ಬೆಂಗಳೂರು | ದಟ್ಟ ಮಂಜು; 41 ವಿಮಾನ ಹಾರಾಟ ವಿಳಂಬ

Date:

ದಟ್ಟಮಂಜಿನ ಕಾರಣದಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ 5: 30ರಿಂದ ಕನಿಷ್ಟ 41 ವಿಮಾನಗಳ ಹಾರಾಟ ವಿಳಂಬವಾಗಿದೆ.

ಗುರುವಾರ ಬೆಳಿಗ್ಗೆ ನಗರದಲ್ಲಿ ದಟ್ಟ ಮಂಜು ಆವರಿಸಿತ್ತು. ವಿಮಾನ ನಿಲ್ದಾಣದ ಸುತ್ತಲಿನ ದಟ್ಟವಾದ ಮಂಜು ಸ್ಪಷ್ಟವಾದ ಗೋಚರತೆಯನ್ನು ಕಡಿಮೆ ಮಾಡಿತ್ತು. ಹೀಗಾಗಿ, ವಿಮಾನಗಳ ಕಾರ್ಯಾಚರಣೆ ವಿಳಂಬವಾಯಿತು. ಹವಾಮಾನ ಇಲಾಖೆಯೂ ಸಾಧಾರಣ ಮಳೆಯ ಎಚ್ಚರಿಕೆಯನ್ನು ನೀಡಿತ್ತು.

ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟವಾದ ಮಂಜು ಮತ್ತು ಮೋಡ ಆವರಿಸಿಕೊಂಡಿದ್ದರಿಂದ, ವಾತಾವರಣವು ಕತ್ತಲೆಯಂತೆ ಬಾಸವಾಗುತ್ತಿತ್ತು. ಪರಿಣಾಮ, ಪೈಲಟ್‌ಗಳು ಮುಂಜಾನೆಯ ಸಮಯದಲ್ಲಿ ಸುರಕ್ಷಿತವಾಗಿ ಕಾರ್ಯನಿರ್ವಹಿಸಲು ಹೆಣಗಾಡುವಂತಾಗಿತ್ತು.ಬೆಳಗ್ಗೆ 10 ಗಂಟೆಯವರೆಗೂ ಹವಾಮಾನವು 20°C ತಾಪಮಾನವನ್ನು ಹೊಂದಿತ್ತು. ಜೊತೆಗೆ, ಗೋಚರತೆಯು 1,500 ಮೀಟರ್‌ಗಳಿಗೆ ಸೀಮಿತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾತಾವರಣೆದಲ್ಲಿ ಗಾಳಿಯು ಗಂಟೆಗೆ 14 ಕಿ.ಮೀ ವೇಗದಲ್ಲಿ ಬೀಸುತ್ತಿತ್ತು. ಮಂಜು ಕವಿದ ವಾತಾವರಣವಿತ್ತು. 800 ಅಡಿ ಮತ್ತು 1,200 ಅಡಿ ಎತ್ತರಗಳಲ್ಲಿ ಚದುರಿದ ಮೋಡಗಳಿದ್ದವು.

ಈ ಸುದ್ದಿ ಓದಿದ್ದೀರಾ? ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆ; ಚಳಿ ಅಬ್ಬರ

ಸಮಯ ದೂಡಿದಂತೆ ವಾತಾವರಣದಲ್ಲಿ ಸುಧಾರಣೆ ಕಂಡುಬರುವ ನೀರಿಕ್ಷೆಯಿದ್ದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಹವಾಮಾನವನ್ನು ನೀರಿಕ್ಷಿಸಲಾಗಿದೆ. ದಿನದ ತಾಪಮಾನ 18°C ​​ಮತ್ತು 28°C ನಡುವೆ ಇರಬಹುದು ಎಂದು ಊಹಿಸಲಾಗಿದೆ.

ದಟ್ಟ ಮಂಜಿನಿಂದಾಗಿ ಉಂಟಾದ ಈ ಅಡಚಣೆಯು ಅಂತಾರಾಷ್ಟ್ರೀಯ ಸಂಚಾರದ ಮೇಲೆ ಪರಿಣಾಮ ಬೀರಿದೆ. ಇದು ಇತ್ತೀಚಿನ ದಿನಗಳಲ್ಲಿ ನಡೆದ ಮತ್ತೊಂದು ಘಟನೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...