ಬೆಂಗಳೂರು | ಸಮೀಕ್ಷೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ್ದ ಅಂಗಡಿ ಮಾಲೀಕನ ಬಂಧನ

Date:

ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಸಮೀಕ್ಷೆಗಾಗಿ ಬಂದಿದ್ದ ಶಿಕ್ಷಕಿಯನ್ನು ಅಂಗಡಿ ಮಾಲೀಕನೊಬ್ಬ ತನ್ನ ಮನೆಯ ಕಾಂಪೌಂಡ್‌ನಲ್ಲಿ ಕೂಡಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಅಂಗಡಿ ಮಾಲೀಕನನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೊಡಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕೋಟಿ ಹೊಸಹಳ್ಳಿ ನಿವಾಸಿ ಬಿ.ಆರ್. ಸಂದೀಪ್ ಬಂಧಿತ ಆರೋಪಿ. ಹೊಸಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುಶೀಲಮ್ಮ ಅವರು ಮನೆ-ಮನೆಗೆ ತೆರಳಿ ಜಾತಿ ಸಮೀಕ್ಷೆ ನಡೆಸುತ್ತಿದ್ದರು. ಅಂತೆಯೇ, ಸಂದೀಪ್ ಮನೆಗೂ ಸಮೀಕ್ಷೆ ನಡೆಸಲು ಬಂದಿದ್ದಾರೆ. ಈ ವೇಳೆ, ಮನೆಯಲ್ಲಿi ಸಂದೀಪ್‌ ಅವರ ತಾಯಿ ಇದ್ದರು. ಆಕೆಯ ಬಳಿ ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೇಳಿದ್ದಾರೆ. ಇದೇ ಸಮಯಕ್ಕೆ ಮನೆಗೆ ಬಂದ ಸಂದೀಪ್, ಶಿಕ್ಷಕಿಯೊಂದಿಗೆ ಜಗಳ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿ ಸಂದೀಪ್, ‘ನೀನು ಯಾವ ಕಂಪನಿಯಿಂದ ಬಂದಿದ್ದೀಯಾ? ಒಟಿಪಿ ಯಾಕೆ ತೆಗೆದುಕೊಳ್ಳುತ್ತಿದ್ದೀಯಾ’ ಎಂದು ಗಲಾಟೆ ಮಾಡಿದ್ದಾರೆ. ಶಿಕ್ಷಕಿ ತನ್ನ ಗುರುತಿನ ಚೀಟಿ ತೋರಿಸಿದರೂ, ಆರೋಪಿ ದಾಂಧಲೆ ನಡೆಸಿದ್ದಾರೆ. ಅಲ್ಲದೆ, ಶಿಕ್ಷಕಿಗೆ ಮನೆಯಿಂದ ಹೊರಹೋಗಲು ಬಿಡದೆ, ಮನೆಯ ಕಾಂಪೌಂಡ್‌ ಒಳಗೆ ಕೂಡಿ ಹಾಕಿ, ಬೀಗ ಹಾಕಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಗ್ವಾದದ ನಂತರ ಶಿಕ್ಷಕಿ ಸುಶೀಲಿಮ್ಮ ಪೊಲೀಸರಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗೇಟ್‌ ಬೀಗ ತೆಗೆಸಿ, ಶಿಕ್ಷಕಿಯನ್ನು ಹೊರಗೆ ಕರೆತಂದಿದ್ದಾರೆ. ಬಳಿಕ ಶಿಕ್ಷಕಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿ ಸಂದೀಪ್‌ನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆತನಿಗೆ ನ್ಯಾಯಾಲಯವು ಜಾಮೀನು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...