ಬೆಂಗಳೂರು | ಉದ್ಯಮಿಗೆ ಬೆದರಿಕೆ, ಸುಲಿಗೆ ಆರೋಪ; ಇಬ್ಬರು CCB ಅಧಿಕಾರಿಗಳ ಬಂಧನ

Date:

ಅಕ್ರಮ ಗಾಂಜಾ ಮಾರಾಟ ಪ್ರಕರಣ ದಾಖಲಿಸುವುದಾಗಿ ಬೆದರಿಸಿ, ಸಿಸಿಬಿ ಅಧಿಕಾರಿಗಳು ಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ ಇಬ್ಬರು ಸಿಸಿಬಿ ಅಧಿಕಾರಿಗಳು ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಿಸಿಬಿ ವಿಶೇಷದಳ ವಿಭಾಗದ ಎಎಸ್ಐ ಸಗೀರ್ ಅಹ್ಮದ್, ಹೆಡ್ ಕಾನ್‌ಸ್ಟೆಬಲ್ ಯತೀಶ್ ಮತ್ತು ಆಟೋ ಚಾಲಕ ಸಮೀರ್ ಎಂದು ಹೆಸರಿಸಲಾಗಿದೆ. ಮೂವರು ಬಂಧಿತ ಆರೋಪಿಗಳು ರಿಯಲ್ ಎಸ್ಟೇಟ್ ಉದ್ಯಮಿ ನಾಗಾರ್ಜುನ ಗಣೇಶ್ ಎಂಬವರಿಗೆ ಬೆದರಿಕೆವೊಡ್ಡಿ, ಹಣ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಉದ್ಯಮಿ ನಾಗಾರ್ಜುನ ಗಣೇಶ್ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನವರಿ 5ರಂದು ಜಯನಗರದಲ್ಲಿ ನಾನು ಕಾರಿನಲ್ಲಿ ತೆರಳುತ್ತಿದ್ದೆ. ಈ ವೇಳೆ, ನನ್ನನ್ನು ಆರೋಪಿ ಅಧಿಕಾರಿಗಳು ತಡೆದರು. ‘ಕಾರಿನಲ್ಲಿ ಗಾಂಜಾವಿರುವ ಬಗ್ಗೆ ಮಾಹಿತಿಯಿದೆ. ಪರಿಶೀಲಿಸಬೇಕು’ ಎಂದರು. ಈ ವೇಳೆ, ನನ್ನ ಬ್ಯಾಗ್​ನಲ್ಲಿದ್ದ 4 ಲಕ್ಷ ರೂ. ಹಣ ನೋಡಿದ ಅವರು, ಆ ಹಣ ಕೊಡದಿದ್ದರೆ, ಗಾಂಜಾ ಸಾಗಾಟದ ಸುಳ್ಳು ಕೇಸ್ ಹಾಕುತ್ತೇವೆಂದು ಬೆದರಿಕೆವೊಡ್ಡಿ, ಹಣ ಕಸಿದುಕೊಂಡರು. ಅಧಿಕಾರಿಗಳ ಕೃತ್ಯದಲ್ಲಿ ಆಟೋ ಚಾಲಕ ಕೂಡ ಭಾಗಿಯಾಗಿದ್ದಾನೆ” ಎಂದು ದೂರುದಾರರು ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಪರಿಶೀಲಿಸಿದ್ದಾರೆ. ಬಳಿಕ, ಮೂವರನ್ನೂ ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...