ನವೆಂಬರ್‌ 4ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2025’: ಸಚಿವ ಡಾ. ಶರಣಪ್ರಕಾಶ ಪಾಟೀಲ

Date:

ಕರ್ನಾಟಕದ ಯುವಜನತೆ ಭವಿಷ್ಯದ ಉದ್ಯೋಗಾವಕಾಶಗಳಿಗೆ ಸಿದ್ಧರಾಗಲು, ರಾಜ್ಯ ಸರ್ಕಾರವು ದೃಢವಾದ ಕೌಶಲ್ಯಾಭಿವೃದ್ಧಿ ಪರಿಸರ ವ್ಯವಸ್ಥೆ ನಿರ್ಮಿಸಲು ಬದ್ಧವಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕುರಿತು ವಿವರ ಹಂಚಿಕೊಂಡರು.

ನವೆಂಬರ್ 4 ರಿಂದ 6ರವರೆಗೆ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ನಡೆಯಲಿರುವ ಈ ಶೃಂಗಸಭೆಯನ್ನು ರಾಜ್ಯದ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (KSDC) ಇದರ ಪ್ರಮುಖ ಆಯೋಜಕರಾಗಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜ್ಞಾನ ಪಾಲುದಾರರಾಗಿ ಮತ್ತು ಟ್ರಿಸ್ಕಾನ್ ಗ್ಲೋಬಲ್ ಬಿಸಿನೆಸ್ ಪ್ರೈವೇಟ್ ಲಿಮಿಟೆಡ್ ತಾಂತ್ರಿಕ ಆಯೋಜಕರಾಗಿ ಕಾರ್ಯ ನಿರ್ವಹಿಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚುನಾವಣಾ ಅಕ್ರಮ ಆಳಂದಕ್ಕೆ ಮಾತ್ರವಲ್ಲ, ದೇಶಕ್ಕೆ ವ್ಯಾಪಿಸಿದ ಅಕ್ರಮ ಜಾಲ: ಸಿಎಂ ಸಿದ್ದರಾಮಯ್ಯ

“ಮಾನವ ಸಂಪನ್ಮೂಲ 2030: ವಿಸ್ತರಣೆ, ವ್ಯವಸ್ಥೆಗಳು, ಸಮನ್ವಯ” ಎಂಬ ಶೀರ್ಷಿಕೆಯನ್ನು ಕೇಂದ್ರ ವಿಷಯವನ್ನಾಗಿಸಿಕೊಂಡ ಈ ಶೃಂಗಸಭೆ, ಹೊರಹೊಮ್ಮುವ ಕೌಶಲ್ಯಗಳು, ಸರ್ವರಿಗೂ ಕೌಶಲ್ಯ, ನಾವೀನ್ಯತೆ ಮತ್ತು ಜಾಗತಿಕ ಕೌಶಲ್ಯ ಎಂಬ ನಾಲ್ಕು ಪ್ರಮುಖ ಆಯಾಮಗಳ ಮೇಲೆ ಚರ್ಚೆಗಳನ್ನು ಕೇಂದ್ರೀಕರಿಸಿದೆ. ಹಸಿರು ವಲಯದ ಉದ್ಯೋಗಗಳು, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ ಹಾಗೂ ಇಂಡಸ್ಟ್ರಿ 4.0 ನಂತಹ ಬೆಳವಣಿಗೆಗಳಿಗೆ ಹೊಂದಿಕೊಳ್ಳುವ ಅಗತ್ಯ, ಮಹಿಳೆಯರು, ಗ್ರಾಮೀಣ ಯುವಕರು, ವಿಕಲಚೇತನರು ಮತ್ತು ಗಿಗ್ ಕಾರ್ಮಿಕರಿಗೆ ಸಮಾನ ಅವಕಾಶ, ಜಾಗತಿಕ ಉತ್ತಮ ಅಭ್ಯಾಸಗಳ ಅಳವಡಿಕೆ ಹಾಗೂ ಅಂತಾರಾಷ್ಟ್ರೀಯ ಉದ್ಯೋಗ ಅವಕಾಶಗಳ ಸಾಧ್ಯತೆಗಳನ್ನು ವಿಶ್ಲೇಷಿಸುವ ಗುರಿ ಹೊಂದಿದೆ ಎಂದು ಸಚಿವರು ತಿಳಿಸಿದರು.

