ಬೆಂಗಳೂರು | ಅಂತರ್‌ಧರ್ಮೀಯ ಜೋಡಿಗೆ ಥಳಿಸಿ ಅನೈತಿಕ ಪೊಲೀಸ್‌ಗಿರಿ

Date:

ಎರಡು ವಿಭಿನ್ನ ಕೋಮಿನ ಜೋಡಿಗಳನ್ನು ಬೆದರಿಸಿ, ಹಲ್ಲೆಗೈದು, ದಾಂಧಲೆ ನಡೆಸಿ ಪುಂಡರ ಗುಂಪೊಂದು ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಪಾರ್ಕ್‌ವೊಂದರ ಹೊರಗೆ ಜೋಡಿಯು ಬೈಕ್‌ ಮೇಲೆ ಕುಳಿತಿದ್ದಾಗ, ಅಲ್ಲಿಗೆ ಬಂದ ಪುಂಡರ ಗುಂಪೊಂದು ದಾಂಧಲೆ ನಡೆಸಿದೆ. ಜೋಡಿಗೆ ಕಿರುಕುಳ ನೀಡಿದೆ. ಘಟನೆಯನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ; ಕಿತ್ತಳೆ ಬಣ್ಣದ ಟೀ ಶರ್ಟ್ ಧರಿಸಿದ್ದ ಯುವಕ ಮತ್ತು ಬುರ್ಖಾ ಧರಿಸಿದ್ದ ಯುವತಿಯು ಕೆಲವು ಯುವಕರೊಂದಿಗೆ ತೀವ್ರ ವಾಗ್ವಾದ ನಡೆಸುತ್ತಿರುವುದು ಕಂಡುಬಂದಿದೆ. ಪುಂಡರ ಗುಂಪಿನಲ್ಲಿದ್ದ ಒರ್ವ ಯುವತಿಯ ವೀಡಿಯೊವನ್ನು ಸೆರೆಹಿಡಿಯುತ್ತಿರುವುದು ಕೂಡ ಸರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾನು ಇರುವ ಸ್ಥಳದ ಬಗ್ಗೆ ತನ್ನ ಪೋಷಕರಿಗೆ ಮಾಹಿತಿ ಇದೆಯೇ ಎಂದು ಯುವತಿಯನ್ನು ಪುಂಡರ ಗುಂಪಿನಲ್ಲಿದ್ದವರು ಪ್ರಶ್ನಿಸಿದ್ದಾರೆ. ಬುರ್ಖಾ ಧರಿಸಿಕೊಂಡು ಪುರುಷನೊಂದಿಗೆ ಕುಳಿತಿರುವುದಕ್ಕೆ ನಿಮಗೆ ನಾಚಿಕೆಯಾಗುತ್ತಿಲ್ಲವೇ ಎಂದು ನಿಂದಿಸಿದ್ದಾರೆ. ಅಲ್ಲದೆ, ಯುವಕನನ್ನು ಬೇರೆ ಧರ್ಮದ ಯುವತಿಯೊಂದಿಗೆ ಯಾಕೆ ಸುತ್ತಾಡುತ್ತಿದ್ದೀಯಾ ಎಂದೂ ಪ್ರಶ್ನಿಸಿದ್ದಾರೆ. ಬಳಿಕ, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.

ಘಟನೆ ಬಳಿಕ, ಯುವತಿಯು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಲ್ಲಿ ಓರ್ವ ಅಪ್ರಾಪ್ತನೂ ಇದ್ದಾನೆ ಎಂದು ತಿಳಿದುಬಂದಿದೆ.

“ಜೋಡಿ ಸ್ಕೂಟರ್‌ನಲ್ಲಿ ಕುಳಿತಿದ್ದಾಗ ಅವರನ್ನು ಐದು ಮಂದಿ ಪ್ರಶ್ನಿಸಿದರು. ಹುಡುಗಿ ಬುರ್ಖಾ ಧರಿಸಿದ್ದಳು. ಯುವತಿಯಿಂದ ನಮಗೆ ದೂರು ಬಂದಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿದ್ದೇವೆ…. ನಾವು ತನಿಖೆ ಮುಂದುವರಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ ಗಿರೀಶ್ ಹೇಳಿದರು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ, “ರಾಜ್ಯದಲ್ಲಿ ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ. ಇದು ಬಿಹಾರ ಅಥವಾ ಉತ್ತರ ಪ್ರದೇಶ ಅಥವಾ ಮಧ್ಯಪ್ರದೇಶ ಅಲ್ಲ; ಕರ್ನಾಟಕ ಪ್ರಗತಿಪರ ರಾಜ್ಯ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...