ಬೆಂಗಳೂರು | ಖಾಸಗಿ ವಿಡಿಯೋ ಇಟ್ಟುಕೊಂಡು ದುರುಳ ಸೋದರ ಮಾವನಿಂದ ಬ್ಲಾಕ್‌ಮೇಲ್; ಯುವತಿ ಆತ್ಮ*ಹತ್ಯೆ

Date:

ಯುವತಿಯ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಇಟ್ಟುಕೊಂಡು ಆಕೆಯ ಸೋದರ ಮಾವನೇ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆದರೆ, ಆತನ ಬ್ಲಾಕ್‌ಮೇಲ್‌ಗೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಸುಹಾಸಿ ಸಿಂಗ್‌ ಆತ್ಮಹತ್ಯೆಗೆ ಶರಣಾದ ಯುವತಿ. ಆಕೆ ಎಚ್‌ಎಎಲ್‌ ಬಳಿಕ ಹೋಟೆಲ್‌ನಲ್ಲಿ ಆರೋಪಿ ಸೋದರ ಮಾವನ ಎದುರೇ ಪೆಟ್ರೋಲ್‌ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರ ಸುಟ್ಟು ಗಾಯಗಳಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಸುಹಾಸಿ ಅವರ ಖಾಸಗಿ ಕ್ಷಣಗಳ ದೃಶ್ಯಗಳನ್ನಿಟ್ಟುಕೊಂಡು ಬ್ಲಾಕ್‌ಮೇಲೆ ಮಾಡಿದ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆಕೆಯ ಸೋದರಮಾವ ಆರ್‌. ಪ್ರವೀಣ್‌ ಸಿಂಗ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆತನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಹಾಸಿ ಮತ್ತು ಆರೋಪಿ ಪ್ರವೀಣ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಉತ್ತಮ ಒಡನಾಟವಿತ್ತು. ಆಕೆಯ ಒಡನಾಟವನ್ನೇ ದುರ್ಬಳಕೆ ಮಾಡಿಕೊಂಡಿದ್ದ ಪ್ರವೀಣ್, ಆಕೆಗೆ ತಿಳಿಯದಂತೆ ಆಕೆಯ ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ. ಈ ನಡುವೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿ, ಪ್ರವೀಣ್‌ನಿಂದ ಸುಹಾಸಿ ಅಂತರ ಕಾಯ್ಡುಕೊಂಡಿದ್ದರು.

ಇದರಿಂದ, ಕುಪಿತಗೊಂಡ ಪ್ರವೀಣ್, ಆಕೆಯ ಖಾಸಗಿ ದೃಶ್ಯಗಳನ್ನು ತೋರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ. ಜ.12ರಂದು ತಾನು ಬುಕ್‌ ಮಾಡಿದ್ದ ಹೋಟೆಲ್‌ ರೂಮ್‌ಗೆ ಬರುವಂತೆ ಒತ್ತಡ ಹೇರಿದ್ದ. ಆತನ ಬೆದರಿಕೆ, ಬ್ಲಾಕ್‌ಮೇಲ್‌ಗಳಿಂದ ಬೇಸತ್ತ ಯುವತಿ, ಹೋಟೆಲ್‌ಗೆ ಬಂದ ಯುವತಿ ಆತನ ಎದುರೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...