ಬೆಂ-ಮೈ ಹೆದ್ದಾರಿ| ಕಟ್ಟುನಿಟ್ಟಿನ ಕ್ರಮಗಳ ಬಳಿಕ ಅಪಘಾತಗಳ ಸಂಖ್ಯೆಯಲ್ಲಿ ಇಳಿಕೆ

Date:

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಬಳಿಕ ಅಪಘಾತಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಪೊಲೀಸರ ಕಟ್ಟುನಿಟ್ಟಿನ ಕ್ರಮಗಳಿಂದ ಸಾವಿನ ಪ್ರಕರಣಗಳ ಸಂಖ್ಯೆ ಜುಲೈ ತಿಂಗಳಿನಲ್ಲಿ ಇಳಿಮುಖವಾಗಿದೆ. ಮೇ ತಿಂಗಳಲ್ಲಿ 29 ಹಾಗೂ ಜೂನ್‌ ತಿಂಗಳಲ್ಲಿ 28 ಮಂದಿ ಸಾವನ್ನಪ್ಪಿದ್ದರು. ಇದೀಗ ಜು. 23ರ ವೇಳೆಗೆ ಸಾವಿನ ಸಂಖ್ಯೆ 8ಕ್ಕೆ ಇಳಿಕೆ ಕಂಡಿದೆ” ಎಂದು ಹೇಳಿದ್ದಾರೆ.

“ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆಯುತ್ತಿರುವ ಹೆಚ್ಚಿನ ಅಪಘಾತಗಳಿಗೆ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ಗೊತ್ತಾಗಿದೆ. ಆ ಬಳಿಕ ಸಂಚಾರದಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಯಿತು. ಈ ಸಾವಿನ ಸಂಖ್ಯೆ ಒಂದಂಕಿಗೆ ಇಳಿಯಲು ಕಾರಣರಾದ ನಮ್ಮ ಪೊಲೀಸ್‌ ಸಿಬ್ಬಂದಿಗೆ ಅಭಿನಂದನೆ” ಎಂದು ಟ್ವೀಟ್‌ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆದ್ದಾರಿಯಲ್ಲಿ ಅಪಘಾತ ಸಂಖ್ಯೆಗಳನ್ನು ನಿಯಂತ್ರಿಸಲು ಪೊಲೀಸರ ನಿಯೋಜನೆ, ಎಐ ಕ್ಯಾಮೆರಾ ಅಳವಡಿಕೆ, ವಾಹನಗಳ ವೇಗಕ್ಕೆ ಮಿತಿ, ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...