್ಡ್‌ಗಳ ಸಂಖ್ಯೆಯನ್ನು ಸರ್ಕಾರ ಇಳಿಕೆ ಮಾಡಿತ್ತು. ಆ.18 ರಂದು ವಾರ್ಡ್‌ಗಳ ಗಡಿ ಗುರುತು ಮಾಡಿ ಅಧಿಸೂಚನೆ ಹೊರಡಿಸಿತ್ತು. ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಸೆ.1 ರವರೆಗೆ ಅವಕಾಶ ನೀಡಲಾಗಿತ್ತು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಚೆ ಮೂಲಕ ಮಾತ್ರವೇ ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಲು ಸರ್ಕಾರ ನಿಯಮ ವಿಧಿಸಿತ್ತು. ಮೂರು ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಹಾಗೂ ಸಲಹೆಗಳು ಬಂದಿದ್ದವು. ಅದರಲ್ಲಿ ಗಡಿ, ವಾರ್ಡ್‌ಗಳ ಹೆಸರು, ಪ್ರದೇಶದ ಹೆಸರು ನಮೂದಾಗದಿರುವುದು ಪ್ರಮುಖ ಆಕ್ಷೇಪಣೆಯಾಗಿದೆ. ಗಡಿಗಳನ್ನು ಒಂದು ವಿಧಾನಸಭಾ ಕ್ಷೇತ್ರದೊಳಗೆ ಸೇರಿಸುವಂತೆ ಕೇಳಲಾಗಿದೆ. ಇದೀಗ, ವಾರ್ಡ್‌ಗಳನ್ನು ನಿಗದಿಪಡಿಸಿ ರಾಜ್ಯಪತ್ರದ ಮೂಲಕ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಮೂರು ವರ್ಷದಿಂದ ನಡೆಯದ ಬಿಬಿಎಂಪಿ ಚುನಾವಣೆ

2015ರ ಜುಲೈ 16ರಂದು ಕರ್ನಾಟಕ ಚುನಾವಣಾ ಆಯೋಗ ಬಿಬಿಎಂಪಿ ಚುನಾವಣೆಯ ಪ್ರಕಟಣೆ ಹೊರಡಿಸಿತ್ತು. ಅದರಂತೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಬಿಬಿಎಂಪಿಯ ಎಲ್ಲ ಕ್ಷೇತ್ರಗಳಲ್ಲಿ 2015ರ ಆಗಸ್ಟ್‌ 22 ರಂದು ಮತ ಎಣಿಕೆ ನಡೆದು 2015ರ ಆಗಸ್ಟ್‌ 25 ರಂದು ಫಲಿತಾಂಶ ಹೊರಬಿದ್ದಿತ್ತು. ಈ ಚುನಾವಣೆ ನಡೆದು ಐದು ವರ್ಷಗಳ ಆಡಳಿತ ನಡೆದ ಬಳಿಕ ಇಲ್ಲಿಯವರೆಗೂ ಬಿಬಿಎಂಪಿ ಚುನಾವಣೆ ನಡೆದಿಲ್ಲ. 2020ರ ಸೆಪ್ಟಂಬರ್‌ನಲ್ಲಿ ಬಿಬಿಎಂಪಿ ಸದಸ್ಯರ (ಕಾರ್ಪೋರೇಟರ್‌ಗಳ) ಅಧಿಕಾರವಧಿ ಪೂರ್ಣಗೊಂಡಿದೆ.

ಕಳೆದ ಮೂರು ವರ್ಷದಿಂದ ಬೆಂಗಳೂರಿಗೆ ಸಮರ್ಥ ಆಡಳಿತಾಗಾರರು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಜನಪ್ರತಿನಿಧಿಗಳು ಇಲ್ಲದೆ ನಗರದ ವಾರ್ಡ್‌ಗಳು ಹದಗೆಟ್ಟಿವೆ. ಇದೀಗ ಕಾಂಗ್ರೆಸ್‌ ಸರ್ಕಾರ ಡಿಸೆಂಬರ್ ವೇಳೆಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸಿದೆ.

243 ವಾರ್ಡ್‌ ಮರುವಿಂಗಡಣೆ ಮಾಡಿದ್ದ ಹಿಂದಿನ ಬಿಜೆಪಿ ಸರ್ಕಾರ

ಈ ಹಿಂದಿನ ಬಿಜೆಪಿ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ವಾರ್ಡ್‌ ಮರುವಿಂಗಡಣೆ ಮಾಡಲು ಮುಂದಾಗಿತ್ತು. ಅದರಂತೆಯೇ, ಬಿಬಿಎಂಪಿಯ 198 ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಏರಿಕೆ ಮಾಡಿ ಅಧಿಸೂಚನೆ ಹೊರಡಿಸಿತ್ತು. ಈ ವೇಳೆ, ಬಿಬಿಎಂಪಿ-2020 ಹೊಸ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಸಹ ಸ್ವೀಕರಿಸಲಾಗಿತ್ತು. ನಗರದ ಬಹುತೇಕ ನೂತನ ಹಾಗೂ ಹಳೆಯ ವಾರ್ಡ್‌ಗಳಿಗೆ ಹೆಸರು ಸೂಚಿಸಿತ್ತು.

