ಹಾಸ್ಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಬೆಂವಿವಿ ವಿದ್ಯಾರ್ಥಿಗಳ ಪ್ರತಿಭಟನೆ

Date:

ಹಾಸ್ಟೆಲ್ ಕ್ಯಾಂಟೀನ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ನೆಲೆಸಿರುವ ಸ್ನಾತಕೋತ್ತರ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 650ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿಗಳು ವಿವಿ ಹಾಸ್ಟೆಲ್‌ನಲ್ಲಿ ನೆಲೆಸಿದ್ದಾರೆ. ಸೋಮವಾರ ರಾತ್ರಿ ನೀಡಿದ ಅನ್ನದಲ್ಲಿ ಹುಳುಗಳು ಕಂಡುಬಂದಿದ್ದು, ಹಾಸ್ಟೆಲ್ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

“ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿದ್ದಾರೆ. ಅಕ್ಕಿಯಲ್ಲಿ ಹುಳುಗಳು ಮತ್ತು ಕೀಟಗಳು ಕಾಣಿಸಿಕೊಂಡಿವೆ. ವಿದ್ಯಾರ್ಥಿಗಳ ಊಟದ ವಿಚಾರದಲ್ಲಿ ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಲವು ಬಾರಿ ಈ ಬಗ್ಗೆ ದೂರು ನೀಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರನ್ನು ಅಮಾನತುಗೊಳಿಸಬೇಕು” ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಹೊಸದೇನಲ್ಲ ಮತ್ತು ಇದು ಹಲವಾರು ತಿಂಗಳುಗಳಿಂದ ನಡೆಯುತ್ತಿದೆ. ಕೇವಲ ಅಕ್ಕಿ ಮಾತ್ರವಲ್ಲ, ಹಾಸ್ಟೆಲ್‌ನಲ್ಲಿ ನೀಡಲಾಗುವ ಎಲ್ಲ ಆಹಾರವು ಕಳಪೆ ಗುಣಮಟ್ಟದ್ದಾಗಿದೆ. ಇದನ್ನು ಉಪಕುಲಪತಿ, ರಿಜಿಸ್ಟ್ರಾರ್ ಮತ್ತು ಇತರ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಯಾವುದೇ ಪ್ರಯೋಜನವಾಗಲಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ – ಮಾದವಾರ ಬಿಎಂಟಿಸಿ ಬಸ್‌ ಸೇವೆ ಆರಂಭ

ಹಾಸ್ಟೆಲ್‌ನಲ್ಲಿ ಊಟ, ನೀರು, ಮೂಲಭೂತ ಸೌಲಭ್ಯ ವ್ಯವಸ್ಥಿತವಾಗಿಲ್ಲ. ಹುಳು ಉಪ್ಪಟೆ ಇರುವ ಆಹಾರ ತಿಂದು ಜೀವಕ್ಕೆ ಅಪಾಯವಾದರೆ ಯಾರು ಹೊಣೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ವಾರ್ಡನ್ ಹಾಗೂ ಅಡುಗೆಯವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಬೆಂವಿವಿ ಉಪಕುಲಪತಿ ಜಯಕರ ಶೆಟ್ಟಿ ಅವರಿಗೆ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...