ಬೆಂಗಳೂರು | ಭಾರೀ ಮಳೆಯಿಂದ ಮಣ್ಣು ಕುಸಿತ, ಓರ್ವ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Date:

ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ,

ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ಸಂಭವಿಸಿದೆ. ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ.

ಈ ಕುಸಿತದಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದರು ಎನ್ನಲಾಗಿದ್ದು, ಆಂಧ್ರಪ್ರದೇಶ ಮೂಲದ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆತನನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್ ಮೊದಲ ದಿನವೇ ಜೋರು ಮಳೆ ಸುರಿದಿದೆ. ಮಳೆಗಾಲದ ದಿನಗಳಿಗೆ ಹೋಲಿಸಿದ್ರೆ ಸೋಮವಾರ ಸಂಜೆ ಸುರಿದ ಮಳೆ ಬಿರುಸಾಗಿತ್ತು. ರಸ್ತೆಯಲ್ಲಿ ಜನ, ವಾಹನ ಸಂಚಾರ ಸಾಧ್ಯವಾಗದಷ್ಟು ಜೋರಿತ್ತು. ಮಿಂಚು ಗುಡುಗು ಕೂಡ ಇದ್ದು ಜನ ಭಯ ಭೀತರಾದರು. ವಾಹನ ಸವಾರರು ಮಳೆಯಲ್ಲಿ ಸಂಚಾರ ಮಾಡುವ ಧೈರ್ಯ ಮಾಡದೇ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಮರ, ಕಟ್ಟಡಗಳ ಬಳಿ ಆಶ್ರಯ ಪಡೆದಿದ್ದರು. ಇನ್ನೂ ಅಲ್ಲಲ್ಲಿ ಟ್ರಾಫಿಕ್ ದಟ್ಟಣೆ ಕೂಡ ಉಂಟಾಗಿತ್ತು.

ರಾಜಾಜಿನಗರ, ಟೌನ್ ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ ಸುತ್ತಮುತ್ತ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಸುತ್ತಮುತ್ತ, ಮಲ್ಲೇಶ್ವರಂ ರಸ್ತೆ, ಮಂತ್ರಿ ಮಾಲ್ ಯಲ್ಲಿ ಜೋರು ಮಳೆ ಉಂಟಾಗಿತ್ತು. ಅಲ್ಲದೇ ಬಿಬಿಎಂಪಿ ವಲಯ ಕಚೇರಿ ಮುಂದಿನ ರಸ್ತೆಯೇ ತುಂಬಿ ಹರಿಯುತ್ತಿದ್ದ ದೃಶ್ಯವೂ ಕಂಡುಬಂದಿತು. ಅಲ್ಲದೇ ಕೆ.ಆರ್ ಮಾರ್ಕೆಟ್, ಶಾಂತಿನಗರದಲ್ಲೂ ಜೋರು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು.

ಏಕಾಏಕಿ ಸುರಿದ ಮಳೆಯಿಂದಾಗಿ ಕೆಲ ಸಮಯದ ರಸ್ತೆಯಲ್ಲಿ 2 ರಿಂದ 3 ಅಡಿಯಷ್ಟು ನೀರು ಆವೃತವಾಗಿತ್ತು. ಅಲ್ಲಲ್ಲಿ ಚರಂಡಿ ನೀರು ತುಂಬಿ ಹರಿಯುತ್ತಿದ್ದರಿಂದ ದುರ್ವಾಸನೆ ಬೀರುತ್ತಿತ್ತು. ಇದು ವಾಹನ ಸವಾರರನ್ನೂ ಹೈರಾಣಾಗುವಂತೆ ಮಾಡಿತ್ತು. ಇನ್ನೂ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅವಾಂತರ ಸೃಷ್ಟಿಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...