ಬೆಂಗಳೂರು | ಮಗಳ ಸಾವು: ಎಲ್ಲೆಲ್ಲೂ ಲಂಚದ ಪೆಡಂಭೂತ ಎದುರಿಸಿದ ಮಾಜಿ ಹಣಕಾಸು ಅಧಿಕಾರಿ

Date:

ತಮ್ಮ ಏಕೈಕ ಮಗಳನ್ನು ಕಳೆದುಕೊಂಡು ದುಃಖವನ್ನು ಎದುರಿಸುತ್ತಿದ್ದ ಬೆಂಗಳೂರಿನ ನಿವೃತ್ತ ‘ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್’ (ಬಿಪಿಸಿಎಲ್) ಅಧಿಕಾರಿಯೊಬ್ಬರು ಹಂಚಿಕೊಂಡಿದ್ದ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ. ಮಗಳ ಸಾವಿಗೆ ಸಂಬಂಧಿಸಿದಂತೆ ಕೆಲವು ಔಪಚಾರಿಕ ಕೆಲಸಗಳನ್ನು ಮುಗಿಸುವಾಗ ಎಲ್ಲ ಹಂತದಲ್ಲಿಯೂ ಅಧಿಕಾರಿಗಳ ಭ್ರಷ್ಟಾಚಾರ ಮತ್ತು ನಿರಾಸಕ್ತಿಯ ಕುರಿತು ಅವರು ವಿವರಿಸಿದ್ದಾರೆ.

ಬಿಪಿಸಿಎಲ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅವರ 34 ವರ್ಷದ ಮಗಳು ಅಕ್ಷಯ, 2025ರ ಸೆಪ್ಟೆಂಬರ್ 18ರಂದು ಮೆದುಳಿನ ರಕ್ತಸ್ತಾವದಿಂದಾಗಿ ಮನೆಯಲ್ಲಿ ನಿಧನರಾದರು. ಆಕೆಯ ಸಾವಿನ ಬಳಿಕ ಅಗತ್ಯ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಮತ್ತು ಅಗತ್ಯ ದಾಖಲೆಗಳನ್ನು ಪಡೆಯಲು ಆ್ಯಂಬುಲೆನ್ಸ್ ನಿರ್ವಾಹಕರು ಮತ್ತು ಪೊಲೀಸ್ ಅಧಿಕಾರಿಗಳಿಂದ ಹಿಡಿದು ಸ್ಮಶಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯ ಸಿಬ್ಬಂದಿಯವರೆಗೆ ಬಹುತೇಕ ಎಲ್ಲರಿಗೂ ಲಂಚ ನೀಡಬೇಕಾಯಿತು ಎಂದು ಬರೆದುಕೊಂಡಿದ್ದಾರೆ.

“ಇತ್ತೀಚೆಗೆ ನನ್ನ ಏಕೈಕ ಮಗಳು 34ನೇ ವಯಸ್ಸಿನಲ್ಲಿ ಮೃತಪಟ್ಟರು. ಅವರ ಮೃತದೇಹ ಸಾಗಿಸಲು ಆ್ಯಂಬುಲೆನ್ಸ್‌ ಸಿಬ್ಬಂದಿ, ಎಫ್‌ಐಆರ್ ದಾಖಲಿಸಲು ಪೊಲೀಸರು, ಮರಣೋತ್ತರ ವರದಿಗಾಗಿ ಪಡೆಯಲು ರಶೀದಿಗಾಗಿ ಸ್ಮಶಾನ ಸಿಬ್ಬಂದಿಗಳು ಹಾಗೂ ಮರಣ ಪ್ರಮಾಣಪತ್ರಕ್ಕಾಗಿ ಬಿಬಿಎಂಪಿ ಕಚೇರಿಯಲ್ಲಿ ಲಂಚ ಕೇಳಲಾಗುತ್ತಿದೆ. ಎಲ್ಲರೂ ನಗದು ರೂಪದಲ್ಲಿ ಹಣ ನೀಡುವಂತೆ ಬೇಡಿಕೆ ಇಡುತ್ತಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತನ್ನ ಏಕೈಕ ಮಗುವನ್ನು ಕಳೆದುಕೊಂಡ ತಂದೆಯ ಬಗ್ಗೆ ಇವೆರಲ್ಲರಿಗೂ ಯಾವುದೇ ಸಹಾನುಭೂತಿಯೂ ಇಲ್ಲ. ತುಂಬಾ ದುಃಖದ ಸ್ಥಿತಿ. ನನ್ನ ಬಳಿ ಹಣವಿತ್ತು, ನಾನು ಪಾವತಿಸಿದೆ. ಬಡವರು ಏನು ಮಾಡುತ್ತಾರೆ” ಎಂದು ಅವರು ಪ್ರಶ್ನಿಸಿದ್ದಾರೆ.

