ಬೆಂಗಳೂರು | ವೇತನ ಪಾವತಿ ವಿಳಂಬ: ಬಿಬಿಎಂಪಿಯ 30ಕ್ಕೂ ಹೆಚ್ಚು ಮಾರ್ಷಲ್‌ಗಳು ರಾಜೀನಾಮೆ

Date:

ಹಲವು ತಿಂಗಳುಗಳಿಂದ ಬಿಬಿಎಂಪಿ ವೇತನ ಪಾವತಿ ಮಾಡದೆ, ವಿಳಂಬ ಮಾಡುತ್ತಿರುವ ಕಾರಣ, ಬೇಸತ್ತ 30ಕ್ಕೂ ಹೆಚ್ಚು ‘ಲೇಕ್‌’ (ಕರೆ) ಮಾರ್ಷಲ್‌ಗಳು ತಮ್ಮ ಹುದ್ದೆಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಲ್ಲಿ ಕಾವಲು ಕಾಯುತ್ತಿದ್ದ ಮಾರ್ಷಲ್‌ಗಳು ರಾಜೀನಾಮೆ ನೀಡಿದ್ದು, ತಮ್ಮ ಹುದ್ದೆಗಳನ್ನು ತೊರೆದಿದ್ದಾರೆ.

ಈ ಹಿಂದೆ, ಉಭಯ ಕೆರೆಗಳಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಕೆರೆಗಳು ಭಾರೀ ಕಲುಷಿತಗೊಂಡಿದ್ದವು. ಕೆರೆ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಶ ಅಸಮಾಧಾನ ವ್ಯಕ್ತಪಡಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸರ್ಕಾರಕ್ಕೆ ಭಾರೀ ದಂಡ ವಿಧಿಸಿತ್ತು. ಕೆರೆಗಳನ್ನು ಪುನರುಜ್ಜೀವನಗೊಳಿಸುವ ಜವಾಬ್ದಾರಿಯನ್ನು ಬಿಡಿಎಗೆ ನೀಡಿತ್ತು. ಜೊತೆಗೆ, ಕೆರೆಗಳ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಸಿ, ಭದ್ರತೆ ನೀಡುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಿತ್ತು.

ಅದರಂತೆ, ವರ್ತೂರು ಮತ್ತು ಬೆಳ್ಳಂದೂರು ಕೆರೆಗಳಿಗೆ ತಲಾ 25 ಮಂದಿ ಮಾರ್ಷಲ್‌ಗಳನ್ನು ಕಾವಲಿಗಾಗಿ ಬಿಬಿಎಂಪಿ ನೇಮಿಸಿತ್ತು. ಆದರೆ, ಅವರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಬಿಬಿಎಂಪಿ ವೇತನ ಪಾವತಿ ಮಾಡಿಲ್ಲ ಎಂದು ಹೇಳಲಾಗಿದೆ. ಹೀಗಾಗಿ, 30ಕ್ಕೂ ಹೆಚ್ಚು ಮಾರ್ಷಲ್‌ಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಲ್ಲಿ ಸುಮಾರು 50 ಮಾರ್ಷಲ್‌ಗಳು ದಿನ 24 ಗಂಟೆಯೂ ಎರಡು ಪಾಳಿಯಲ್ಲಿ ಕಾವಲು ಕಾಯುತ್ತಿದ್ದರು. ಆದರೆ, ಈಗ ಅವರಲ್ಲಿ ಅರ್ಧಕ್ಕೂ ಹೆಚ್ಚು ಮಾರ್ಷಲ್‌ಗಳು ರಾಜೀನಾಮೆ ನೀಡಿದ್ದು, ಕೆರೆಗಳಲ್ಲಿ ಕಾವಲು ಕಾಯುವವರು ಇಲ್ಲದಂತಾಗಿದೆ.

“ಕೆರೆಯ ಬಫರ್ ವಲಯವನ್ನು ವಲಸಿಗರು ಆಕ್ರಮಿಸಿಕೊಂಡಿದ್ದಾರೆ. ಕೆರೆ ಸುತ್ತಲಿನ ಹಲವು ಪ್ರದೇಶಗಳ ಜನರು ಕಸವನ್ನು ಕೆರೆ ಪ್ರದೇಶದಲ್ಲಿ ಸುರಿಯುತ್ತಾರೆ. ಕೆರೆ ಮಾರ್ಷಲ್‌ಗಳು ಇದನ್ನು ತಡೆಯುತ್ತಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಮಾರ್ಷಲ್‌ಗಳ ಸಂಖ್ಯೆ ಕಡಿಮೆಯಾಗಿದೆ” ಎಂದು ವರ್ತೂರು ಕೆರೆ ಬಳಿಯ ನಿವಾಸಿ ಜಗದೀಶ್ ರೆಡ್ಡಿ ಹೇಳಿದ್ದಾರೆ.

“ಜನವರಿಯಲ್ಲಿ ಎನ್‌ಸಿಸಿ ಹಿನ್ನೆಲೆಯುಳ್ಳವರನ್ನು ಮಾರ್ಷಲ್‌ಗಳಾಗಿ ನೇಮಕ ಮಾಡಿಕೊಳ್ಳಲಾಯಿತು. 20,000 ರೂ. ವೇತನ ನೀಡುವುದಾಗಿ ಹೇಳಿದ್ದರು. ಆದರೆ, 13,000 ರೂ. ಮಾತ್ರವೇ ನೀಡಲಾಗುತ್ತಿದೆ. ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಅಲ್ಲದೆ, ವೇತನವನ್ನೂ ಸರಿಯಾಗಿ ನೀಡುತ್ತಿಲ್ಲ” ಎಂದು ರಾಜೀನಾಮೆ ನೀಡಿರುವ ಮಾರ್ಷಲ್‌ವೊಬ್ಬರು ಹೇಳಿರುವುದಾಗಿ ‘ಕನ್ನಡಪ್ರಭ’ ವರದಿ ಮಾಡಿದೆ.

“ವಿಳಂಬವು ಕೆರೆ ವಿಭಾಗದ ವೇತನ ಪ್ಯಾಕೇಜ್‌ನಿಂದ ಉಂಟಾಗಿದೆ. ಮಾರ್ಷಲ್‌ಗಳಿಗೆ ಈ ಹಿಂದೆ, ಘನತ್ಯಾಜ್ಯ ನಿರ್ವಹಣಾ ಇಲಾಖೆಯು ವೇತನ ಪಾವತಿ ಮಾಡುತ್ತಿತ್ತು. ಆದರೆ, ಈಗ ಕೆರೆ ನಿರ್ವಹಣೆ ಮಾಡುವ ಇಲಾಖೆಗೆ ಹಸ್ತಾಂತರಿಸಲಾಗಿದೆ. ಜವಾಬ್ದಾರಿ ಹಸ್ತಾಂತರದ ಕಾರಣಕ್ಕಾಗಿ ವೇತನ ಪಾವತಿ ವಿಳಂಬವಾಗಿದೆ” ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...