ಬೆಂಗಳೂರು | ಕನ್ನಡಿಗರಿಗೆ ಅಪಮಾನ: ಜಿಎಸ್‌ ಹೋಟೆಲ್ ಸೀಜ್ – ಮ್ಯಾನೇಜರ್ ಬಂಧನ

Date:

‍ಬೆಂಗಳೂರಿನ ಕೋರಮಂಗಲದಲ್ಲಿರುವ ಜಿಎಸ್‌ ಸೂಟ್‌ ಹೋಟೆಲ್‌ನಲ್ಲಿ ಕನ್ನಡಿಗರನ್ನು ಅಶ್ಲೀಲವಾಗಿ ನಿಂದಿಸಿ ಡಿಸ್‌ಪ್ಲೇ ಬೋರ್ಡ್‌ ಹಾಕಿದ್ದ ಘಟನೆ ಶನಿವಾರ ನಡೆದಿತ್ತು. ಘಟನೆ ಬೆನ್ನಲ್ಲೇ ಹೋಟೆಲ್‌ಅನ್ನು ‘ಸೀಜ್’ ಮಾಡಿಲಾಗಿದ್ದು, ಹೋಟೆಲ್‌ನ ಮ್ಯಾನೇಜರ್‌ ಸರ್ಫಜ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಹೋಟೆಲ್‌ನ ಡಿಸ್‌ಪ್ಲೇಯಲ್ಲಿ ಹಿಂದಿ ಪದಗಳನ್ನು ಬಳಸಿ ಅಶ್ಲೀಲವಾಗಿ ನಿಂದಿಸಲಾಗಿತ್ತು. ಅದನ್ನು ವಿಡಿಯೋ ಮಾಡಿಕೊಂಡಿದ್ದ ಸ್ಥಳೀಯರು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹೋಟೆಲ್‌ ಬಳಸಿದ ಅಶ್ಲೀಲ ಪದಗಳು ಮತ್ತು ಕನ್ನಡಿಗರ ನಿಂದನೆಯು ಕನ್ನಡಿಗರನ್ನು ಕೆರಳಿಸಿತ್ತು. ಹೋಟೆಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಘಟನೆ ಬೆಳಕಿಗೆ ಬಂದ ಕೂಡಲೇ ಮಡಿವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮ್ಯಾನೇಜರ್‌ ಸರ್ಫರಾಜ್, ಸಿಬ್ಬಂದಿ ಅಬ್ದುಲ್ ಸಮದ್‌ನನ್ನು ಬಂಧಿಸಿದ್ದಾರೆ. ಹೋಟೆಲ್ ಮಾಲೀಕ ಜಮ್ಸದ್‌ ವಿರುದ್ಧವೂ ಎಫ್‌ಐಆರ್ ದಾಖಲಿಸಿದ್ದಾರೆ. ಡಿಸ್​ಪ್ಲೇ ಬೋರ್ಡ್ಅನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಸ್‌ಪ್ಲೇ ಬೋರ್ಡ್‌ ಡಿಜಿಟಲ್‌ ತಂತ್ರಜ್ಞಾನದ್ದಾಗಿದ್ದು, ಯಾರೋ ಕಿಡಿಗೇಡಿಗಳು ಡಿಸ್‌ಪ್ಲೇ ಬೋರ್ಡ್‌ನ ಕಂಟ್ರೋಲರ್‌ಅನ್ನು ಹ್ಯಾಕ್‌ ಮಾಡಿ, ಈ ರೀತಿ ಕೃತ್ಯ ಎಸಗಿದ್ದಾರೆ” ಎಂದು ಹೋಟೆಲ್ ಮಾಲೀಕ ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ಡಿಸ್‌ಪ್ಲೇ ಬೋರ್ಡ್‌ ಹ್ಯಾಕ್‌ ಆಗಿತ್ತೇ ಅಥವಾ ಹೋಟೆಲ್‌ನವರೇ ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿದ್ದಾರೆಯೇ ಎಂಬುದು ಗೊತ್ತಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...