ಬೆಂಗಳೂರು | 2026-27ರ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಕಲ್ಯಾಣಕ್ಕೆ ಹೂಡಿಕೆ ಹೆಚ್ಚಿಸುವಂತೆ SIO ಮನವಿ

Date:

2026–27ರ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ, ಅಲ್ಪಸಂಖ್ಯಾತ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯನ್ನು ಗಣನೀಯವಾಗಿ ಹೆಚ್ಚಿಸಲು ಕರ್ನಾಟಕ ಸರ್ಕಾರಕ್ಕೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾ (SIO) ಸಮಗ್ರ ಮನವಿ ಪತ್ರವನ್ನು ಸಲ್ಲಿಸಿದೆ.

ಐದು ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿರುವ ಈ ಶಿಫಾರಸುಗಳನ್ನು ಎಸ್ಐಒ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯ್ಯಾನ್ ಅವರು ಅಧಿಕೃತವಾಗಿ ಸಲ್ಲಿಸಿದರು. ಶಿಕ್ಷಣವು ರಾಷ್ಟ್ರ ನಿರ್ಮಾಣದ ಮೂಲಾಧಾರವಾಗಿದ್ದು, ಸಮಾನ ಹಂಚಿಕೆ ಮತ್ತು ಕಟ್ಟುನಿಟ್ಟಿನ ಉತ್ತರದಾಯಿತ್ವ ಅಗತ್ಯವೆಂದು ಅವರು ಒತ್ತಿಹೇಳಿದರು.

ಎಸ್ಐಒ ಕರ್ನಾಟಕದ ಪ್ರಕಾರ, 2025–26ರಲ್ಲಿ ಕರ್ನಾಟಕವು ತನ್ನ ಒಟ್ಟು ಬಜೆಟ್‌ನ 10.8% ಹಣವನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ಇದು ಇತರ ಕೆಲವು ರಾಜ್ಯಗಳಿಗಿಂತ ಉತ್ತಮವಾದ ಹಂಚಿಕೆಯಾದರೂ, ದೇಶದ ಸರಾಸರಿ ಹಂಚಿಕೆ ಸುಮಾರು 15% ಆಗಿದ್ದು, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಈ ಮಟ್ಟದ ಹಂಚಿಕೆಯನ್ನು ನಿರಂತರವಾಗಿ ಪಾಲಿಸುತ್ತಿವೆ. ರಾಜ್ಯವು ಈ ಅಂತರವನ್ನು ನಿವಾರಿಸಿ ಸಮಗ್ರ ಹಾಗೂ ಶಾಶ್ವತ ಅಭಿವೃದ್ಧಿಗೆ ಉತ್ತೇಜನ ನೀಡಬೇಕು ಎಂದು ಸಂಘಟನೆ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಶಿಕ್ಷಣ

ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದಲ್ಲಿ ಶಿಕ್ಷಕರ ತೀವ್ರ ಕೊರತೆ ಇರುವುದನ್ನು ಎಸ್ ಐ ಓ ಕರ್ನಾಟಕ ಗಮನಕ್ಕೆ ತಂದಿದೆ. ವಿಧಾನಸಭೆಯಲ್ಲಿ ಶಿಕ್ಷಣ ಸಚಿವರು ನೀಡಿದ ಅಧಿಕೃತ ಮಾಹಿತಿಯ ಪ್ರಕಾರ ಒಟ್ಟು 57,724 ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅವುಗಳಲ್ಲಿ ಪ್ರಾಥಮಿಕ ಶಾಲೆಗಳಲ್ಲಿ 45,590 ಹಾಗೂ ಪ್ರೌಢ ಶಾಲೆಗಳಲ್ಲಿ 12,134 ಹುದ್ದೆಗಳು ಖಾಲಿ ಇವೆ. ಈ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಹಾಗೂ ಶಿಕ್ಷಕರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಂಯೋಜಿತ ಮತ್ತು ಕಟ್ಟುನಿಟ್ಟಿನ ತರಬೇತಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಬೇಡಿಕೆ ಇಡಲಾಗಿದೆ.