ಈ ಶೃಂಗಸಭೆಯಲ್ಲಿ ನೀತಿ ರೂಪಕರಿಂದ ಹಿಡಿದು ಉದ್ಯಮ ಮುಖಂಡರು, ಶಿಕ್ಷಣ ಸಂಸ್ಥೆಗಳು, ನಾಗರಿಕ ಸಮಾಜ ಸಂಘಟನೆಗಳು ಮತ್ತು ಯುವಜನರು ಭಾಗವಹಿಸಲಿದ್ದು, ಕೌಶಲ್ಯ ಎಕ್ಸ್‌ಪೋ, ವೃತ್ತಿ ಮಾರ್ಗದರ್ಶನ ವಲಯ, ನೀತಿ ಸಂವಾದಗಳು, ದುಂಡುಮೇಜಿನ ಚರ್ಚೆಗಳು, ಜೊತೆಗೆ B2B, B2G ಮತ್ತು G2G ಸಂವಾದಗಳೂ ನಡೆಯಲಿವೆ. ಸ್ಕಿಲ್ಲಥಾನ್ 2025 ಎಂಬ ಯುವ ಕೇಂದ್ರೀಕೃತ ಸ್ಪರ್ಧೆ ಶೃಂಗಸಭೆಯ ವಿಶೇಷ ಆಕರ್ಷಣೆಯಾಗಿದ್ದು, ನವೆಂಬರ್ 5ರಂದು ಅಂತಿಮ ಸುತ್ತು ನಡೆಯಲಿದೆ. ಅದೇ ರೀತಿ ಕೌಶಲ್ಯ ಕರ್ನಾಟಕ ಪ್ರಶಸ್ತಿಗಳು 2025 ಮೂಲಕ ಕೌಶಲ್ಯಾಭಿವೃದ್ಧಿಗೆ ಶ್ರೇಷ್ಠ ಕೊಡುಗೆ ನೀಡಿದ ಸರ್ಕಾರಿ-ಖಾಸಗಿ ಸಂಸ್ಥೆಗಳು, ತರಬೇತುದಾರರು ಮತ್ತು ಜಿಲ್ಲೆಗಳ ಸಾಧನೆಗಳನ್ನು ಗೌರವಿಸಲಾಗುತ್ತದೆ.

ಈ ಶೃಂಗಸಭೆಯ ಫಲಿತಾಂಶವಾಗಿ ಕರ್ನಾಟಕ ರಾಜ್ಯ ಕೌಶಲ್ಯ ನೀತಿ 2025-2032ರ ಅನುಷ್ಠಾನಕ್ಕೆ ಪಾಲುದಾರರ ಏಕಮತ, ಭವಿಷ್ಯದ ಅಗತ್ಯಗಳ ಕುರಿತ ಶಿಫಾರಸುಗಳು, ಸರ್ಕಾರ-ಉದ್ಯಮ-ಶೈಕ್ಷಣಿಕ ವಲಯಗಳ ಪಾಲುದಾರಿಕೆ, ಯಶಸ್ವಿ ಮಾದರಿಗಳ ದಾಖಲಾತಿ ಹಾಗೂ ಯುವಕರಿಗೆ ಹೆಚ್ಚುವರಿ ಜಾಗತಿಕ ಉದ್ಯೋಗಾವಕಾಶಗಳನ್ನು ನಿರೀಕ್ಷಿಸಲಾಗಿದೆ ಎಂದು ಸಚಿವರು ವಿವರಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...