ಬೆಂಗಳೂರು | 27 ಸಾವಿರ ಪ್ರಯಾಣಿಕರಿಂದ ನಿಯಮ ಉಲ್ಲಂಘನೆ: ನೆನಪಿಡಿ- ‘ನಮ್ಮ ಮೆಟ್ರೋ’ ನಮ್ಮದು ಮಾತ್ರವಲ್ಲ

Date:

ಪ್ರಯಾಣ ದರ ಏರಿಕೆಯಿಂದ ಭಾರೀ ಸುದ್ದಿಯಲ್ಲಿದ್ದ ಬೆಂಗಳೂರಿನ ‘ನಮ್ಮ ಮೆಟ್ರೋ’ ಇದೀಗ ಮತ್ತೆ ಸುದ್ದಿಯಾಗುತ್ತಿದೆ. ಈ ಬಾರಿ ಸುದ್ದಿಯಾಗುತ್ತಿರುವುದು ಮೆಟ್ರೋದ ಧೋರಣೆಯಿಂದಲ್ಲ, ಬದಲಾಗಿ ಪ್ರಯಾಣಿಕರ ನಡೆ-ನುಡಿ, ಚಟುವಟಿಕೆಗಳಿಂದ. ಬೆಂಗಳೂರಿನ ಒಂದು ಮೂಲೆಯಿಂದ ಮತ್ತೊಂದು ಮೂಲೆಗೆ ಸಂಚಾರ ದಟ್ಟಣೆಯ ರಗಳೆ ಇಲ್ಲದೆ ಪ್ರಯಾಣಿಸಲು ಮೆಟ್ರೋ ನೆರವಾಗುತ್ತಿದೆ. ಆದರೂ, ಹಲವಾರು ಪ್ರಯಾಣಿಕರು ತಮ್ಮ ಸಹ ಪ್ರಯಾಣಿಕರಿಂದಾಗಿ ಕಿರಿಕಿರಿ ಅನುಭವಿಸುವಂತಾಗಿದೆ. ಅದಕ್ಕೆ ಸಾಕ್ಷಿಯಾಗಿ ಕಳೆದ 6 ತಿಂಗಳಲ್ಲಿ ಬರೋಬ್ಬರಿ 27,000 ಪ್ರಯಾಣಿಕರು ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣಗಳಿವೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ಒದಗಿಸಿದೆ.

2024ರ ಸೆಪ್ಟಂಬರ್‌ನಿಂದ 2025ರ ಮಾರ್ಚ್‌ವರೆಗೆ (6 ತಿಂಗಳು) ಮೆಟ್ರೋದಲ್ಲಿ ಅತೀ ಹೆಚ್ಚು ಜನಸಂದಣಿ ಇಲ್ಲದ ಸಮಯದಲ್ಲಿ ಮೆಟ್ರೋ ಭದ್ರತಾ ದಳವು ಭದ್ರತಾ ತಪಾಸಣೆ ನಡೆಸಿದೆ. ಈ ವೇಳೆ, ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡಿರುವುದು ಮತ್ತು ಮೆಟ್ರೋದ ಮಾರ್ಗಸೂಚಿ, ನಿಯಮಗಳ ಉಲಂಘನೆ ಮಾಡಿರುವ 27,000ಕ್ಕೂ ಹೆಚ್ಚು ಘಟನೆಗಳು ಕಂಡುಬಂದಿವೆ ಎಂದು ಮೆಟ್ರೋ ಸಂಸ್ಥೆ ತಿಳಿಸಿದೆ.

ನಿಯಮ ಉಲ್ಲಂಘನೆಗಳಲ್ಲಿ ಮೊಬೈಲ್ ಕಿರುಚಾಟದ ಪ್ರಕರಣಗಳೇ ಹೆಚ್ಚಿವೆ. ಸಹ ಪ್ರಯಾಣಿಕರಿಗೆ ಹೆಚ್ಚು ಕಿರಿಕಿರಿ ಮಾಡಿವೆ. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರು ತಮ್ಮ ಮೊಬೈಲ್‌ಗಳಲ್ಲಿ ಜೋರು ಧ್ವನಿಯೊಂದಿಗೆ ಹಾಡು ಕೇಳುವ, ವಿಡಿಯೋಗಳನ್ನು ನೋಡುವ ಸುಮಾರು 11,922 ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ವಿಶೇಷ ಚೇತನರು, ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಪುಟ್ಟ ಮಕ್ಕಗಳೊಂದಿಗೆ ಪ್ರಯಾಣಿಸುವವರಿಗೆ ಮೀಸಲಾದ ಆಸನಗಳನ್ನು ಬಿಟ್ಟುಕೊಡದೆ, ತೊಂದರೆ ಉಂಟುಮಾಡಿರುವ 14,162 ಪ್ರಕರಣಗಳು ದಾಖಲಾಗಿವೆ. ಉಳಿದಂತೆ, ಮೆಟ್ರೋ ಪ್ರಯಾಣದ ವೇಳೆ ಆಹಾರ ಸೇವಿಸಿರುವ 554 ಪ್ರಕರಣಗಳು ಮತ್ತು ಬೃಹತ್ ಸರಂಜಾಮುಗಳನ್ನು ಸಾಗಿಸಿರುವ 474 ಪ್ರಕರಣಗಳು ಕಂಡುಬಂದಿವೆ ಎಂದು ಮೆಟ್ರೋ ಹೇಳಿದೆ.

