ಬೆಂಗಳೂರು | ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್‌ನಿಂದ​ ಅತ್ಯಾಚಾರ; 8 ಅಪ್ರಾಪ್ತೆಯರ ಮೇಲೂ ಲೈಂಗಿಕ ದೌರ್ಜನ್ಯ

Date:

ಬ್ಯಾಡ್ಮಿಂಟನ್ ತರಬೇತುದಾರ​ನೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಲ್ಲದೆ, ಇತರ 8 ಅಪ್ರಾಪ್ತ ಬಾಲಕಿಯರ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.

ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ ಎಂಬಾತ ಪ್ರಕರಣದ ಆರೋಪಿ. ಈತ ಬ್ಯಾಡ್ಮಿಂಟನ್ ಕೋಚ್ ಆಗಿ ಕೆಲಸ ಮಾಡುತ್ತಿದ್ದು, ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ಬಾಲಕಿ ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್​ ಸೇರಿದ್ದಳು. ಆಕೆಯನ್ನು ಬೆದರಿಸಿ, ಪುಸಲಾಯಿಸಿದ್ದ ಕಾಮುಕ ಆರೋಪಿ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆವೊಡ್ಡಿದ್ದ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ, ಬಾಲಕಿಯ ಮೊಬೈಲ್‌ಅನ್ನು ಆಕೆಯ ಅಜ್ಜಿ ಪರಿಶೀಲಿಸಿದ್ದು, ಬಾಲಕಿ ತನ್ನ ನಗ್ನ ಚಿತ್ರಗಳನ್ನು ಆರೋಪಿ ಸುರೇಶ್‌ ಕಳಿಸಿರುವುದು ಕಂಡುಬಂದಿದೆ. ಬಳಿಕ, ಬಾಲಕಿಯನ್ನು ವಿಚಾರಸಲಾಗಿದ್ದು, ಆಕೆ ತನ್ನ ಕೋಚ್‌ ಎಸಗಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳ ಬಗ್ಗೆ ಹೇಳಿಕೊಂಡಿದ್ದಾಳೆ.

ಈ ವರದಿ ಓದಿದ್ದೀರಾ?: ಮೈಸೂರು | ಮಾಡದ ಅಪರಾಧಕ್ಕೆ 2 ವರ್ಷ ಜೈಲು: ಆದಿವಾಸಿಗಳ ಬದುಕಿನಲ್ಲಿ ಪೊಲೀಸರ ‘ಚೆಲ್ಲಾಟ’

ಬಾಲಕಿಯ ಪೋಷಕರು ಬ್ಯಾಡ್ಮಿಂಟನ್ ಕೋಚ್‌, ಕಾಮುಕ ಆರೋಪಿ ಸುರೇಶ್‌ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ಮೊಬೈಲ್‌ಅನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಸಂತ್ರಸ್ತ ಬಾಲಕಿಯ ನಗ್ನ ಚಿತ್ರಗಳನ್ನು ಮಾತ್ರವಲ್ಲದೆ, ಇತರ 8 ಬಾಲಕಿಯರ ನಗ್ನ ಚಿತ್ರಗಳು-ವಿಡಿಯೋಗಳು ಆತನ ಫೋನ್‌ನಲ್ಲಿ ಪತ್ತೆಯಾಗಿವೆ ಎಂದು ವರದಿಯಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, 8 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಆರೋಪಿಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಬಾಲಕಿಯರ ಹೇಳಿಕೆ ಪಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸದ್ಯ, ದೂರುದಾರ ಬಾಲಕಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...