ಪ್ರತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಮಾನಸಿಕ-ಸಾಮಾಜಿಕ ಅಗತ್ಯಗಳನ್ನು ನಿರಂತರವಾಗಿ ಗಮನಿಸಲು ಕೌನ್ಸಿಲರ್‌ಗಳನ್ನು ನೇಮಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಾರ್ಗದರ್ಶನ ಮತ್ತು ಸಮಾಲೋಚನಾ ಕೇಂದ್ರಗಳ ಸ್ಥಾಪನೆ ಅತ್ಯಂತ ಅಗತ್ಯವೆಂದು ತಿಳಿಸಲಾಗಿದೆ. ಅಲ್ಲದೆ, ಕಲ್ಯಾಣ ಕರ್ನಾಟಕದ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಮೂಲಭೂತ ಶಿಕ್ಷಣವನ್ನು ಬಲಪಡಿಸಲು ವಿಶೇಷ ಪೂರಕ ಶೈಕ್ಷಣಿಕ ಸಹಾಯ ಒದಗಿಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಶಾಲೆಗಳಲ್ಲಿ ಚಟುವಟಿಕೆ ಆಧಾರಿತ ಬೋಧನಾ ವಿಧಾನಗಳು ಹಾಗೂ ಸೃಜನಾತ್ಮಕ ಕೇಂದ್ರಗಳನ್ನು ಸ್ಥಾಪಿಸಬೇಕು. ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣೆ ಸಮಿತಿಗಳನ್ನು (SDMC) ಬಲಪಡಿಸಿ, ನಿಧಿಗಳ ಸಮರ್ಪಕ ಬಳಕೆ, ಸ್ವಚ್ಛತೆ, ಆರೋಗ್ಯ ಮತ್ತು ಶಿಕ್ಷಣ ಪರಿಸರವನ್ನು ಮೇಲ್ವಿಚಾರಣೆ ಮಾಡಬೇಕು. ಶಾಲಾ ಬಿಟ್ಟುಹೋಗುವಿಕೆ, ನಿರುದ್ಯೋಗ ಮತ್ತು ಶಿಕ್ಷಣದಿಂದ ದೂರವಾಗುವಿಕೆ ಸಮಸ್ಯೆಗಳನ್ನು ನಿವಾರಿಸಲು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ನಿರಂತರ ಶಿಕ್ಷಣ ಮಿಷನ್ ಸ್ಥಾಪಿಸಬೇಕು ಎಂದು ಸಂಘಟನೆ ಸೂಚಿಸಿದೆ.

ಉನ್ನತ ಶಿಕ್ಷಣ

ವಿಶ್ವವಿದ್ಯಾಲಯಗಳಿಗೆ ವೇತನ, ನಿವೃತ್ತಿವೇತನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಅಗತ್ಯವಿರುವ ಹಣವನ್ನು ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಖಾಲಿ ಬೋಧನಾ ಹುದ್ದೆಗಳನ್ನು ಈ ಆರ್ಥಿಕ ವರ್ಷದಲ್ಲಿಯೇ ಭರ್ತಿ ಮಾಡಬೇಕು ಹಾಗೂ ಅತಿಥಿ ಉಪನ್ಯಾಸಕರ ಮೇಲಿನ ಅತಿಯಾದ ಅವಲಂಬನೆಯನ್ನು ಕಡಿಮೆ ಮಾಡುವ ಸ್ಪಷ್ಟ ನೀತಿಯನ್ನು ರೂಪಿಸಬೇಕು ಎಂದು ಮನವಿ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ KEA ಉಪ ಕಚೇರಿಯನ್ನು ಸ್ಥಾಪಿಸಬೇಕು. ಪ್ರಸ್ತುತ ಬೀದರ್ ಸೇರಿದಂತೆ ಹಲವು ಭಾಗಗಳ ವಿದ್ಯಾರ್ಥಿಗಳು ಬೆಂಗಳೂರಿಗೆ ಸುಮಾರು 16 ಗಂಟೆಗಳ ಪ್ರಯಾಣ ಮಾಡಬೇಕಾಗುತ್ತಿರುವ ಸಂಕಷ್ಟವನ್ನು ಸಂಘಟನೆ ಉಲ್ಲೇಖಿಸಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಬೇಕು, ಖಾಸಗಿ ವಿಶ್ವವಿದ್ಯಾಲಯಗಳ ಶುಲ್ಕವನ್ನು ನಿಯಂತ್ರಿಸಬೇಕು ಹಾಗೂ ಕಲ್ಯಾಣ ಕರ್ನಾಟಕ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಅಲ್ಪಸಂಖ್ಯಾತ ಕಲ್ಯಾಣ – ವಿದ್ಯಾರ್ಥಿವೇತನ ಮತ್ತು ವಿದ್ಯಾರ್ಥಿ ಬೆಂಬಲ

