ಬೆಂಗಳೂರು | ದರ್ಶನ್ ಕೊಲೆ: ಪೊಲೀಸರಿಂದಲೇ ಕೃತ್ಯ – ಆರೋಪ; ಸಿಐಡಿ ತನಿಖೆಗೆ ಪ್ರಕರಣ

Date:

ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್‌ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಆತನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

ಬೆಂಗಳೂರಿನ ವಿವೇಕನರದ ಸೊಣ್ಣೆನಹಳ್ಳಿ ನಿವಾಸಿಯಾಗಿರುವ ದರ್ಶನ್‌ನನ್ನ (23) ನವೆಂಬರ್ 12ರಂದು ಪೊಲೀಸರು ಅಕ್ರಮವಾಗಿ ಬಂಧಿಸಿಟ್ಟಿದ್ದರು. ಸುಮಾರು ಮೂರು ದಿನಗಳ ಕಾಲ ವಿವೇಕನಗರ ಪೊಲೀಸ್‌ ಠಾಣೆಯಲ್ಲಿ ಕೂಡಿಹಾಕಿದ್ದರು. ಬಳಿಕ, ಆತನನ್ನು ರಿಯಾಬ್ ಸೆಂಟರ್‌ಗೆ ಸೇರಿಸಿದ್ದರು ಎಂದು ಆರೋಪಿಸಲಾಗಿದೆ. ರಿಯಾಬ್‌ ಸೆಂಟರ್‌ಗೆ ಸೇರಿದ ಕೆಲವೇ ದಿನಗಳಲ್ಲಿ ದರ್ಶನ್‌ ಸಾವನ್ನಪ್ಪಿದ್ದಾರೆ.

ದರ್ಶನ್‌ ಸಾವು ಸಾಮಾನ್ಯ ಸಾವಲ್ಲ. ಅದು ಕೊಲೆ. ಪೊಲೀಸರೇ ಆತನನ್ನು ಕೊಂಡಿದ್ದಾರೆ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ. ವಿವೇಕನಗರ ಪೊಲೀಸ್‌ ಠಾಣೆಯ ಪೊಲೀಸರವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ದಿನಗಳ ದರ್ಶನ್‌ನನ್ನು ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಪೊಲೀಸರು, ಆತನ ಮೇಲೆ ಲಾಠಿ, ಪೈಪ್​ನಿಂದ ಹಲ್ಲೆ ನಡೆಸಿದ್ದರು. ಈ ಹಲ್ಲೆಯನ್ನು ಮರೆಮಾಚಲು ರಿಯಾಬ್ ಸೆಂಟರ್​ಗೆ ಸೇರಿಸಿದ್ದರು. ಆದರೆ, ರಿಯಾಬ್ ಸೆಂಟರ್‌ನಲ್ಲಿಯೂ ಆತನಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ, ರಿಯಾಬ್ ಸೆಂಟರ್‌ಗೆ ಸೇರಿದ ಎಂಟೇ ದಿನಗಳಲ್ಲಿ ದರ್ಶನ್‌ ಸಾವನ್ನಪ್ಪಿದ್ದಾರೆ. ಇದೊಂದು ಕೊಲೆ” ಎಂದು ದರ್ಶನ್‌ ಪೋಷಕರು ಆರೋಪಿಸಿರುವುದಾಗಿ ‘ಟಿವಿ9 ಕನ್ನಡ’ ವರದಿ ಮಾಡಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವೇಕನಗರ ಪೊಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್, ಪವನ್ ಸೇರಿದಂತೆ ನಾಲ್ಕು ಪೊಲೀಸರು ಮತ್ತು ಯೂನಿಟಿ ರಿಯಾಬ್ ಸೆಂಟರ್ ಮಾಲೀಕರ ವಿರುದ್ಧ ಕೊಲೆ ಮತ್ತು ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಕಸ್ಟಡಿಯಲ್ ಡೆತ್‌ ಎಂದು ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...