ಬಿಬಿಎಂಪಿಯ ಮಾಜಿ ವಾರ್ಡ್‌ ಸದಸ್ಯರು ಸೇರಿದಂತೆ ಹಲವರು ಈ ವಾರ್ಡ್‌ ಮರುವಿಂಗಡಣೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ವಾರ್ಡ್‌ಗಳ ವಿಂಗಡಣೆಯಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ 12 ವಾರಗಳಲ್ಲಿ ಹೊಸದಾಗಿ ವಾರ್ಡ್‌ ಮರುವಿಂಗಡಣೆ ಮಾಡುವಂತೆ ಆದೇಶ ನೀಡಿತ್ತು. ಅದರಂತೆಯೇ ಕಾಂಗ್ರೆಸ್‌ ಸರ್ಕಾರ ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಿಸಲು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ನೇತೃತ್ವದ ಆಯೋಗವನ್ನು ಜೂನ್‌ 23ರಂದು ಸರ್ಕಾರ ಪುನರ್‌ ರಚಿಸಿತ್ತು.

ವಾರ್ಡ್‌ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಸಿ ಸರ್ಕಾರ ಆ.4ರಂದು ಅಧಿಸೂಚನೆ ಹೊರಡಿಸಿತ್ತು. ಇದಾದ ಮೇಲೆ ಆಯೋಗ ವಾರ್ಡ್‌ಗಳ ಪುನರ್‌ ರಚಿಸಿ, ಗಡಿ ಗುರುತಿಸಿ ಕರಡು ವರದಿಯನ್ನು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿತ್ತು.

ಈ ಸುದ್ದಿ ಓದಿದ್ದೀರಾ? ವಿಡಿಯೋಗಾಗಿ ಟಿಕೆಟ್ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಿದ ಖ್ಯಾತ ಯೂಟ್ಯೂಬರ್; ಕ್ರಮಕ್ಕೆ ಮುಂದಾದ ಮೆಟ್ರೋ

ಕಾಂಗ್ರೆಸ್‌ ಸರ್ಕಾರದಿಂದ ವಾರ್ಡ್‌ ಮರುವಿಂಗಡಣೆ

ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಬಿಬಿಎಂಪಿ ವಾರ್ಡ್‌ ಮರುವಿಂಗಡಣೆ ಸಂಪೂರ್ಣ ಅವೈಜ್ಞಾನಿಕವಾಗಿದೆ ಎಂದು ವಾದಿಸಿದ್ದ ಕಾಂಗ್ರೆಸ್‌ ಸರ್ಕಾರ. ಇದೀಗ ವಾರ್ಡ್‌ ಮರುವಿಂಗಡಣೆಯನ್ನು ಮಾಡಿದೆ. 243 ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಕೆ ಮಾಡಿದೆ. ಇನ್ನೂ ಈ ಹಿಂದಿನ ಬಿಜೆಪಿ ಸರ್ಕಾರ ವಾರ್ಡ್‌ಗಳಿಗೆ ಸೂಚಿಸಿದ್ದ ನೂತನ ಹೆಸರುಗಳನ್ನು ಕೈಬಿಟ್ಟಿದೆ.

243 ವಾರ್ಡ್‌ಗಳಿದ್ದಾಗ ಜನಸಂಖ್ಯೆ ಆಧಾರದಲ್ಲಿ ಹಲವು ವಾರ್ಡ್‌ಗಳಲ್ಲಿ ಸಂಖ್ಯೆ ಕಡಿಮೆ ಇತ್ತು. 20 ಸಾವಿರ ಜನಸಂಖ್ಯೆಗೂ ವಾರ್ಡ್‌ ರಚಿಸಲಾಗಿತ್ತು. ಆದರೆ, ಇದೀಗ 2011ರ ಜನಗಣತಿಗೆ ಅನುಗುಣವಾಗಿ ಸರಾಸರಿ 37,527 ಜನಸಂಖ್ಯೆಗೆ ಒಂದು ವಾರ್ಡ್‌ ರಚಿಸಲಾಗಿದೆ.

ವಾರ್ಡ್ ಪುನರ್ ವಿಂಗಡಣೆ ಕೆಲಸ ಪೂರ್ಣಗೊಂಡಿದೆ. ಇನ್ನೂ ವಾರ್ಡ್‌ವಾರು ಮೀಸಲಾತಿ ಪ್ರಕಟವಾಗಲಿದೆ. ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ.

ವಿಧಾನಸಭೆ ಕ್ಷೇತ್ರ ಲೆಕ್ಕಾಚಾರದಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರದಲ್ಲಿ ವಾರ್ಡ್​ಗಳ ಸಂಖ್ಯೆ ಕಡಿಮೆಯಾಗಿವೆ. ದಾಸರಹಳ್ಳಿ, ಯಲಹಂಕ,ಜಯನಗರ, ವಿಧಾನಸಭೆ ಕ್ಷೇತ್ರ ಹೊರತುಪಡಿಸಿದರೆ ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿ ವಾರ್ಡ್​ಗಳ ಸಂಖ್ಯೆ ಕಡಿತಗೊಳಿಸಲಾಗಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...