ಬೆಂಗಳೂರು | ಲಂಚಕ್ಕೆ ಪಡೆದ ಎಎಸ್‌ಐ, ಎಸಿಪಿ ಬಂಧನ

Date:

ಸೈಬರ್ ಕ್ರೈಂ ಪ್ರಕರಣದ ತನಿಖೆ‌ ನಡೆಸಲು ದೂರುದಾರರಿಂದ 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ಎಸಿಪಿ ಮತ್ತು ಎಎಸ್‌ಐ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ‘ರೆಡ್‌ಹ್ಯಾಂಡ್‌’ಆಗಿ ಹಿಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರುದಾರ ಮಧುಸೂದನ್ ಬಿ.ಎಸ್ ಎಂಬವರು ಸೈಬರ್ ಕ್ರೈ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದ ತನಿಖೆ ನಡೆಸಬೇಕೆಂದರೆ 4 ಲಕ್ಷ ರೂ. ಲಂಚ ಕೊಡಬೇಕೆಂದು ಠಾಣೆಯ ಎಎಸ್ಐ ಕೃಷ್ಣಮೂರ್ತಿ ಮತ್ತು ಎಸಿಪಿ ತನ್ವೀರ್ ಎಸ್.ಆರ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಲಂಚ ಕೇಳಿದ ಎಸಿಪಿ ಮತ್ತು ಎಎಸ್‌ಐ ವಿರುದ್ಧ ದೂರುದಾರ ಮಧುಸೂದನ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಮಧುಸೂದನ್‌ ಕೈಯಲ್ಲಿ 2 ಲಕ್ಷ ರೂ. ಕೊಟ್ಟು ಸಿಐಎಸ್‌ ಠಾಣೆಗೆ ಕಳಿಸಿದ್ದರು. ಮಧುಸೂದನ್ ಅವರಿಂದ ಎಸಿಪಿ ಮತ್ತು ಎಎಸ್‌ಐ ಲಂಚ ಪಡೆಯುವ ವೇಳೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನೂ ಲಂಚ ಪಡೆಯುವಾಗಲೇ ಹಿಡಿದಿದ್ದಾರೆ. ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ‘ಸ್ತನ ಮುಟ್ಟುವುದು ಅತ್ಯಾಚಾರವಲ್ಲ’ವೆಂಬ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ದೂರುದಾರ ಮಧುಸೂದನ್ ಅವರ ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಆರ್ಥಿಕ‌ ನಷ್ಟವುಂಟು ಮಾಡಲಾಗಿತ್ತು. ಕೆಲಸದಿಂದ ತೆಗೆದು ಹಾಕಿದ ಸಿಟ್ಟಿಗೆ ಕಂಪನಿಯ ಮಾಜಿ ಉದ್ಯೋಗಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಅನುಮಾನಿಸಿದ್ದ ಮಧುಸೂದನ್ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಪ್ರಕರಣದ ತನಿಖೆ ಆರಂಭಿಸಲು4 ಲಕ್ಷ ರೂ. ಲಂಚ ಕೊಡಬೇಕೆಂದು ಆರೋಪಿತ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರುಎಂದು ತಮ್ಮ ದೂರಿನಲ್ಲಿ ಮಧುಸೂದನ್ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...