ಬೆಂಗಳೂರು | ‘ವಾಲ್ಯೂಮ್’ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಪತ್ನಿ ಮೇಲೆ ಆ್ಯಸಿಡ್ ಎರಚಿದ ವಿಕೃತ ಪತಿ

Date:

ವಿಕೃತ ವ್ಯಕ್ತಿಯೊಬ್ಬ ಮೊಬೈಲ್‌ ಫೋನ್‌ನ ‘ವಾಲ್ಯೂಮ್’ ಕಡಿಮೆ ಮಾಡುವಂತೆ ಕೇಳಿದ ಪತ್ನಿಯ ಮೇಲೆ ಆ್ಯಸಿಡ್ ಎರಚಿ, ವಿಕೃತ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಚಿಕ್ಕಬಾಣಾವರ ಬಳಿಯ ಎನ್‌ಎಚ್‌ಎಂ ಲೇಔಟ್‌ನಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯು ಹೆಚ್ಚು ವಾಲ್ಯೂಮ್‌ ಇಟ್ಟುಕೊಂಡು ಸಂಗೀತ ಕೇಳುತ್ತಿದ್ದ. ರಾತ್ರಿಯ ವೇಳೆ ನಿದ್ರೆಗೆ ಅಡ್ಡಿಯಾಗುತ್ತಿದೆಯೆಂದು ವಾಲ್ಯೂಮ್ ಕಡಿಮೆ ಮಾಡುವಂತೆ ಆತನ ಪತ್ನಿ ಕೇಳಿದ್ದಾರೆ. ಅದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ಜಗಳದಿಂದ ಕುಪಿತಗೊಂಡ ದುರುಳ ಪತಿ, ಶೌಚಾಲಯದಲ್ಲಿದ್ದ ಆ್ಯಸಿಡ್‌ಅನ್ನು ತನ್ನ ಪತ್ನಿಯ ಮೇಲೆ ಎರಚಿದ್ದಾನೆ. ಘಟನೆಯಲ್ಲಿ ಮಹಿಳೆಯ ತಲೆ ಮತ್ತು ಮುಖದ ಮೇಲೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

“ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿರುವ ಮಹಿಳೆಯ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಆಕೆಯ ಪತಿ ಮದ್ಯ ಖರೀದಿಸಲು ಹಣ ಕೇಳಿದ್ದಾರೆ. ಆಕೆ ನಿರಾಕರಿಸಿದ್ದು, ಕಿರುಕುಳ ನೀಡಿ ಹಣ ಪಡೆದುಕೊಂಡಿದ್ದಾನೆ. ಕುಡಿದು ಮನೆಗೆ ಬಂದ ಆರೋಪಿ, ತನ್ನ ಮೊಬೈಲ್ ಫೋನ್‌ನಲ್ಲಿ ಹೆಚ್ಚಿನ ವಾಲ್ಯೂಮ್‌ನೊಂದಿಗೆ ಹಾಡು ಹಾಕಿದ್ದಾನೆ. ವಾಲ್ಯೂಮ್‌ಅನ್ನು ಕಡಿಮೆ ಮಾಡುವಂತೆ ಕೇಳಿದ ಪತ್ನಿಯ ಮೇಲೆ ದಾಳಿ ನಡೆಸಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಮಹಿಳೆ ಕೂಗಿಕೊಂಡಾಗ, ಆತ ಪರಾರಿಯಾಗಿದ್ಧಾನೆ. ನೆರೆಹೊರೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ತನಿಖೆ ನಡೆಯುತ್ತಿದೆ. ಆರೋಪಿಗಾಗಿ ಹುಡುಕಾಟವೂ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...