ಟೆಕ್ಕಿ ಆತ್ಮಹತ್ಯೆ | ಅತುಲ್ ಸುಭಾಷ್ ಪತ್ನಿ, ಆಕೆಯ ತಾಯಿ, ಸಹೋದರನ ಬಂಧನ

Date:

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಆತನ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾನನ್ನು ಬಂಧಿಸಿದ್ದಾರೆ.

ಡಿಸೆಂಬರ್ 9ರಂದು 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಬೆಂಗಳೂರಿನ ಮುನ್ನೆಕೊಳಲು ಎಂಬಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಡೆತ್‌ನೋಟ್ ಜೊತೆಗೆ ಸುದೀರ್ಘ ವಿಡಿಯೋ ರೆಕಾರ್ಡಿಂಗ್ ಮಾಡಿ ತನ್ನ ಸಾವಿಗೆ ಪತ್ನಿ, ಆಕೆಯ ತಾಯಿ, ಸಹೋದರ ಕಾರಣ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಅತುಲ್ ಸುಭಾಷ್ ಆತ್ಮಹತ್ಯೆ: ವಿಚ್ಛೇದನ/ಜೀವನಾಂಶ ಕಾನೂನುಗಳ ದುರುಪಯೋಗಕ್ಕೆ ಕಡಿವಾಣ ಅಗತ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಪತ್ನಿ ಸುಳ್ಳು ಪ್ರಕರಣ ದಾಖಲಿಸಿ ನಿರಂತರ ಚಿತ್ರಹಿಂಸೆ ನೀಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ದೂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ನಿಕಿತಾರನ್ನು ಹರಿಯಾಣದ ಗುರುಗ್ರಾಮದಲ್ಲಿ ಬಂಧಿಸಿದ್ದು ಉಳಿದವರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬಂಧಿಸಲಾಗಿದೆ. ಶನಿವಾರ ಬೆಳಗ್ಗೆ ಬಂಧನ ಪ್ರಕ್ರಿಯೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಮೂವರನ್ನೂ ಬೆಂಗಳೂರಿಗೆ ಕರೆತಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನು ತಮ್ಮ ಬಂಧನಕ್ಕೆ ಮುನ್ನವೇ ಮೂವರೂ ಕೂಡಾ ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...