ಅಲ್ಪಸಂಖ್ಯಾತ ಕಲ್ಯಾಣ ಕ್ಷೇತ್ರದಲ್ಲಿ, ಅಲ್ಪಸಂಖ್ಯಾತ ನಿರ್ದೇಶನಾಲಯದ ಅಡಿಯಲ್ಲಿ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳಿಗೆ ಅನ್ವಯಿಸುವ ಆದಾಯ ಮಿತಿ (ಪ್ರಸ್ತುತ ₹2 ಲಕ್ಷ) ಹಾಗೂ ಪ್ರತಿ ವಿದ್ಯಾರ್ಥಿಗೆ ನೀಡುವ ಅನುದಾನದ ಮೊತ್ತವನ್ನು ಹೆಚ್ಚಿಸಬೇಕು ಎಂದು ಎಸ್ ಐ ಓ ಕರ್ನಾಟಕ ಒತ್ತಾಯಿಸಿದೆ.

ಇದೇ ವೇಳೆ, ಹಿಂದಿನ ಸರ್ಕಾರ ನೀಡುತ್ತಿದ್ದ ಮಟ್ಟವನ್ನು ಪುನಃ ಜಾರಿಗೆ ತಂದು, ಪಿಎಚ್‌ಡಿ ಫೆಲೋಶಿಪ್ ಮೊತ್ತವನ್ನು ₹10,000ರಿಂದ ₹25,000ಕ್ಕೆ ಹೆಚ್ಚಿಸಬೇಕು, ಇದರಿಂದ ಸಂಶೋಧನಾ ವಿದ್ಯಾರ್ಥಿಗಳು ಆರ್ಥಿಕ ಒತ್ತಡವಿಲ್ಲದೆ ತಮ್ಮ ಅಧ್ಯಯನದಲ್ಲಿ ಗಮನಹರಿಸಲು ಸಾಧ್ಯವಾಗುತ್ತದೆ ಎಂದು ಮನವಿ ಮಾಡಲಾಗಿದೆ.

ಇದಲ್ಲದೆ, ಶಾಲಾ ಬಿಟ್ಟುಹೋಗುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ, ದೀರ್ಘಕಾಲದಿಂದ ಹೊರಗುಳಿದಿರುವ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಬೇಕು ಎಂದು ಬೇಡಿಕೆ ಇಡಲಾಗಿದೆ.

ಬಿ.ಎಡ್. ಮತ್ತು ಡಿ.ಎಡ್. ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹಧನವನ್ನು ಹೆಚ್ಚಿಸುವುದು, ವಸತಿ ಸೌಲಭ್ಯದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವಿದ್ಯಾರ್ಥಿವೇತನವನ್ನು ವಿಸ್ತರಿಸುವುದು ಹಾಗೂ KMDC ಅಡಿಯಲ್ಲಿ ನೀಡಲಾಗುವ ಅರಿವು ಶಿಕ್ಷಣ ಸಾಲಗಳನ್ನು ಬಡ್ಡಿರಹಿತಗೊಳಿಸಿ, ಅದರ ಅರ್ಹತೆಯನ್ನು ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೂ ವಿಸ್ತರಿಸುವುದು ಒಳಗೊಂಡಿದೆ. ಇದಲ್ಲದೆ, ಅಲ್ಪಸಂಖ್ಯಾತ ನಿರ್ದೇಶನಾಲಯದ ಮೂಲಕ ನೀಡಲಾಗುವ ವಿದೇಶಿ ವಿದ್ಯಾರ್ಥಿವೇತನವನ್ನು ಪದವಿ (UG) ಮತ್ತು ಪಿಎಚ್‌ಡಿ ವಿದ್ಯಾರ್ಥಿಗಳಿಗೂ ವಿಸ್ತರಿಸಿ, QS ಶ್ರೇಯಾಂಕದಲ್ಲಿ 500ರೊಳಗಿನ ವಿಶ್ವವಿದ್ಯಾಲಯಗಳನ್ನು ಮಾನದಂಡವಾಗಿ ಪರಿಗಣಿಸಬೇಕು ಎಂದು SIO ಕರ್ನಾಟಕ ಒತ್ತಾಯಿಸಿದೆ.