ಈ ವರದಿ ಓದಿದ್ದೀರಾ?: ಗಚ್ಚಿಬೌಲಿ ಅರಣ್ಯದಲ್ಲಿ ಐಟಿ ಪಾರ್ಕ್‌: ವಿದ್ಯಾರ್ಥಿಗಳ ಹೋರಾಟಕ್ಕೆ ಬಿಆರ್‌ಎಸ್ ಬೆಂಬಲ; ರಾಹುಲ್ ಗಾಂಧಿ ಮೌನ

ಆದಾಗ್ಯೂ, ನಿಯಮ ಉಲ್ಲಂಘಿಸಿದ ಯಾವುದೇ ಪ್ರಯಾಣಿಕರಿಗೆ ದಂಡ ವಿಧಿಸಿಲ್ಲ ಎಂದು ಬಿಎಂಆರ್‌ಸಿಎಲ್‌ ಹೇಳಿಕೊಂಡಿದೆ. ಆದರೆ, ಇಂತಹ ನಡವಳಿಕೆಗಳನ್ನು ನಿರುತ್ಸಾಹಗೊಳಿಸಲು ಮತ್ತು ಸಾಮರಸ್ಯದ ಪ್ರಯಾಣವನ್ನು ಖಾತ್ರಿಪಡಿಸಿಕೊಳ್ಳಲು ಭದ್ರತಾ ದಳವು ಕಠಿಣ ಎಚ್ಚರಿಕೆಗಳನ್ನು ನೀಡಿದೆ. ಪ್ರಯಾಣಿಕರಲ್ಲಿ ಅರಿವು ಮೂಡಿಸುವ ಕ್ರಮಕ್ಕೆ ಮುಂದಾಗಿದೆ.

ಇಂತಹ ಕಿರಿಕಿರಿಗಳು, ನಿಯಮ ಉಲ್ಲಂಘನೆಗಳು ಕೇವಲ ಮೆಟ್ರೋದಲ್ಲಿ ಮಾತ್ರವಲ್ಲ, ಬಸ್‌, ರೈಲು ಸೇರಿದಂತೆ ಸಾರ್ವಜನಿಕರು ಪ್ರಯಾಣಿಸುವ ಎಲ್ಲ ಸಾರಿಗೆಗಳಲ್ಲೂ ಇದ್ದೇ ಇದೆ. ನಿಯಮ ಉಲ್ಲಂಘನೆಗಳಿಗೆ ದಂಡ ವಿಧಿಸದೇ ಇರಬಹುದು ಅಥವಾ ಕ್ರಮ ಕೈಗೊಳ್ಳದೇ ಬಿಡಬಹುದು. ಆದರೆ, ಸಾರ್ವಜನಿಕ ನಡವಳಿಕೆ (ಪಬ್ಲಿಕ್ ಮ್ಯಾನರಿಸಂ) ಎಂಬುದನ್ನು ಪ್ರತಿಯೊಬ್ಬರು ಪಾಲಿಸಬೇಕಾದ ಸಾಮಾನ್ಯ ಜ್ಞಾನ. ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಾರ್ವಜನಿಕ ಸಾರಿಗೆಗಳಲ್ಲಿ ಜೋರು ದನಿಯಲ್ಲಿ ಮಾತನಾಡುವುದು, ಮೊಬೈಲ್‌ಗಳಲ್ಲಿ ಜೋರು ಶಬ್ದದೊಂದಿಗೆ ಹಾಡು ಕೇಳುವುದು, ವಿಚಿತ್ರವಾಗಿ ನಡೆದುಕೊಳ್ಳುವುದು ಸಾರ್ವಜನಿಕ ನಡವಳಿಕೆ ಅಲ್ಲ ಎಂಬ ಅರಿವಿರಬೇಕು. ಅಂತಹ ಅರಿವು ಬೆಳೆಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ನಡವಳಿಕೆಯು ಇತರರಿಗೆ ಕಿರಿಕಿರಿ ಆಗದಂತೆ ಎಚ್ಚರಿಕೆ ವಹಿಸಬೇಕು. ಇದಕ್ಕಿರುವ ಏಕೈಕ ದಾರಿ, ಸಾರ್ವಜನಿಕರೇ ಎಚ್ಚೆತ್ತುಕೊಳ್ಳಬೇಕು. ಅರಿತುಕೊಳ್ಳಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...