ಬೆಂಗಳೂರು | ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ನರ್ಸ್ ಬಂಧನ

Date:

ಹೆರಿಗೆ ಮಾಡಿಸಲು ಗರ್ಭಿಣಿಯರ ಪೋಷಕರಿಂದ ಲಂಚ ಪಡೆಯುತ್ತಿದ್ದ ಆಸ್ಪತ್ರೆಯ ನರ್ಸ್‌ ಒಬ್ಬರನ್ನು ಲೋಕಾಯುಕ್ತ ಬಂಧಿಸಿದೆ. ಆಸ್ಪತ್ರೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ನರ್ಸ್‌ಅನ್ನು ‘ರೆಡ್‌ ಹ್ಯಾಂಡ್‌’ ಆಗಿ ಹಿಡಿದಿದ್ದಾರೆ.

ಗಂಗಲಕ್ಷ್ಮಿ ಬಂಧಿತ ನರ್ಸ್‌ ಎಂದು ಹೆಸರಿಸಲಾಗಿದೆ. ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿರುವ ಮಲ್ಲಸಂದ್ರ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಬಾಗಲಗುಂಟೆ ನಿವಾಸಿ ಕಮಲಮ್ಮ ಎಂಬವರು ದಾಖಲಾಗಿದ್ದರು. ಅವರ ಬಳಿ ಗಂಗಲಕ್ಷ್ಮಿ 6,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಫೋನ್‌ಪೇ ಮೂಲಕ 5,000 ರೂ. ಪಡೆದುಕೊಂಡಿದ್ದಾರೆ. ಆಕೆ ಲಂಚ ಪಡೆಯುವಾಗಲೇ ಆಸ್ಪತ್ರೆ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದ ತಂಡ, ಆರೋಪಿ ನರ್ಸ್‌ನನ್ನು ಬಂಧಿಸಿದೆ.

ಈ ಹಿಂದೆಯೂ ಗಂಗಲಕ್ಷ್ಮಿ ಅವರು ಹಲವಾರು ಗರ್ಭಿಣಿಯರ ಬಳಿ ಲಂಚ ಪಡೆದಿದ್ದಾರೆ ಎಂಬ ಆರೋಪಗಳಿವೆ. ಅಲ್ಲದೆ, ಭ್ರೂಣ ಹತ್ಯೆ ಪ್ರಕರಣದಲ್ಲೂ ಆರೋಪಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...