ಮೌಲಾನಾ ಆಜಾದ್ ರಾಷ್ಟ್ರೀಯ ಸಂಶೋಧನಾ ಫೆಲೋಶಿಪ್ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ರಾಜ್ಯ ಮಟ್ಟದ ಸಂಶೋಧನಾ ಫೆಲೋಶಿಪ್ ಯೋಜನೆಯನ್ನು ಆರಂಭಿಸಬೇಕು ಎಂದು ಮನವಿ ಮಾಡಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮಾಸಿಕ ಭತ್ಯೆ ಹಾಗೂ ಲ್ಯಾಪ್‌ಟಾಪ್ ಮತ್ತು ಶೈಕ್ಷಣಿಕ ಉಪಕರಣಗಳನ್ನು ಒಳಗೊಂಡ ಶಿಕ್ಷಣ ಕಿಟ್ ಒದಗಿಸುವ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರಸ್ತಾಪಿಸಲಾಗಿದೆ.

ನರ್ಸಿಂಗ್, ಪ್ಯಾರಾಮೆಡಿಕಲ್ ಹಾಗೂ ಸಂಬಂಧಿತ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಬೇಕು. CUET, CLAT, KCET, GATE, NET, NEET, KPSC ಮತ್ತು UPSC ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಜಿಲ್ಲಾ ಮಟ್ಟದಲ್ಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಲಾಗಿದೆ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಮತ್ತು ಹಾಸ್ಟೆಲ್ ಅಭಿವೃದ್ಧಿ

ಮೌಲಾನಾ ಆಜಾದ್ ಮಾದರಿ ಶಾಲೆಗಳು, ಅಲ್ಪಸಂಖ್ಯಾತ ವಸತಿ ಶಾಲೆಗಳು ಹಾಗೂ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ಮೂಲಸೌಕರ್ಯ, ಆರೋಗ್ಯ, ಆಹಾರ ಹಾಗೂ ಸಾರಿಗೆ ಸೌಲಭ್ಯಗಳನ್ನು ಸುಧಾರಿಸಲು ವಿಶೇಷ ನಿಧಿ ಮೀಸಲಿಡಬೇಕು. ಬಾಡಿಗೆ ಕಟ್ಟಡಗಳ ಬದಲು ಶಾಶ್ವತ ಕಟ್ಟಡಗಳನ್ನು ನಿರ್ಮಿಸಬೇಕು. ಖಾಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ,ಸಮಗ್ರ ಆರೋಗ್ಯ ಹಾಗೂ ಸಮಾಲೋಚನಾ ಶಿಕ್ಷಕರನ್ನು ನೇಮಿಸಬೇಕು ಎಂದು ಮನವಿ ಮಾಡಲಾಗಿದೆ.

ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳನ್ನು ಸೇರಿಸಬೇಕು. ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಪೋಸ್ಟ್-ಮೆಟ್ರಿಕ್ ಹಾಸ್ಟೆಲ್ ನಿರ್ಮಾಣಕ್ಕಾಗಿ ₹50 ಕೋಟಿ ಮೀಸಲಿಡಬೇಕು ಎಂದು ಬೇಡಿಕೆ ಇಡಲಾಗಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ

ಕರ್ನಾಟಕದಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಹಾಗೂ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಮಾದರಿಯಲ್ಲಿ ಅಲ್ಪಸಂಖ್ಯಾತ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಂಘಟನೆ ಶಿಫಾರಸು ಮಾಡಿದೆ. ದೇವನಹಳ್ಳಿ ಪ್ರದೇಶದಲ್ಲಿ ಈ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದು ಸೂಕ್ತವೆಂದು ಸೂಚಿಸಲಾಗಿದೆ. ಈ ಯೋಜನೆಗೆ ಹಂತ ಹಂತವಾಗಿ ₹3,000 ಕೋಟಿ ಮೀಸಲಿಡಬೇಕು ಎಂದು ಮನವಿ ಮಾಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆ

ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿವೇತನವನ್ನು ನೇರ ಹಣ ವರ್ಗಾವಣೆಯ ಮೂಲಕ ಸಮಯಕ್ಕೆ ನೀಡಬೇಕು. ವೃತ್ತಿಪರ ಕೋರ್ಸ್‌ಗಳಿಗೆ ಪೂರ್ಣ ಶುಲ್ಕ ಮರುಪಾವತಿ, ಜೀವನ ವೆಚ್ಚಕ್ಕೆ ಅನುಗುಣವಾಗಿ ಭತ್ಯೆ ಹೆಚ್ಚಳ ಹಾಗೂ ಹಾಸ್ಟೆಲ್ ಸೌಲಭ್ಯಗಳನ್ನು ಬಲಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಮೊದಲ ಪೀಳಿಗೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಹಾಗೂ ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಕಡಿಮೆ ದರದ ಇಂಟರ್‌ನೆಟ್ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ಥಣಿಸಂದ್ರದಲ್ಲೂ ಬುಲ್ಡೋಜರ್ ಸದ್ದು; ಮನೆಗಳನ್ನು ಉರುಳಿಸಿದ ಬಿಡಿಎ

ವೈದ್ಯಕೀಯ ಶಿಕ್ಷಣ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವೇತನ ಪಾವತಿ ಮತ್ತು ಶೈಕ್ಷಣಿಕ ನಿರಂತರತೆಯನ್ನು ಖಚಿತಪಡಿಸಲು ವಿಶೇಷ ಸ್ಥಿರೀಕರಣ ಯೋಜನೆಯನ್ನು ರೂಪಿಸಬೇಕು. ವೈದ್ಯಕೀಯ ನೇಮಕಾತಿ ಮಂಡಳಿಯ ಮೂಲಕ ಶಾಶ್ವತ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು ಹಾಗೂ ಕರ್ನಾಟಕ ವೈದ್ಯಕೀಯ ಸಂಶೋಧನಾ ಅನುದಾನ ಯೋಜನೆಯನ್ನು ಜಾರಿಗೆ ತರಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಡಿಜಿಟಲ್ ಇ-ಲೈಬ್ರರಿಯನ್ನು ಪುನಃ ಪ್ರಾರಂಭಿಸಿ ನವೀಕರಿಸಬೇಕು. ಕಲಬುರಗಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸ್ನಾತಕೋತ್ತರ ಸಲಹಾ ಕೇಂದ್ರಗಳನ್ನು ಸ್ಥಾಪಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಹಾಗೂ ಜಿಲ್ಲಾ ಆಸ್ಪತ್ರೆಗಳನ್ನು ತರಬೇತಿ ಆಸ್ಪತ್ರೆಗಳಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಲಾಗಿದೆ.

ಶಿಕ್ಷಣದಲ್ಲಿ ಹೂಡಿಕೆ ಮಾಡುವುದು ಸಮೃದ್ಧ, ಸಮಾನತೆ ಹೊಂದಿದ ಹಾಗೂ ಅಭಿವೃದ್ಧಿಯತ್ತ ಸಾಗುವ ಕರ್ನಾಟಕ ನಿರ್ಮಾಣಕ್ಕೆ ಅತ್ಯಂತ ಅಗತ್ಯವಾಗಿದೆ ಎಂದು ಎಸ್ ಐ ಓ ಕರ್ನಾಟಕ ಅಭಿಪ್ರಾಯಪಟ್ಟಿದೆ. ಇಂತಹ ಹೂಡಿಕೆಗಳು ಭವಿಷ್ಯದಲ್ಲಿ ಸಮಾಜದ ಸಮಗ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತವೆ ಎಂದು ಸಂಘಟನೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ
ಮೊಹಮ್ಮದ್ ಹಯ್ಯಾನ್
ರಾಜ್ಯ ಕಾರ್ಯದರ್ಶಿ, SIO ಕರ್ನಾಟಕ
+91 8088728380
(mailto:pr.kar@sio-india.org) ಇವರನ್ನು ಸಂಪರ್ಕಿಸಬಹುದಾಗಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...