“ಕಸವನಹಳ್ಳಿಯ ಆಸ್ಪತ್ರೆಯಿಂದ ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆಗೆ ನನ್ನ ಮಗಳ ಮೃತದೇಹವನ್ನು ಸಾಗಿಸಲು ಆ್ಯಂಬ್ಯುಲೆನ್ಸ್ ಚಾಲಕ 3,000 ರೂ.ಗೆ ಬೇಡಿಕೆ ಇಟ್ಟಿದ್ದರು. ಎಫ್‌ಐಆರ್ ದಾಖಲಿಸಲು ಪೊಲೀಸರು ಲಂಚ ಕೇಳಿದರು. ನಾನು ಅವರಿಗೆ ಪೊಲೀಸ್‌ ಠಾಣೆಯ ಹೊರಗೆ ಹಣ ಪಾವತಿಸಿದೆ. ಪೊಲೀಸ್ ಅಧಿಕಾರಿಗಳಿಗೆ ಕುಟುಂಬವಿದೆಯೇ? ಈಗಾಗಲೇ ಆಘಾತಕ್ಕೆ ಒಳಗಾಗಿರುವ ವ್ಯಕ್ತಿಯ ಬಳಿ ಹಣ ಕೇಳುವ ಅವರಿಗೆ ಭಾವನೆ ಇದೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಬಿಎಂಪಿಯಿಂದ ಮರಣ ಪ್ರಮಾಣಪತ್ರವನ್ನು ಪಡೆಯಲು ನಾವು ಹೆಣಗಾಡಿದ್ದೇವೆ. ಐದು ದಿನಗಳ ಕಾಲ ಕಚೇರಿಗೆ ಅಲೆದಾಡಿದ ಬಳಿಕ ಅವರು ‘ಜಾತಿ ಸಮೀಕ್ಷೆ ನಡೆಯುತ್ತಿರುವುದರಿಂದ ಯಾರೂ ಲಭ್ಯವಿಲ್ಲ’ವೆಂದು ಹೇಳಿದರು. ಅಂತಿಮವಾಗಿ, ನಾನು ಹಿರಿಯ ಬಿಬಿಎಂಪಿ ಅಧಿಕಾರಿಯನ್ನು ಸಂಪರ್ಕಿಸಿದ್ದರಿಂದ ಪ್ರಮಾಣಪತ್ರ ದೊರೆಯಿತು. ಆದರೆ, ಅಧಿಕೃತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕಕ್ಕಿಂತ ಹೆಚ್ಚು ಹಣವನ್ನು ನಾನು ಪಾವತಿದ್ದರಿಂದಲೇ ಪ್ರಮಾಣಪತ್ರ ದೊರೆಯಿತು” ಎಂದು ಅವರು ವಿವರಿಸಿದ್ದಾರೆ.

ಈ ಪೋಸ್ಟ್‌ ಭಾರೀ ವೈರಲ್ ಆಗಿದೆ. ಆದಾಗ್ಯೂ, ಪೋಸ್ಟ್‌ಅನ್ನು ಈಗ ಶಿವಕುಮಾರ್ ಅಳಿಸಿದ್ದಾರೆ. ಆದರೆ, ಅವರ ಪೋಸ್ಟ್‌ ಸಂಬಂಧ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ, ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯ ಒಬ್ಬ ಪಿಎಸ್‌ಐ ಮತ್ತು ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ಅನ್ನು ಅಮಾನತು ಮಾಡಿದ್ದಾರೆ.

ಶಿವಕುಮಾರ್ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ವೈಟ್‌ಫೀಲ್ಡ್‌ ಡಿಸಿಪಿ, “ಶಿವಕುಮಾರ್ ಅವರ ಟ್ವೀಟ್‌ನಲ್ಲಿ ಉಲ್ಲೇಖಿಸಲಾದ ಘಟನೆಗೆ ಸಂಬಂಧಿಸಿದಂತೆ, ಬೆಳ್ಳಂದೂರು ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಅವರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ. ಯಾವುದೇ ಸಂದರ್ಭದಲ್ಲೂ ಪೊಲೀಸ್ ಇಲಾಖೆ ಇಂತಹ ಅಸಭ್ಯ ಅಥವಾ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...